ನಾನು ನಿಮ್ಮ ತಂದೆಗಳಿಗೆ ನನ್ನ ಮಾತನ್ನು ಕೇಳಿರೆಂದು ಖಂಡಿತವಾಗಿ ಹೇಳಿದೆನು. ಅವರನ್ನು ಐಗುಪ್ತದೇಶದೊಳಗಿಂದ ಮೇಲೆ ಬರ ಮಾಡಿದ ದಿನ ಮೊದಲುಗೊಂಡು ಇಂದಿನವರೆಗೂ ಬೆಳಿಗ್ಗೆ ಎದ್ದು ಖಂಡಿತವಾಗಿ ಹೇಳಿದೆನು,
Cross references
ನಿಮ್ಮ ದೇವರಾದ ಕರ್ತನು ಕೆಂಪು ಸಮುದ್ರವನ್ನು ನಾವು ದಾಟುವ ಪರಿಯಂತರ ನಮ್ಮ ಮುಂದೆ ಒಣಗಿ ಹೋಗಮಾಡಿದ ಹಾಗೆ ನೀವು ದಾಟಿ ಬರುವ ಪರಿಯಂತರ ದೇವರಾದ ಕರ್ತನು ಯೊರ್ದನಿನ ನೀರನ್ನು ಭಾಗ ಮಾಡಿದನು.
ನಿಮ್ಮ ದೇವರಾದ ಕರ್ತನಿಗೆ ಭಯ ಪಡಿರಿ. ಆಗ ಆತನು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವನು ಅಂದನು.
ಯಾಕಂದರೆ ಕರ್ತನು ದೊಡ್ಡವನೂ ಬಹಳವಾಗಿ ಸ್ತುತಿಸಲ್ಪಡತಕ್ಕವನೂ;
ಸರ್ವ ಶಕ್ತನನ್ನು ನಾವು ಕಂಡುಕೊಳ್ಳುವದಿಲ್ಲ; ಆತನು ಶಕ್ತಿಯಲ್ಲಿಯೂ ನ್ಯಾಯತೀರ್ಪಿನಲ್ಲಿಯೂ ಬಹುನೀತಿಯಲ್ಲಿಯೂ ಉನ್ನ ತನಾಗಿದ್ದಾನೆ; ಆತನು ಶ್ರಮೆಪಡಿಸುವದಿಲ್ಲ.ಆದ ದರಿಂದ ಮನುಷ್ಯರು ಆತನಿಗೆ ಭಯಪಡುತ್ತಾರೆ; ಹೃದಯದಲ್ಲಿ ಜ್ಞಾನಿಗಳಾದವರೆಲ್ಲರನ್ನು ಆತನು ಲಕ್ಷಿಸುವದಿಲ್ಲ.
ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
ಜನರನ್ನು ನಮ್ಮ ಕೆಳಗೂ ಜನಾಂಗಗಳನ್ನು ನಮ್ಮ ಪಾದಗಳ ಕೆಳಗೂ ಅಧೀನ ಮಾಡಿದ್ದಾನೆ.
ಹೌದು, ಎಲ್ಲಾ ಅರಸರು ಆತನ ಮುಂದೆ ಅಡ್ಡ ಬೀಳುವರು; ಎಲ್ಲಾ ಜನಾಂಗಗಳು ಆತನನ್ನು ಸೇವಿಸುವವು.
ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
ಕರ್ತನೇ, ದೇವರುಗಳಲ್ಲಿ ನಿನ್ನ ಹಾಗೆ ಒಬ್ಬನೂ ಇಲ್ಲ; ನಿನ್ನ ಕೆಲಸಗಳ ಹಾಗೆ ಒಂದೂ ಇಲ್ಲ.
ಓ ಕರ್ತನೇ, ನೀನು ಉಂಟುಮಾಡಿದ ಜನಾಂಗಗಳೆಲ್ಲಾ ಬಂದು ನಿನ್ನನ್ನು ಆರಾಧಿಸಿ ನಿನ್ನ ಹೆಸರನ್ನು ಘನಪಡಿ ಸುವರು.
ಪರ ಲೋಕದಲ್ಲಿ ಕರ್ತನಿಗೆ ಸಮಾನವಾದವನು ಯಾರು? ಪರಾಕ್ರಮಶಾಲಿಗಳ ಮಕ್ಕಳಲ್ಲಿ ಕರ್ತನಿಗೆ ಸಮಾನನಾದವನು ಯಾರು?
ನಮ್ಮ ಕರ್ತನು ದೊಡ್ಡವನೂ, ಪರಾ ಕ್ರಮಿಯೂ, ವಿವೇಕಕ್ಕೆ ಎಣೆಯಿಲ್ಲ.
ಆತನು ಅನೇಕ ಜನಾಂಗ ಗಳ ಮಧ್ಯದಲ್ಲಿ ನ್ಯಾಯ ತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವನು; ಅವರು ತಮ್ಮ ಕತ್ತಿಗಳನ್ನು ನೇಗಿಲಿನ ಗುಳಗಳನ್ನಾಗಿಯೂ ತಮ್ಮ ಈಟಿಗಳನ್ನು ಕುಡುಗೋ ಲುಗಳನ್ನಾಗಿಯೂ ಬಡಿಯುವರು; ಜನಾಂಗಕ್ಕೆ ವಿರೋ ಧವಾಗಿ ಜನಾಂಗವು ಕತ್ತಿಯನ್ನು ಎತ್ತದು; ಇಲ್ಲವೆ ಇನ್ನು ಮೇಲೆ ಯುದ್ಧಾಭ್ಯಾಸವು ಇರುವದೇ ಇಲ್ಲ.