ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಅವೆ; ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ ಇಲ್ಲವೆ ಅವರ ಅಕ್ರಮವು ನನ್ನ ಕಣ್ಣುಗಳಿಗೆ ಅಡಗಿರು ವದಿಲ್ಲ;
Cross references
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ನಿಷ್ಪ್ರಯೋಜಕರೊಂದಿಗೆ ನಾನು ಕೂತುಕೊಳ್ಳ ಲಿಲ್ಲ; ವಂಚಕರ ಸಂಗಡ ನಾನು ಹೋಗುವದಿಲ್ಲ.
ನಾನು ಎಚ್ಚರವಾಗಿದ್ದೂ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.
ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.
ನೀನು ಈ ಜನಕ್ಕೆ ಹೇಳಬೇಕಾದದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಜೀವದ ಮಾರ್ಗವನ್ನೂ ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ.
ಅವನು ಒಂಟಿಯಾಗಿ ಕೂತುಕೊಂಡು ಮೌನ ವಾಗಿರುವನು, ಯಾಕಂದರೆ ಆತನೇ ಅದನ್ನು ಅವನ ಮೇಲೆ ಹೊರಿಸಿದ್ದಾನೆ.
ಆಮೇಲೆ ಆತ್ಮನು ನನ್ನೊಳಗೆ ಪ್ರವೇಶಿಸಿ ನನ್ನನ್ನು ನನ್ನ ಪಾದದ ಮೇಲೆ ನಿಲ್ಲಿಸಿ ಮಾತಾಡಿ ನನಗೆ ಹೇಳಿದ್ದೇನೆಂದರೆ--ಹೋಗು, ನಿನ್ನ ಮನೆಯಲ್ಲಿ ನೀನು ಅಡಗಿಕೋ.
ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.