ಅವು ಗಳನ್ನು ನಿಮ್ಮ ತಂದೆಗಳಿಗೆ ಅಂದರೆ ಅವರನ್ನು ಐಗುಪ್ತ ದೇಶದೊಳಗಿಂದಲೂ ಕಬ್ಬಿಣದ ಕುಲುಮೆಯೊಳ ಗಿಂದಲೂ ಹೊರಗೆ ಬರಮಾಡಿದ ದಿವಸದಲ್ಲಿ ನಾನು ಆಜ್ಞಾಪಿಸಿದ್ದೇನಂದರೆ--ನಾನು ನಿಮಗೆ ಆಜ್ಞಾಪಿಸುವದೆ ಲ್ಲಾದರ ಪ್ರಕಾರ ನನ್ನ ಸ್ವರಕ್ಕೆ ವಿಧೇಯರಾಗಿ ಅವುಗಳಂತೆ ಮಾಡಿದರೆ ನೀವು ನನಗೆ ಜನಾಂಗವಾಗುವಿರಿ; ನಾನು ನಿಮ್ಮ ದೇವರಾಗಿರುವೆನು ಅಂದೆನು.
Cross references
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಅನ್ಯಜನಾಂಗಗಳ ವಿಗ್ರಹಗಳು ಬೆಳ್ಳಿ ಬಂಗಾರ ದಿಂದ ಮಾಡಿದ ಮನುಷ್ಯನ ಕೈ ಕೆಲಸವಾಗಿವೆ.
ಕಂಚುಗಾರನು ವಿಗ್ರಹವನ್ನು ಎರಕ ಹೊಯ್ಯುತ್ತಾನೆ; ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ; ಬೆಳ್ಳಿಯ ಸರಪಣಿಗಳನ್ನು ಹಾಕುವನು.
ಪ್ರತಿಯೊಬ್ಬನು ತನ್ನ ನೆರೆಯವನಿಗೆ ಸಹಾಯಮಾಡಿ ಮತ್ತು ಪ್ರತಿಯೊಬ್ಬನು ತನ್ನ ಸಹೋದರನಿಗೆ--ಧೈರ್ಯ ವಾಗಿರ್ರಿ ಎಂದು ಹೇಳಲಿ.
ಕಮ್ಮಾ ರನು ಚಿಮಟದೊಂದಿಗೆ ಬೆಂಕಿಯಲ್ಲಿ ಕೆಲಸ ಮಾಡುತ್ತಾ ಚಮಟಿಗೆಯಿಂದ ಅದನ್ನು ಬಡಿದು ರೂಪಿಸಿ ತನ್ನ ತೋಳಿನ ಬಲದಿಂದ ಕೆಲಸ ಮಾಡುತ್ತಾನೆ; ಹೌದು, ಅವನು ಹಸಿದು ಬಲಹೀನನಾಗಿದ್ದರೂ ನೀರು ಕುಡಿ ಯದೆ ದಣಿಯುತ್ತಾನೆ.
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.