ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
Cross references
ನೀನು ಅವುಗಳಿಗೆ ಅಡ್ಡಬೀಳಬಾರದು, ಸೇವಿಸಲೂ ಬಾರದು. ನಿನ್ನ ದೇವರಾದ ಕರ್ತನಾಗಿರುವ ನಾನು ರೋಷವುಳ್ಳ ದೇವರಾಗಿದ್ದೇನೆ. ನನ್ನನ್ನು ಹಗೆ ಮಾಡುವ ತಂದೆಗಳ ಅಪರಾಧವನ್ನು ಮಕ್ಕಳ ಮೇಲೆ ಯೂ ಮೂರನೆಯ ನಾಲ್ಕನೆಯ ತಲೆಗಳ ವರೆಗೂ ಬರಮಾಡುವೆನು.
ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು; ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.
ಇಗೋ, ಕರ್ತನ ಕೋಪವು ಇಸ್ರಾಯೇಲ್ ಕಡೆಗೆ ಇನ್ನೂ ಹೆಚ್ಚಾಗುವ ಹಾಗೆ ನೀವು ನಿಮ್ಮ ಪಿತೃಗಳಿಗೆ ಬದಲಾಗಿ ಪಾಪಿಗಳಾದ ಮನುಷ್ಯರ ಅಭಿವೃದ್ಧಿಯಾಗಿ ನಿಂತಿದ್ದೀರಿ.
ಅವನು ತನ್ನ ತಂದೆಯಾದ ಆಸನ ಎಲ್ಲಾ ಮಾರ್ಗ ಗಳಲ್ಲಿ ನಡೆದು ಅದನ್ನು ಬಿಟ್ಟು ತೊಲಗದೆ ಕರ್ತನ ಸಮ್ಮುಖದಲ್ಲಿ ಯಥಾರ್ಥವಾದದ್ದನ್ನು ಮಾಡಿದನು. ಆದರೂ ಉನ್ನತ ಸ್ಥಳಗಳನ್ನು ತೆಗೆದುಹಾಕಲಿಲ್ಲ; ಜನರು ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುತ್ತಿದ್ದರು.
ಯೆಹೋಷಾಫಾಟನು ಇಸ್ರಾ ಯೇಲಿನ ಅರಸನ ಸಂಗಡ ಸಮಾಧಾನ ಮಾಡಿ ಕೊಂಡನು.
ಉನ್ನತ ಸ್ಥಳಗಳು ಮಾತ್ರ ಕೆಡವಲ್ಪಡದೆ ಇದ್ದವು; ಜನರು ಉನ್ನತ ಸ್ಥಳಗಳ ಮೇಲೆ ಬಲಿಯನ್ನೂ ಧೂಪವನ್ನೂ ಅರ್ಪಿಸುತ್ತಾ ಇದ್ದರು.
ಆದರೆ ಉನ್ನತ ಸ್ಥಳಗಳನ್ನು ತೆಗೆದು ಹಾಕಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಯರ್ಪಿಸಿ ಧೂಪವನ್ನು ಸುಡುತ್ತಿದ್ದರು.
ಇವನು ಕರ್ತನ ಮನೆಗೆ ಎತ್ತರವಾದ ಬಾಗಲನ್ನು ಕಟ್ಟಿಸಿದನು. ಆದರೆ ಉನ್ನತ ಸ್ಥಳಗಳು ತೆಗೆಯಲ್ಪಡಲಿಲ್ಲ; ಜನರು ಇನ್ನೂ ಉನ್ನತ ಸ್ಥಳಗಳ ಮೇಲೆ ಬಲಿಗಳನ್ನೂ ಧೂಪವನ್ನೂ ಅರ್ಪಿಸುತ್ತಿದ್ದರು.
ಇದಲ್ಲದೆ ಅವನು ಉನ್ನತ ಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಹಸುರಾದ ಎಲ್ಲಾ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಸಮರ್ಪಿಸಿದನು.
ಅವನು ಯೆಹೂದದ ಪರ್ವತಗಳಲ್ಲಿ ಉನ್ನತ ಸ್ಥಳಗಳನ್ನು ಮಾಡಿ ಯೆರೂಸಲೇಮಿನ ನಿವಾಸಿಗಳನ್ನು ವ್ಯಭಿಚಾರ ಮಾಡಲು ಪ್ರೇರೇಪಿಸಿ ಹಾಗೆಯೇ ಮಾಡಲು ಯೆಹೂ ದದವರನ್ನು ಬಲವಂತ ಮಾಡಿದನು.
ನಮ್ಮ ತಂದೆಗಳ ಸಂಗಡ ನಾವು ಪಾಪಮಾಡಿದ್ದೇವೆ, ಅಕ್ರಮಮಾಡಿದ್ದೇವೆ, ದುಷ್ಟತ್ವವನ್ನು ನಡಿಸಿದ್ದೇವೆ.
ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀ. ಬಲಿ ಅರ್ಪಿಸುವ ದಕ್ಕೂ ಅಲ್ಲಿಗೆ ಏರಿದ್ದೀ.
ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
ನನ್ನನ್ನು ಹಿಂಸಿಸುವವರು ನಾಚಿಕೆ ಪಡಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲುಪಡಲಿ; ಆದರೆ ನಾನು ದಿಗಿಲುಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡು, ಎರಡರಷ್ಟು ಅವರನ್ನು ನಾಶಪಡಿಸು.
ಪರ್ವತಗಳ ಮೇಲೆ ತಿನ್ನದೆ, ಇಸ್ರಾಯೇಲಿನ ಮನೆ ತನದವರ ವಿಗ್ರಹಗಳ ಕಡೆಗೆ ತನ್ನ ಕಣ್ಣುಗಳನ್ನು ಎತ್ತದೆ, ತನ್ನ ನೆರೆಯವನ ಹೆಂಡತಿಯನ್ನು ಕೆಡಿಸದೆ, ಮುಟ್ಟಾ ಗಿರುವ ಸ್ತ್ರೀ ಹತ್ತಿರ ಸವಿಾಪಿಸದೆ;
ಆದದರಿಂದ ಮನುಷ್ಯಪುತ್ರನೇ, ನೀನು ಇಸ್ರಾ ಯೇಲಿನ ಮನೆತನದವರ ಸಂಗಡ ಮಾತಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದೇನಂದರೆ, ನನಗೆ ವಿರುದ್ಧವಾಗಿ ಬಹಳ ಅಪರಾಧ ಮಾಡಿದ್ದರಲ್ಲಿ ನಿಮ್ಮ ಪಿತೃಗಳು ನನ್ನನ್ನು ದೂಷಿಸಿದರು.
ನಾನು ಕೈ ಎತ್ತಿ ಅವರಿಗೆ ಕೊಟ್ಟ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಗಾತ್ರವಾದ ಮರಗಳನ್ನೂ ನೋಡಿ ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಅಲ್ಲಿ ರೇಗಿಸುವ ತಮ್ಮ ಕಾಣಿಕೆಗಳನ್ನರ್ಪಿಸಿ ಸುವಾಸನೆ ಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.
ಓ ಕರ್ತನೇ, ನಿನಗೆ ವಿರುದ್ಧವಾಗಿ ನಾವು ಪಾಪಮಾಡಿದ್ದರಿಂದ ನಮ್ಮ ಅರಸರಿಗೂ ಪ್ರಧಾ ನರಿಗೂ ಮತ್ತು ನಮ್ಮ ತಂದೆಗಳಿಗೂ ನಮಗೂ ನಾಚಿಕೆಯ ಮುಖಗಳಿವೆ.
ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.
ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.