ಮೇಘದಂತೆಯೂ ತಮ್ಮ ಗೂಡುಗಳಿಗೆ ಹೋಗುವ ಪಾರಿವಾಳಗಳಂತೆಯೂ ಹಾರುವ ಇವರು ಯಾರು?
Cross references
ಭೂಮುಖದ ಮೇಲೆ ನೀರು ಕಡಿಮೆ ಆಯಿತೋ ಇಲ್ಲವೋ ಎಂದು ನೋಡುವಂತೆ ಒಂದು ಪಾರಿವಾಳವನ್ನು ಬಿಟ್ಟನು.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಆಗ ನೀನು ನನ ಗೋಸ್ಕರ ಇವರನ್ನು ಯಾರು ನನ್ನಲ್ಲಿ ಪಡೆದರು? ನಾನೋ, ಮಕ್ಕಳನ್ನು ಕಳೆದುಕೊಂಡವಳು, ಏಕಾಂತ ವಾಗಿ ಸೆರೆಯಲ್ಲಿದ್ದು ಹೊರಗೆ ಹಾಕಲ್ಪಟ್ಟವಳ ಹಾಗೆ ಇದ್ದೆನು. ಇವರನ್ನು ಸಾಕಿದವರು ಯಾರು? ಅವರೆ ಲ್ಲಿದ್ದರು ಎಂದು ಅಂದುಕೊಳ್ಳುವಿ.
ಸುತ್ತಲೂ ನಿನ್ನ ಕಣ್ಣುಗಳನ್ನೆತ್ತಿ ನೋಡು, ಅವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಾರೆ; ನಿನ್ನ ಕುಮಾ ರರು ದೂರದಿಂದ ಬರುವರು ನಿನ್ನ ಕುಮಾರ್ತೆಯರು ನಿನ್ನ ಪಕ್ಕೆಯಲ್ಲಿ ಪೋಷಣೆ ಹೊಂದುವರು.
ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದ ಅವರು ಬಂದು ದೇವರ ರಾಜ್ಯದಲ್ಲಿ ಕೂತುಕೊಳ್ಳುವರು.
ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ