Home Bibles ಯೆಶಾಯ 65:20 · ಕನ್ನಡ ಬೈಬಲ್
ಯೆಶಾಯ 65:20 · ಕನ್ನಡ ಬೈಬಲ್

ಅಲ್ಲಿ ಕೆಲವು ದಿವಸಗಳ ಕೂಸೂ ತನ್ನ ದಿನ ತುಂಬದ ಮುದುಕನೂ ಇನ್ನು ಇರುವದಿಲ್ಲ; ಯಾಕಂದರೆ ಮಗುವು ನೂರು ವರುಷದ್ದಾಗಿ ಸಾಯುವದು, ಆದರೆ ಪಾಪಿಷ್ಠನು ನೂರು ವರುಷದವನಾಗಿ ಶಾಪ ಹೊಂದು ವನು.

Cross references

ದ್ವಿತೀಯೋಪದೇಶಕಾಂಡ 4:40

ನಿನಗೂ ನಿನ್ನ ತರುವಾಯ ನಿನ್ನ ಮಕ್ಕಳಿಗೂ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಸದಾಕಾಲಕ್ಕೆ ಕೊಡುವ ಭೂಮಿಯ ಮೇಲೆ ನೀನು ಬಹಳ ದಿವಸವಿರುವ ಹಾಗೆಯೂ ನಾನು ಈಹೊತ್ತು ನಿನಗೆ ಆಜ್ಞಾಪಿಸುವ ಆತನ ನಿಯಮ ಗಳನ್ನೂ ಆಜ್ಞೆಗಳನ್ನೂ ಕಾಪಾಡು ಎಂದು ಹೇಳಿದನು.

ಯೋಬ 5:26

ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.

ಕೀರ್ತನೆಗಳು 34:12

ಒಳ್ಳೆಯದನ್ನು ನೋಡುವಂತೆ ದಿವಸಗಳನ್ನು ಪ್ರೀತಿ ಮಾಡಿ, ಜೀವವನ್ನು ಕೋರುವ ಮನುಷ್ಯನು ಯಾರು?

ಸಭಾಪ್ರಸಂಗಿ 8:12

ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.

ಸಭಾಪ್ರಸಂಗಿ 8:13

ಆದರೆ ದುಷ್ಟನಿಗೆ ಒಳ್ಳೆಯದಾಗುವದಿಲ್ಲ. ತನ್ನ ನೆರಳಿನ ಹಾಗಿ ರುವ ಅವನ ದಿವಸಗಳನ್ನು ಹೆಚ್ಚಿಸುವದಿಲ್ಲ; ಅವನು ದೇವರ ಮುಂದೆ ಭಯಪಡುವದಿಲ್ಲ.

ಯೆಶಾಯ 3:11

ಕೆಡುಕರಿಗೆ ಅಯ್ಯೋ! ಅವರಿಗೆ ಕೇಡೇ ಇರಲಿ; ಅವನ ಕೈಗಳ ಪ್ರತಿಫಲವು ಅವನಿಗೆ ಕೊಡಲ್ಪಡುವದು.

ಜೆಕರ್ಯ 8:4

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.

ರೋಮಾಪುರದವರಿಗೆ 2:5

ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.

Interlinear

Choose Theme