ಅನಂತರ ನಾನು ಪ್ರವಾದಿನಿ ಯನ್ನು ಕೂಡಲು ಆಕೆಯು ಬಸುರಾಗಿ ಒಬ್ಬ ಮಗನನ್ನು ಹೆತ್ತಳು. ಆಗ ಕರ್ತನು ನನಗೆ--ಅವನಿಗೆ ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು ಎಂದು ಹೇಳಿದನು.
Cross references
ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
ಆಗ ಅವನು ಹೋಗಿ ದಿಬ್ಲಯಿ ಮನ ಮಗಳಾದ ಗೋಮೆರಳನ್ನು ಮದುವೆಯಾದನು; ಅವಳು ಗರ್ಭಿಣಿಯಾಗಿ ಅವನಿಗೆ ಮಗನನ್ನು ಹೆತ್ತಳು.
ಆಗ ಕರ್ತನು ಅವನಿಗೆ--ಅವನನ್ನು ಇಜ್ರೇಲ್ ಎಂಬ ಹೆಸರಿನಿಂದ ಕರೆ. ಇನ್ನೂ ಸ್ವಲ್ಪಕಾಲದಲ್ಲಿಯೇ ನಾನು ಇಜ್ರೇಲಿನ ರಕ್ತವನ್ನು ಯೆಹೂವಿನ ಮನೆತನದವರ ಮೇಲೆ ಸೇಡು ತೀರಿಸಿಕೊಳ್ಳುವೆನು; ಇಸ್ರಾಯೇಲಿನ ಮನೆತನದ ರಾಜ್ಯವು ನಿಂತುಹೋಗುವಂತೆ ಮಾಡು ವೆನು.