Home Bibles ☰ Books ಯೆಶಾಯ 66:22 · ಕನ್ನಡ ಬೈಬಲ್
ಯೆಶಾಯ 66:22 · ಕನ್ನಡ ಬೈಬಲ್

ನಾನು ಉಂಟು ಮಾಡುವ ಹೊಸ ಆಕಾಶವೂ ಹೊಸ ಭೂಮಿಯೂ ನನ್ನ ಮುಂದೆ ನೆಲೆಯಾಗಿರುವ ಪ್ರಕಾರವೇ ನಿಮ್ಮ ಸಂತಾನವೂ ನಿಮ್ಮ ಹೆಸರೂ ನೆಲೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

Cross references

ಯೆಶಾಯ 59:21

ಕರ್ತನು ಹೇಳುವದೇ ನಂದರೆ--ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ--ನಿನ್ನ ಮೇಲಿರುವ ನನ್ನ ಆತ್ಮನೂ ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ ನಿನ್ನ ಸಂತಾನದ ಬಾಯಿಂದಲೂ ನಿನ್ನ ಸಂತತಿಯ ಸಂತಾ ನದ ಬಾಯಿಂದಲೂ ತೊಲಗುವದಿಲ್ಲವೆಂದು ಕರ್ತನು ಹೇಳುತ್ತಾನೆ.

ಯೆಶಾಯ 65:17

ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.

ಯೆರೆಮಿಯ 33:20

ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

ಯೆರೆಮಿಯ 33:21

ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.

ಮತ್ತಾಯ 28:20

ಇದಲ್ಲದೆ ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಕೈಕೊಳ್ಳುವ ಹಾಗೆ ಅವರಿಗೆ ಬೋಧಿಸಿರಿ; ಮತ್ತು ಇಗೋ, ಲೋಕಾಂತ್ಯದ ವರೆಗೂ ಯಾವಾಗಲೂ ನಾನು ನಿಮ್ಮ ಸಂಗಡ ಇದ್ದೇನೆ ಅಂದನು. ಆಮೆನ್‌.

ಯೋಹಾನ 10:27

ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ, ನಾನು ಅವುಗಳನ್ನು ಬಲ್ಲೆನು; ಅವು ನನ್ನನ್ನು ಹಿಂಬಾಲಿಸುತ್ತವೆ.

ಹೆಬ್ರಿಯರಿಗೆ 12:26

ಆತನ ಧ್ವನಿಯು ಆಗ ಭೂಮಿಯನ್ನು ಕದಲಿಸಿತು; ಈಗಲಾದರೋ ಆತನು--ಇನ್ನೊಂದೇ ಸಾರಿ ನಾನು ಭೂಮಿಯನ್ನು ಮಾತ್ರವಲ್ಲದೆ ಪರಲೋಕವನ್ನೂ ಕದಲಿಸುತ್ತೇನೆಂದು ವಾಗ್ದಾನ ಮಾಡಿ ಹೇಳಿದ್ದಾನೆ.

1 ಪೇತ್ರ 1:4

ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

2 ಪೇತ್ರ 3:13

ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.

ಪ್ರಕಟನೆ 21:1

ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.

Interlinear

Choose Theme