ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.
Cross references
ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
ತಮ್ಮ ಸ್ವಂತ ಪ್ರಾಣಗಳನ್ನು ತೆಗೆದುಕೊಳ್ಳುವ ದುರ್ಲಾಭಾ ಪೇಕ್ಷಕರ ಪ್ರತಿಯೊಬ್ಬನ ಮಾರ್ಗಗಳು ಹೀಗಿವೆ.
ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
ಆದರೆ ಆಹಾಜನು -- ನಾನು ಕೇಳಿಕೊಳ್ಳುವದಿಲ್ಲ; ಇಲ್ಲವೆ ಕರ್ತನನ್ನು ಪರೀಕ್ಷಿಸುವದಿಲ್ಲ ಅಂದನು.
ಹೌದು, ಅವನು ದ್ರಾಕ್ಷಾರಸದಿಂದ ಉಲ್ಲಂಘಿಸು ತ್ತಾನೆ. ಅಹಂಕಾರದ ಮನುಷ್ಯನಾಗಿದ್ದಾನೆ; ಮನೆಯಲ್ಲಿ ಇರುವದಿಲ್ಲ; ಇವನು ಪಾತಾಳದ ಹಾಗೆ ತನ್ನ ಆಶೆಯನ್ನು ದೊಡ್ಡದಾಗಿ ಮಾಡಿಕೊಂಡು ಮರಣದ ಹಾಗಿದ್ದಾನೆ, ತೃಪ್ತಿಯಾಗುವದಿಲ್ಲ; ಎಲ್ಲಾ ಜನಾಂಗಗಳನ್ನು ತನಗಾಗಿ ಕೂಡಿಸುತ್ತಾನೆ; ಎಲ್ಲಾ ಜನಗಳನ್ನು ತನಗಾಗಿ ದೊಡ್ಡ ಗುಂಪನ್ನಾಗಿ ಮಾಡಿಕೊಳ್ಳುತ್ತಾನೆ.
ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು; ಹುಡುಕಿರಿ, ನಿಮಗೆ ಸಿಕ್ಕುವದು; ತಟ್ಟಿರಿ, ಅದು ನಿಮಗೆ ತೆರೆಯಲ್ಪಡುವದು.
ನಾನು ನಿಮಗೆ ಹೇಳುವದೇನಂ ದರೆ--ಬೇಡಿಕೊಳ್ಳಿರಿ, ನಿಮಗೆ ಕೊಡಲ್ಪಡುವದು; ಹುಡುಕಿರಿ, ನೀವು ಕಂಡುಕೊಳ್ಳುವಿರಿ; ತಟ್ಟಿರಿ, ನಿಮಗೆ ತೆರೆಯಲ್ಪಡುವದು.
ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಬೇಡಿಕೊಳ್ಳಲಿಲ್ಲ; ಬೇಡಿಕೊಳ್ಳಿರಿ, ನಿಮಗೆ ದೊರೆಯುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು.
ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ.
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆ ಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲ ರಿಗೂ ಉದಾರ ಮನಸ್ಸಿನಿಂದ ಕೊಡುವಾತನಾಗಿದ್ದಾನೆ.
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ