Home Bibles ಯಾಕೋಬ 2:7 · ಕನ್ನಡ ಬೈಬಲ್
ಯಾಕೋಬ 2:7 · ಕನ್ನಡ ಬೈಬಲ್

ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?

Cross references

ಕೀರ್ತನೆಗಳು 73:7

ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.

ಕೀರ್ತನೆಗಳು 111:9

ತನ್ನ ಜನರಿಗೆ ವಿಮೋಚನೆಯನ್ನು ಕಳುಹಿ ಸಿದನು; ಯುಗಯುಗಕ್ಕೂ ತನ್ನ ಒಡಂಬಡಿಕೆಯನ್ನು ಆಜ್ಞಾಪಿಸಿದನು; ಆತನ ಹೆಸರು ಪರಿಶುದ್ಧವೂ ಘನವೂ ಆಗಿದೆ.ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.

ಪರಮಗೀತ 1:3

ನಿನ್ನ ಒಳ್ಳೇ ತೈಲಗಳ ಪರಿಮಳದಂತೆ ನಿನ್ನ ಹೆಸರು ಹೊಯ್ಯಲ್ಪಟ್ಟ ತೈಲವಾಗಿದೆ; ಆದದರಿಂದ ಕನ್ನಿಕೆಯರು ನಿನ್ನನ್ನು ಪ್ರೀತಿಮಾಡುತ್ತಾರೆ.

ಯೆಶಾಯ 7:14

ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.

ಯೆಶಾಯ 9:6

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.

ಯೆಶಾಯ 65:15

ನಾನು ಆದುಕೊಂಡವರಿಗೆ ನಿಮ್ಮ ಹೆಸರನ್ನು ಶಾಪವಾಗಿ ಉಳಿ ಸುವಿರಿ; ಕರ್ತನಾದ ಯೆಹೋವನು ನಿಮ್ಮನ್ನು ಕೊಂದು ಹಾಕಿ, ತನ್ನ ಸೇವಕರಿಗೆ ಬೇರೆ ಹೆಸರನ್ನು ಇಡುವನು.

ಯೆರೆಮಿಯ 23:6

ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.

ಮತ್ತಾಯ 1:23

ಆ ಮಾತೇನಂದರೆ -- ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹೆರುವಳು; ಅವರು ಆತನ ಹೆಸರನ್ನು ಇಮ್ಮಾನುವೇಲ್‌ ಎಂದು ಕರೆಯುವರು ಎಂಬದೇ. ದೇವರು ನಮ್ಮ ಕೂಡ ಇದ್ದಾನೆ ಎಂಬದು ಇದರ ಅರ್ಥ.

ಮತ್ತಾಯ 12:24

ಆದರೆ ಫರಿಸಾಯರು ಇದನ್ನು ಕೇಳಿದಾಗ--ಇವನು ದೆವ್ವಗಳ ಅಧಿಪತಿಯಾಗಿರುವ ಬೆಲ್ಜೆಬೂಲನಿಂದಲೇ ಹೊರತು ದೆವ್ವಗಳನ್ನು ಬಿಡಿಸು ವದಿಲ್ಲ ಅಂದರು.

ಮತ್ತಾಯ 27:63

ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿದ್ದಾಗ-- ಮೂರು ದಿನಗಳಾದ ಮೇಲೆ ನಾನು ತಿರಿಗಿ ಏಳುತ್ತೇನೆ ಎಂದು ಹೇಳಿದ್ದು ನಮ್ಮ ನೆನಪಿಗೆ ಬರುತ್ತದೆ.

ಲೂಕ 22:64

ಇದಲ್ಲದೆ ಅವರು ಆತನ ಕಣ್ಣುಕಟ್ಟಿ ಆತನ ಮುಖದ ಮೇಲೆ ಹೊಡೆದು ಆತನಿಗೆ--ನಿನ್ನನ್ನು ಹೊಡೆದವರು ಯಾರು? ಪ್ರವಾ ದನೆ ಹೇಳು ಎಂದು ಕೇಳಿದರು.

ಅಪೋಸ್ತಲರ ಕೃತ್ಯಗಳು 4:12

ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.

ಅಪೋಸ್ತಲರ ಕೃತ್ಯಗಳು 11:26

ಅವನನ್ನು ಕಂಡುಕೊಂಡು ಅಂತಿ ಯೋಕ್ಯಕ್ಕೆ ಕರೆದುಕೊಂಡು ಬಂದನು. ಆಮೇಲೆ ಅವರು ಪೂರಾ ಒಂದು ವರುಷ ಸಭೆಯವರ ಸಂಗಡ ಕೂಡಿದ್ದು ಬಹು ಜನರಿಗೆ ಉಪದೇಶ ಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಕ್ರೈಸ್ತರೆಂಬ ಹೆಸರು ಮೊದಲು ಬಂತು.

ಅಪೋಸ್ತಲರ ಕೃತ್ಯಗಳು 26:11

ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.

ಎಫೆಸದವರಿಗೆ 3:15

ಯಾವ ತಂದೆಯ ಹೆಸರನ್ನು ಪರಲೋಕ ಭೂಲೋಕಗಳಲ್ಲಿರುವ ಕುಟುಂಬವೆಲ್ಲಾ ತೆಗೆದುಕೊಳ್ಳು ತ್ತದೋ, ಆ ತಂದೆಯು

ಫಿಲಿಪ್ಪಿಯವರಿಗೆ 2:9

ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

1 ತಿಮೋಥೆಯ 1:13

ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.

ಪ್ರಕಟನೆ 13:5

ಬಡಾಯಿ ಮಾತುಗಳನ್ನೂ ದೂಷಣೆಯ ಮಾತು ಗಳನ್ನೂ ಆಡುವ ಬಾಯಿ ಅದಕ್ಕೆ ಕೊಡಲ್ಪಟ್ಟಿತು. ನಾಲ್ವತ್ತೆರಡು ತಿಂಗಳುಗಳವರೆಗೆ ಮುಂದುವರಿಯುವ ಹಾಗೆ ಅದಕ್ಕೆ ಅಧಿಕಾರವು ಕೊಡಲ್ಪಟ್ಟಿತು.

ಪ್ರಕಟನೆ 19:13

ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.

ಪ್ರಕಟನೆ 19:16

ಆತನ ತೊಡೆಯ ಮೇಲೆಯೂ ವಸ್ತ್ರದ ಮೇಲೆಯೂ--ರಾಜಾ ಧಿರಾಜನೂ ಕರ್ತರ ಕರ್ತನೂ ಎಂಬ ಹೆಸರು ಬರೆದದೆ.

Interlinear

Choose Theme