Home Bibles ☰ Books ಯೆರೆಮಿಯ 12:3 · ಕನ್ನಡ ಬೈಬಲ್
ಯೆರೆಮಿಯ 12:3 · ಕನ್ನಡ ಬೈಬಲ್

ಆಗ ಕರ್ತನ ವಾಕ್ಯವು ನನಗೆ ಎರಡನೇ ಸಾರಿ ಉಂಟಾಗಿ ಹೇಳಿದ್ದೆನಂದರೆ--ನೀನು ನಿನ್ನ ನಡುವಿನಲ್ಲಿರುವ

Cross references

2 ಅರಸುಗಳು 20:3

ಓ ಕರ್ತನೇ, ನಾನು ಸತ್ಯದಿಂದಲೂ ಪೂರ್ಣಹೃದಯದಿಂದಲೂ ನಿನ್ನ ಮುಂದೆ ನಡೆದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದ್ದೇನೆಂದು ನೆನಸು ಅಂದನು. ಹಿಜ್ಕೀಯನು ಬಹಳವಾಗಿ ಅತ್ತನು.

1 ದಿನವೃತ್ತಾಂತ 29:17

ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.

ಯೋಬ 23:10

ಆದರೆ ನಾನು ಹಿಡಿಯುವ ಮಾರ್ಗವನ್ನು ಆತನು ತಿಳಿದಿದ್ದಾನೆ, ನನ್ನನ್ನು ಶೋಧಿಸಿದಾಗ ನಾನು ಬಂಗಾರದ ಹಾಗೆ ಹೊರಗೆ ಬರುವೆನು.

ಕೀರ್ತನೆಗಳು 7:9

ದುಷ್ಟರ ದುಷ್ಟತನವು ಮುಗಿದು ಹೋಗಲಿ, ಆದರೆ ನೀತಿವಂತನನ್ನು ದೃಢಪಡಿಸು. ನೀತಿಯುಳ್ಳ ದೇವರು ಹೃದಯವನ್ನೂ ಅಂತರಿಂದ್ರಿ ಯಗಳನ್ನೂ ಶೋಧಿಸುತ್ತಾನಲ್ಲಾ.

ಕೀರ್ತನೆಗಳು 11:5

ಕರ್ತನು ನೀತಿ ವಂತನನ್ನು ಶೋಧಿಸುತ್ತಾನೆ; ಆದರೆ ದುಷ್ಟನನ್ನೂ ಬಲಾತ್ಕಾರ ಪ್ರಿಯನನ್ನೂ ಆತನ ಪ್ರಾಣವು ಹಗೆ ಮಾಡುತ್ತದೆ.

ಕೀರ್ತನೆಗಳು 17:3

ನೀನು ನನ್ನ ಹೃದಯವನ್ನು ಶೋಧಿಸಿದ್ದೀ, ರಾತ್ರಿಯಲ್ಲಿ ನನ್ನನ್ನು ದರ್ಶಿಸಿದ್ದೀ; ನನ್ನನ್ನು ಪುಟಕ್ಕೆ ಹಾಕಿ ಏನೂ ಕಂಡುಕೊಳ್ಳಲಿಲ್ಲ. ನನ್ನ ಬಾಯಿ ಅತಿ ಕ್ರಮಿಸದಂತೆ ನಾನು ನಿಶ್ಚಯ ಮಾಡಿದ್ದೇನೆ.

ಕೀರ್ತನೆಗಳು 26:1

ಓ ಕರ್ತನೇ, ನನಗೆ ನ್ಯಾಯತೀರಿಸು; ಯಾಕಂದರೆ ನಾನು ನನ್ನ ಯಥಾರ್ಥತ್ವ ದಲ್ಲಿ ನಡೆದುಕೊಂಡಿದ್ದೇನೆ. ನಾನು ಕರ್ತನಲ್ಲಿ ಭರ ವಸವಿಟ್ಟಿದ್ದೇನೆ; ನಾನು ಕದಲುವದಿಲ್ಲ.

ಕೀರ್ತನೆಗಳು 44:21

ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.

ಕೀರ್ತನೆಗಳು 139:1

ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ;

ಕೀರ್ತನೆಗಳು 139:23

ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.

ಯೆರೆಮಿಯ 17:18

ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.

Interlinear

Choose Theme