ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
Cross references
ಆಗ ಕರ್ತನು ಮೋಶೆಗೆ--ಐಗುಪ್ತದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು ಅಂದನು.
ಮೋಶೆಯು ಆಕಾಶದ ಕಡೆಗೆ ಕೈಚಾಚಿದಾಗ ಐಗುಪ್ತದೇಶದಲ್ಲೆಲ್ಲಾ ಮೂರು ದಿನಗಳ ವರೆಗೆ ಘೋರವಾದ ಕತ್ತಲು ಕವಿಯಿತು.
ಆ ಕಾಲಗಳಲ್ಲಿ ಹೊರಗೆ ಹೋಗುವವನಿಗೂ ಒಳಗೆ ಬರುವವನಿಗೂ ಸಮಾಧಾನವಿಲ್ಲದೆ ಇತ್ತು; ದೇಶದ ನಿವಾಸಿಗಳು ಬಹಳ ವಾಗಿ ಹೆದರಿದ್ದರು.
ಬೆಳಕಿನಿಂದ ಅವನನ್ನು ಕತ್ತ ಲೆಗೆ ದೊಬ್ಬುವರು; ಲೋಕದಿಂದ ಓಡಿಸುವರು.
ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
ಆದಾಗ್ಯೂ ಸಂಕಟಪಟ್ಟ ದೇಶಕ್ಕೆ ಅಂಧ ಕಾರವಿನ್ನಿಲ್ಲ. ಹಿಂದಿನ ಕಾಲದಲ್ಲಿ ಜೆಬು ಲೋನ್ ಮತ್ತು ನಫ್ತಾಲೀ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿ ಅನಂತರ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ ಈ ಪ್ರಾಂತ್ಯ ವನ್ನೆಲ್ಲಾ ಘನಪಡಿಸಿದ್ದಾನೆ.
ನಾನು ಆಕಾಶಗಳಿಗೆ ಅಂಧಕಾರವನ್ನು ಹೊದಿಸಿ ಗೋಣೀತಟ್ಟನ್ನು ಅದರ ಹೊದಿಕೆಯನ್ನಾಗಿ ಮಾಡುವೆನು.
ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು.
ಅವರ ಪ್ರವಾದನೆಯನು ಕೇಳುವ ಜನರು ಕ್ಷಾಮದ ಮತ್ತು ಕತ್ತಿಯ ನಿಮಿತ್ತ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಹೆಂಡತಿಯರನ್ನೂ ಕುಮಾರರನ್ನೂ ಕುಮಾರ್ತೆಯರನ್ನೂ ಹೂಣಿಡುವದಕ್ಕೆ ಯಾರೂ ಇರು ವದಿಲ್ಲ; ನಾನು ಅವರ ಕೆಟ್ಟತನವನ್ನು ಅವರ ಮೇಲೆ ಹೊಯಿದು ಬಿಡುವೆನು.
ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು.
ಕರ್ತನ ದಿನವನ್ನು ಅಪೇಕ್ಷಿಸುವ ನಿಮಗೆ ಅಯ್ಯೋ! ನಿಮ್ಮ ಅಂತ್ಯವೇನಾಗುವದು? ಅಯ್ಯೋ, ಕರ್ತನ ದಿನವು ನಿಮಗೆ ಬೆಳಕಲ್ಲ, ಕತ್ತಲೆಯೇ.
ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಯಲ್ಲಿ ದೊಬ್ಬಲ್ಪಡುವರು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.
ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು.
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.