ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
Cross references
ಇದಲ್ಲದೆ ಸುಲಿಗೆ ಆಗುವರೆಂದು ನೀವು ಹೇಳಿದ ನಿಮ್ಮ ಚಿಕ್ಕವರೂ ಈಹೊತ್ತು ಮೇಲು ಕೇಡು ಅರಿಯದ ನಿಮ್ಮ ಮಕ್ಕಳೂ ಅವರೇ ಅದರಲ್ಲಿ ಪ್ರವೇಶಿಸುವರು; ಅವರಿಗೆ ಅದನ್ನು ಕೊಡುವೆನು; ಅವರು ಅದನ್ನು ಸ್ವತಂತ್ರಿಸಿಕೊಳ್ಳುವರು.
ಇಸ್ರಾಯೇಲಿನ ಅರಸನಾದ ಪೆಕಹನ ದಿವಸಗಳಲ್ಲಿ ಅಶ್ಶೂರದ ಅರಸ ನಾದ ತಿಗ್ಲತ್ಪಿಲೆಸೆರನು ಬಂದು ನೆಫ್ತಾಲಿಯ ದೇಶವಾದ ಇಯ್ಯೋನನ್ನೂ ಅಬೇಲ್ಬೆತ್ಮಾಕವನ್ನೂ ಯಾನೋಹ ವನ್ನೂ ಕೆದೆಷನ್ನೂ ಹಾಚೋರನ್ನೂ ಗಿಲ್ಯಾದನ್ನೂ ಗಲಿಲಾಯವನ್ನೂ ಹಿಡುಕೊಂಡು ಜನರನ್ನು ಸೆರೆಯಾಗಿ ಅಶ್ಯೂರಿಗೆ ಒಯ್ದನು.
ಇದಲ್ಲದೆ ಉಜ್ಜೀಯನ ಮಗ ನಾದ ಯೋತಾಮನ ಇಪ್ಪತ್ತನೇ ವರುಷದಲ್ಲಿ ಏಲನ ಮಗನಾದ ಹೋಶೆಯನು ರೆಮಲ್ಯನ ಮಗನಾದ ಪೆಕಹನ ಮೇಲೆ ಒಳಸಂಚು ಮಾಡಿ ಅವನನ್ನು ಸಂಹರಿಸಿ ಅವನಿಗೆ ಬದಲಾಗಿ ಅರಸನಾದನು.
ಆಗ ಅಶ್ಶೂರಿನ ಅರಸನು ಅವನ ಮಾತು ಕೇಳಿ ದಮಸ್ಕಕ್ಕೆ ಹೋಗಿ ಅದನ್ನು ಹಿಡಿದು ಅದರ ನಿವಾಸಿಗಳನ್ನು ಕೀರ್ ಪ್ರಾಂತಕ್ಕೆ ಸೆರೆಯಾಗಿ ತಂದು ರೆಚೀನನನ್ನು ಕೊಂದುಹಾಕಿದನು.
ಆ ಮಗುವು--ಅಪ್ಪಾ, ಅಮ್ಮಾ ಎಂದು ಕೂಗಬಲ್ಲವನಾಗುವದರ ಮುಂಚೆ ಅಶ್ಯೂರದ ಅರಸ ನು ದಮಸ್ಕದ ಆಸ್ತಿಯನ್ನೂ ಸಮಾರ್ಯದ ಸೂರೆ ಯನ್ನೂ ತೆಗೆದುಕೊಂಡು ಹೋಗುವನು ಅಂದನು.
ಹೀಗಿರುವದರಿಂದ ಕರ್ತನು ರೆಚೀ ನನ ವೈರಿಗಳನ್ನು ಅವನಿಗೆ ವಿರೋಧವಾಗಿ ಎಬ್ಬಿಸಿ ಅವನ ಶತ್ರುಗಳಾದ ಸಿರಿಯಾದವರನ್ನು ಮುಂದೆಯೂ ಫಿಲಿಷ್ಟಿಯರನ್ನು ಹಿಂದೆಯೂ ಒಟ್ಟುಗೂಡಿಸುವನು.
ದಮಸ್ಕದ ವಿಷಯವಾದ ದೈವೋಕ್ತಿ. ಇಗೋ, ದಮಸ್ಕವು ಇನ್ನು ಪಟ್ಟಣವಾಗಿ ರದೆ ತೆಗೆದುಹಾಕಲ್ಪಟ್ಟಿದೆ ಅದು ಹಾಳು ದಿಬ್ಬವಾಗಿ ರುವದು.
ಎಫ್ರಾಯಾಮು ಗದರಿಸುವ ದಿನದಲ್ಲೇ ಹಾಳಾಗುವದು. ಇಸ್ರಾಯೇ ಲಿನ ಗೋತ್ರಗಳಲ್ಲಿ ನಾನು ನಿಜವಾಗಿ ಆಗುವಂಥದ್ದನ್ನೇ ತಿಳಿಸಿದ್ದೇನೆ.
ಕರ್ತನು ಹೀಗೆ ಹೇಳುತ್ತಾನೆ--ದಮಸ್ಕದ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ನಾನು ಅವರನ್ನು ದಂಡಿಸದೆ ಹಿಂತಿರುಗುವದಿಲ್ಲ; ಅವರು ಕಬ್ಬಿಣದ ಆಯುಧಗಳಿಂದ ಗಿಲ್ಯಾದನ್ನು ಬಡಿದಿರುವರು.
ಆ ಸೋರೇಗಿಡದ ಮೇಲೆ ಕನಿಕರ ಪಟ್ಟಿಯಲ್ಲಾ, ಹಾಗಾ ದರೆ ಎಡ ಬಲ ಕೈಗಳನ್ನು ತಿಳಿಯದವರಾದ ಲಕ್ಷ ಇಪ್ಪತ್ತು ಸಾವಿರಕ್ಕಿಂತ ಹೆಚ್ಚಾದ ಜನರು, ಬಹಳ ದನ ಗಳು ಸಹ ಇರುವ ಆ ದೊಡ್ಡ ಪಟ್ಟಣವಾದ ನಿನೆವೆ ಯನ್ನು ನಾನು ಕನಿಕರಿಸಬಾರದೋ ಅಂದನು.