ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು.
Cross references
ಆಗ ಕುರಿಮರಿಗಳು ತಮಗೆ ಮನಸ್ಸು ಬಂದ ಹಾಗೆ ಮೇಯುವವು, ಕೊಬ್ಬಿದವರ ಹಾಳಾದವುಗಳನ್ನು ಅನ್ಯರು ತಿನ್ನುವರು.
ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
ಆರೋಯೇರಿನ ಪಟ್ಟಣಗಳು ತಳ್ಳಿಹಾಕ ಲ್ಪಟ್ಟಿವೆ; ಅವು ಯಾರ ಹೆದರಿಕೆಯೂ ಇಲ್ಲದೆ ಅಲ್ಲಿ ಮಲಗುವ ಮಂದೆಗಳಿಗೆ ಸ್ಥಳವಾಗುವದು.
ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.
ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.