ಇದಲ್ಲದೆ ಅನ್ಯರು ನಿಂತು ನಿಮ್ಮ ಮಂದೆಗಳನ್ನು ಮೇಯಿಸುವರು; ಪರರ ಪುತ್ರರು ನಿಮಗೆ ನೇಗಿಲು ಹೂಡುವವರೂ ದ್ರಾಕ್ಷೇತೋಟ ಕಾಯುವವರೂ ಆಗಿರುವರು.
Cross references
ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.
ಜನರು ಅವರನ್ನು ತೆಗೆದುಕೊಂಡು ತಮ್ಮ ಸ್ಥಳಕ್ಕೆ ಅವರನ್ನು ಬರಮಾಡುವರು. ಆಗ ಇಸ್ರಾಯೇಲಿನ ಮನೆತನದವರು ಕರ್ತನ ದೇಶದಲ್ಲಿ ಆ ಜನಾಂಗದ ವರನ್ನು ಗಂಡು ಹೆಣ್ಣಾಳುಗಳನ್ನಾಗಿ (ದಾಸದಾಸಿಯ ರನ್ನಾಗಿ) ಇಟ್ಟುಕೊಳ್ಳುವರು. ತಮ್ಮನ್ನು ಸೆರೆಹಿಡಿದ ವರನ್ನು ಸೆರೆಹಿಡಿಯುವರು, ತಮ್ಮನ್ನು ಹಿಂಸಿಸಿದವರ ಮೇಲೆ ಅಧಿಕಾರನಡಿಸುವರು.
ಇದಲ್ಲದೆ ಅನ್ಯರ ಮಕ್ಕಳು ನಿನ್ನ ಗೋಡೆಗಳನ್ನು ಕಟ್ಟುವರು; ಅವರ ಅರಸರು ಸಹ ನಿನಗೆ ಸೇವೆ ಮಾಡುವರು; ನನ್ನ ರೌದ್ರದಲ್ಲಿ ನಿನ್ನನ್ನು ಹೊಡೆದೆನು; ಆದರೆ ನನ್ನ ಕಟಾಕ್ಷದಲ್ಲಿ ನಿನ್ನನ್ನು ಕರುಣಿಸುವೆನು.
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.