Home Bibles ಯೆರೆಮಿಯ 16:10 · ಕನ್ನಡ ಬೈಬಲ್
ಯೆರೆಮಿಯ 16:10 · ಕನ್ನಡ ಬೈಬಲ್

ಕರ್ತನಾದ ನಾನೇ ಹೃದಯ ವನ್ನು ಪರೀಕ್ಷಿಸುತ್ತೇನೆ; ಅಂತರಿಂದ್ರಿಯಗಳನ್ನು ಶೋಧಿ ಸುತ್ತೇನೆ. ಒಬ್ಬೊಬ್ಬನಿಗೆ ಅವನವನ ಮಾರ್ಗಗಳ ಪ್ರಕಾರವೂ ಅವನ ಕ್ರಿಯೆಗಳ ಫಲದ ಪ್ರಕಾರವೂ (ಪ್ರತಿಫಲ) ಕೊಡುತ್ತೇನೆ.

Cross references

ದ್ವಿತೀಯೋಪದೇಶಕಾಂಡ 29:24

ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು.

1 ಅರಸುಗಳು 9:8

ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು.

ಯೆರೆಮಿಯ 2:23

ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ ಎಂದು ನೀನು ಹೇಳುವದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು; ನೀನು ಮಾಡಿದ್ದನ್ನು ತಿಳುಕೋ; ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ;

ಯೆರೆಮಿಯ 2:35

ಆದಾಗ್ಯೂ ನೀನು--ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ಆತನ ಕೋಪವು ನನ್ನನ್ನು ಬಿಟ್ಟು ತಿರುಗುವದೆಂದು ಹೇಳುತ್ತೀ; ನಾನು ಪಾಪ ಮಾಡಲಿಲ್ಲವೆಂದು ನೀನು ಹೇಳುವದ ರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.

ಯೆರೆಮಿಯ 5:19

ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.

ಯೆರೆಮಿಯ 9:11

ನೀವು ಅವರಿಗೆ ಹೀಗೆ ಹೇಳಬೇಕು--ಆಕಾಶ ಗಳನ್ನೂ ಭೂಮಿಯನ್ನೂ ಸೃಷ್ಟಿಸದ ದೇವರುಗಳು ಭೂಮಿಯ ಮೇಲಿನಿಂದಲೂ ಈ ಆಕಾಶಗಳ ಕೆಳಗಿ ನಿಂದಲೂ ನಾಶವಾಗುವವು.

ಯೆರೆಮಿಯ 13:22

ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

ಯೆರೆಮಿಯ 22:8

ಆದರೆ ಕರ್ತನ ಜೀವದಾಣೆ, ಇಸ್ರಾಯೇಲಿನ ಮನೆತನದವರ ಸಂತಾನವನ್ನು ಉತ್ತರ ದೇಶದಿಂದಲೂ ತಾನು ಅವರನ್ನು ಹೊರಡಿಸಿ ಬಿಟ್ಟಿದ್ದ ಎಲ್ಲಾ ದೇಶ ಗಳಿಂದಲೂ ಬರಮಾಡಿದನು ಎಂದು ಹೇಳುವರು; ಅವರು ತಮ್ಮ ದೇಶದಲ್ಲಿ ವಾಸಮಾಡುವರು.

ಯೆರೆಮಿಯ 44:3

ಕರ್ತನು ನನ್ನ ವ್ಯಥೆಗೆ ದುಃಖವನ್ನು ಕೂಡಿಸಿದ್ದಾನೆ; ನಿಟ್ಟುಸುರು ಬಿಡುವದರಿಂದ ದಣಿದಿ ದ್ದೇನೆ; ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿ ಯಲ್ಲಾ.

ಹೊಶೇಯ 12:8

ಎಫ್ರಾಯಾಮು--ಆದಾಗ್ಯೂ ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು; ನನ್ನ ಕೆಲಸಗಳಲ್ಲೆಲ್ಲಾ ಪಾಪವಾದ ದುಷ್ಟತ್ವವನ್ನು ಅವರು ನನ್ನಲ್ಲಿ ಕಂಡುಕೊಳ್ಳುವದಿಲ್ಲ.

Interlinear

Choose Theme