ಅವರು ಕಟ್ಟಿದ್ದ ರಲ್ಲಿ ಇನ್ನೊಬ್ಬರು ವಾಸಮಾಡುವದಿಲ್ಲ. ಅವರು ನೆಟ್ಟ ದ್ದನ್ನು ಇನ್ನೊಬ್ಬರು ತಿನ್ನುವದಿಲ್ಲ; ಮರದ ದಿನಗಳ ಹಾಗೆ ನನ್ನ ಜನರ ದಿನಗಳು ಇರುವವು; ನಾನು ಆದುಕೊಂಡವರು ತಮ್ಮ ಕೈಕೆಲಸವನ್ನು ಅನು ಭವಿಸುವರು.
Cross references
ಆದಾಮನು ಬದುಕಿದ ದಿನಗಳೆಲ್ಲಾ ಒಟ್ಟು ಒಂಭೈನೂರ ಮೂವತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ಮೆತೂಷೆಲಹನ ದಿನ ಗಳೆಲ್ಲಾ ಒಟ್ಟು ಒಂಭೈನೂರ ಅರುವತ್ತೊಂಭತ್ತು ವರುಷಗಳಾಗಿದ್ದವು; ತರುವಾಯ ಅವನು ಸತ್ತನು.
ನಾನು ಸಹ ಇದನ್ನು ನಿಮಗೆ ಮಾಡು ವೆನು; ನಿಮ್ಮ ಮೇಲೆ ಭೀತಿಯನ್ನೂ ಕಣ್ಣುಗಳನ್ನು ಕ್ಷೀಣಿಸು ವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗು ವಂತೆಯೂ ಮಾಡುವ ಕ್ಷಯರೋಗವನ್ನು ಚಳಿಜ್ವರ ವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ನಿಮ್ಮ ಬೀಜವನ್ನು ಬಿತ್ತುವಿರಿ; ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.
ಜೀವವನ್ನು ಅವನು ನಿನ್ನಿಂದ ಬೇಡಲು ನೀನು ಅವನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟೆ.
ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಕರ್ತನು ತನ್ನ ಬಲಗೈ ಯಿಂದಲೂ ತನ್ನ ತ್ರಾಣವುಳ್ಳ ತೋಳಿನಿಂದಲೂ ಆಣೆ ಯಿಟ್ಟುಕೊಂಡದ್ದೇನಂದರೆ--ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವದಿಲ್ಲ, ಮತ್ತು ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ಅನ್ಯರ ಪುತ್ರರು ಕುಡಿಯುವದಿಲ್ಲ;
ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.
ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.