ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
Cross references
ಕೊಲೆ ಮಾಡಬಾರದು.
ಇಸ್ರಾ ಯೇಲನ ಮಕ್ಕಳಿಗೆ ಹೇಳಬೇಕಾದದ್ದೇನಂದರೆ--ಒಬ್ಬನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಪಾಪಿಯಾದರೆ,
ಮಾಡಬಾರದ ಕೆಲಸಗಳನ್ನು ಕರ್ತನ ಆಜ್ಞೆಗಳಿಗೆ ವಿರೋಧವಾಗಿ ಯಾವದನ್ನಾದರೂ ಇಸ್ರಾಯೇಲಿನ ಸಭೆಯವರು ಅರಿಯದೆ ಮಾಡಿ ಅಪರಾಧಿಗಳಾಗಿದ್ದರೆ ಅದು ಸಭೆಗೆ ಕಣ್ಮರೆಯಾಗಿದ್ದರೆ
ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,
ಕೊಲ್ಲಬೇಡ
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ನೀನು ನರಹತ್ಯ ಮಾಡಬಾರದು; ಯಾವನಾ ದರೂ ನರಹತ್ಯಮಾಡಿದರೆ ನ್ಯಾಯತೀರ್ಪಿನ ಅಪಾ ಯಕ್ಕೆ ಒಳಗಾಗುವನು ಎಂದು ಪೂರ್ವಿಕರು ಹೇಳಿರು ವದನ್ನು ನೀವು ಕೇಳಿದ್ದೀರಿ.
ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು.
ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.