Home Bibles ಯಾಕೋಬ 1:11 · ಕನ್ನಡ ಬೈಬಲ್
ಯಾಕೋಬ 1:11 · ಕನ್ನಡ ಬೈಬಲ್

ಸೂರ್ಯನು ಉದಯಿಸಿದ ತಕ್ಷಣವೇ ಉಷ್ಣತೆ ಯಿಂದ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ನಾಶವಾಗು ವದಷ್ಟೇ. ಹೀಗೆಯೇ ಐಶ್ವರ್ಯವಂತನು ತನ್ನ ದಾರಿ ಗಳಲ್ಲಿ ಬಾಡಿ ಹೋಗುವನು.

Cross references

2 ಸಮುವೇಲ 22:46

ದೇಶಾಂತದವರು ಬಾಡಿಹೋಗುವರು; ತಮ್ಮನ್ನು ಮುಚ್ಚಿಕೊಂಡ ಸ್ಥಳ ಗಳಿಂದ ನಡುಗುತ್ತಾ ಬರುವರು.

ಯೋಬ 21:24

ಅವನ ತೊಟ್ಟಿಗಳು ಹಾಲು ತುಂಬಿ ಯವೆ, ಅವನ ಎಲುಬುಗಳು ಮಜ್ಜೆಯಿಂದ ಹಸಿ ಯಾಗಿವೆ.

ಕೀರ್ತನೆಗಳು 37:35

ದುಷ್ಟನು ದೊಡ್ಡ ಅಧಿಕಾರದಲ್ಲಿರು ವದನ್ನು ನಾನು ನೋಡಿದೆನು; ಅವನು ಹಸುರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದನು.

ಕೀರ್ತನೆಗಳು 49:6

ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.

ಕೀರ್ತನೆಗಳು 73:18

ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.

ಕೀರ್ತನೆಗಳು 102:4

ನನ್ನ ಹೃದಯವು ಹೊಡೆಯಲ್ಪಟ್ಟ ಹುಲ್ಲಿನ ಹಾಗೆ ಒಣಗಿಹೋಗಿದೆ; ಆದದರಿಂದ ನಾನು ನನ್ನ ರೊಟ್ಟಿಯನ್ನು ತಿನ್ನುವದಕ್ಕೆ ಮರೆತುಬಿಡುತ್ತೇನೆ.

ಕೀರ್ತನೆಗಳು 102:11

ನನ್ನ ದಿವಸಗಳು ನೀಳದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತ್ತೇನೆ.

ಸಭಾಪ್ರಸಂಗಿ 5:15

ತನ್ನ ತಾಯಿಯ ಗರ್ಭದಿಂದ ಅವನು ಹೇಗೆ ಬಂದನೋ ಅವನು ಬಂದ ಹಾಗೆ ಬೆತ್ತಲೆಯಾಗಿ ತಿರುಗಿ ಹೋಗುವನು; ತನ್ನ ಕೈಯಲ್ಲಿ ತಕ್ಕೊಂಡು ಹೋಗುವದಕ್ಕೆ ತನ್ನ ಪ್ರಯಾಸದಲ್ಲಿ ಯಾವದನ್ನು ತೆಗೆದುಕೊಂಡು ಹೋಗುವದಿಲ್ಲ.

ಯೆಶಾಯ 28:1

ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.

ಯೆಶಾಯ 28:4

ಫಲವತ್ತಾದ ತಗ್ಗಿನ ತಲೆಯ ಮೇಲಿರುವ ಬಾಡುವ ಹೂವಾದ ಅವರ ಅಲಂಕಾರದ ಶೃಂಗಾರವುಬೇಸಿಗೆ ಮುಂಚೆ ಹುಟ್ಟಿದ ಹಣ್ಣಿನ ಹಾಗೆ ಇರುವದು. ಅದನ್ನು ಕಂಡು ನೋಡಿದಾಕ್ಷಣವೇ ಕೈಗೆ ಸಿಕ್ಕಿದಾಗಲೇ ತಿಂದು ಬಿಡುವನು.

ಯೆಶಾಯ 40:7

ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

ಯೆಶಾಯ 49:10

ಅವರಿಗೆ ಹಸಿವೆ ಯಾಗಲಿ ಬಾಯಾರಿಕೆಯಾಗಲಿ ಇರವು. ಇಲ್ಲವೆ ಝಳವೂ ಬಿಸಿಲೂ ಬಡಿಯವು; ಯಾಕಂದರೆ ಅವ ರನ್ನು ಕರುಣಿಸುವಾತನು ಅವರನ್ನು ನಡೆಸುತ್ತಾ ನೀರು ಕ್ಕುವ ಒರತೆಗಳ ಬಳಿಗೆ ತರುವನು.

ಯೋನ 4:7

ಆದರೆ ಮಾರನೇ ದಿನದಲ್ಲಿ ಉದಯವಾದಾಗ ದೇವರು ಒಂದು ಹುಳವನ್ನು ಸಿದ್ಧಮಾಡಿದನು; ಅದು ಸೋರೇ ಗಿಡವನ್ನು ಒಣಗುವ ಹಾಗೆ ಹೊಡೆಯಿತು.

ಮತ್ತಾಯ 13:6

ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.

ಮಾರ್ಕ 4:6

ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಬೇರಿಲ್ಲದ ಕಾರಣ ಒಣಗಿಹೋದವು;

ಲೂಕ 12:16

ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.

ಲೂಕ 16:19

ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.

1 ಕೊರಿಂಥದವರಿಗೆ 7:31

ಲೋಕವನ್ನು ಅನುಭೋಗಿಸುವವರು ಅದನ್ನು ದುರುಪಯೋಗ ಮಾಡದವರಂತೆಯೂ ಇರಬೇಕು; ಯಾಕಂದರೆ ಈ ಲೋಕದ ಆಡಂಬರವು ಗತಿಸಿಹೋಗುತ್ತದೆ.

ಯಾಕೋಬ 5:1

ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ

1 ಪೇತ್ರ 1:4

ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.

1 ಪೇತ್ರ 5:4

ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.

Interlinear

Choose Theme