ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಪಟ್ಟಣದ ಮೇಲೆಯೂ ಅದರ ಎಲ್ಲಾ ಊರುಗಳ ಮೇಲೆಯೂ ನಾನು ಅದಕ್ಕೆ ವಿರೋಧವಾಗಿ ಹೇಳಿದ ಕೇಡನ್ನೆಲ್ಲಾ ಬರ ಮಾಡುತ್ತೇನೆ; ಅವರು ನನ್ನ ಮಾತುಗಳನ್ನು ಕೇಳದ ಹಾಗೆ ತಮ್ಮ ಕುತ್ತಿಗೆಗಳನ್ನು ಕಠಿಣ ಮಾಡಿಕೊಂಡಿದ್ದಾರೆ.
Cross references
ದೇವರಲ್ಲದ್ದರಿಂದ ಅವರು ನನಗೆ ರೋಷ ಹುಟ್ಟಿಸಿ ದರು; ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪ ವನ್ನು ಎಬ್ಬಿಸಿದರು. ಜನವಲ್ಲದ್ದರಿಂದ ನಾನು ಅವರಿಗೆ ರೋಷ ಹುಟ್ಟಿಸುವೆನು; ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.
ಕೇಳದೆಯೂ ನೀನು ಅವರ ಮಧ್ಯದಲ್ಲಿ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕ ಮಾಡದೆಯೂ ತಮ್ಮ ಕುತ್ತಿಗೆಯನ್ನು ಕಠಿಣ ಮಾಡಿ ಎದುರುಬಿದ್ದು ತಮ್ಮ ದಾಸತ್ವಕ್ಕೆ ತಿರಿಗಿ ಹೋಗುವ ಹಾಗೆ ಅಧಿಪತಿಯನ್ನು ನೇಮಿಸಿದರು. ಆದರೆ ನೀನು ಮನ್ನಿಸುವ ದೇವರಾಗಿಯೂ ಕೃಪಾಪೂರ್ಣನೂ ಅಂತಃ ಕರಣವೂ ದೀರ್ಘಶಾಂತಿಯೂ ಮಹಾದಯೆಯೂ ಆಗಿರುವವನಾಗಿಯೂ ಇರುವದರಿಂದ ಅವರನ್ನು ಕೈ ಬಿಡಲಿಲ್ಲ.
ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ.
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ನೀವು ಎತ್ತರ ಮಾಡಿರಿ, ಎತ್ತರ ಮಾಡಿರಿ ಮಾರ್ಗ ವನ್ನು ಸಿದ್ಧಮಾಡಿರಿ, ನನ್ನ ಜನರ ಮಾರ್ಗದಿಂದ ಎಡ ವುದನ್ನು ಎತ್ತಿಹಾಕಿರಿ ಎಂದು ಹೇಳುವನು.
ಹಾದುಹೋಗಿರಿ, ಬಾಗಿಲುಗಳನ್ನು ಹಾದು ಹೋಗಿರಿ. ಜನರಿಗೆ ದಾರಿಯನ್ನು ಸಿದ್ಧಮಾಡಿರಿ; ಎತ್ತರ ಮಾಡಿರಿ, ರಾಜ ಮಾರ್ಗವನ್ನು ಎತ್ತರಮಾಡಿರಿ; ಕಲ್ಲುಗಳನ್ನು ಆಯ್ದು ಕೂಡಿಸಿರಿ; ಜನಗಳಿಗೋಸ್ಕರ ಧ್ವಜವನ್ನು ಎತ್ತಿರಿ.
ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು.
ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ಯುವತಿಯು ತನ್ನ ಆಭರಣಗಳನ್ನೂ ಮದಲಗಿತ್ತಿಯು ತನ್ನ ಒಡ್ಯಾಣವನ್ನೂ ಮರೆತುಬಿಡುವಳೋ? ಆದಾಗ್ಯೂ ನನ್ನ ಜನರು ಲೆಕ್ಕವಿಲ್ಲದಷ್ಟು ದಿನಗಳು ನನ್ನನ್ನು ಮರೆತುಬಿಟ್ಟಿದ್ದಾರೆ.
ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಲ್ಪಟ್ಟಿತು, ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿ ಕೆಗಳೇ; ಯಾಕಂದರೆ ತಮ್ಮ ಮಾರ್ಗವನ್ನು ಡೊಂಕು ಮಾಡಿ ತಮ್ಮ ದೇವರಾದ ಕರ್ತನನ್ನು ಮರೆತುಬಿಟ್ಟಿ ದ್ದರು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ನನ್ನ ಪ್ರಿಯಳಿಗೆ ನನ್ನ ಮನೆಯಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡಿಸಿದ್ದಾಳೆ; ಪರಿಶುದ್ಧ ಮಾಂಸವು ನಿನ್ನನ್ನು ಬಿಟ್ಟು ಹೋಯಿತು; ನೀನು ಕೆಟ್ಟತನ ಮಾಡುವಾಗ ಉಲ್ಲಾಸ ಪಡುತ್ತೀ.
ಅರಣ್ಯದಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ಕೆಡಿಸುವವರು ಬಂದಿದ್ದಾರೆ; ಕರ್ತನ ಕತ್ತಿಯು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯ ವರೆಗೂ ತಿಂದು ಬಿಡುತ್ತದೆ ಯಾವ ಮನುಷ್ಯನಿಗೂ ಸಮಾಧಾನವಿಲ್ಲ.
ಗೋಧಿಯನ್ನು ಬಿತ್ತಿ, ಮುಳ್ಳು ಗಳನ್ನು ಕೊಯ್ಯುವರು; ಕಷ್ಟಪಟ್ಟರೂ ಪ್ರಯೋಜನ ವಾಗುವದಿಲ್ಲ; ಕರ್ತನ ಕೋಪದ ಉರಿಯಿಂದ ನಿಮ್ಮ ಬೆಳೆಯ ವಿಷಯವಾಗಿ ನಾಚಿಕೆಪಡುವಿರಿ.
ಆದರೆ ಅವರು ಕೇಳದೆಹೋದರೆ, ಆ ಜನಾಂಗವನ್ನು ಸಂಪೂ ರ್ಣವಾಗಿ ಕಿತ್ತು ನಾಶಮಾಡುವೆನು ಎಂದು ಕರ್ತನು ಅನ್ನುತ್ತಾನೆ.
ಕರ್ತನು ನನಗೆ ಹೀಗೆ ಹೇಳಿದನು--ಹೋಗಿ ಜನರ ಮಕ್ಕಳ ಬಾಗಿಲಲ್ಲಿಯೂ ಯೆಹೂದದ ಅರಸರು ಪ್ರವೇಶಿಸುವಲ್ಲಿಯೂ ಹೊರಡುವಲ್ಲಿಯೂ ಯೆರೂಸ ಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು
ಆದದರಿಂದ ಕರ್ತನು ಹೇಳುವದೇ ನಂದರೆ--ಅನ್ಯಜನಾಂಗಗಳಲ್ಲಿ ವಿಚಾರಿಸಿರಿ; ಇಂಥವು ಗಳನ್ನು ಯಾರು ಕೇಳಿದ್ದಾರೆ? ಇಸ್ರಾಯೇಲೆಂಬ ಕನ್ಯೆಯು ಮಹಾಭಯಂಕರವಾದದ್ದನ್ನು ಮಾಡಿದ್ದಾಳೆ.
ಇದಲ್ಲದೆ ಈ ಪಟ್ಟಣದ ಎಲ್ಲಾ ಸಂಪತ್ತನ್ನೂ ಅದರ ಎಲ್ಲಾ ಕಷ್ಟಾರ್ಜಿತವನ್ನೂ ಅದರ ಎಲ್ಲಾ ಅಮೂಲ್ಯವಾದವುಗಳನ್ನೂ ಯೆಹೂ ದದ ಅರಸರ ಎಲ್ಲಾ ಭಂಡಾರಗಳನ್ನೂ ಒಪ್ಪಿಸುವೆನು; ಶತ್ರುಗಳ ಕೈಗೆ ಅವರನ್ನು ಒಪ್ಪಿಸುವೆನು. ಅವರು ಅವುಗಳನ್ನು ಸುಲುಕೊಂಡು ತಕ್ಕೊಂಡು ಬಾಬೆಲಿಗೆ ಒಯ್ಯುವರು.
ತರುವಾಯ ಅವಳು ನನ್ನನ್ನು ಮರೆತು ಕಿವಿಯೋಲೆ ಮೊದಲಾದ ಒಡವೆಗಳಿಂದ ಸಿಂಗರಿಸಿಕೊಂಡು, ಮಿಂಡರ ಹಿಂದೆ ಹೋಗಿ ಬಾಳ್ ದೇವತೆಗಳ ದಿವಸಗಳಲ್ಲಿ ಧೂಪ ಸುಟ್ಟಿದ್ದಕ್ಕೆ ನಾನು ಅವಳನ್ನು ದಂಡಿಸುವೆನು ಎಂದು ಕರ್ತನು ಹೇಳುತ್ತಾನೆ.
ಅವರು ಅವರನ್ನು ಕರೆದ ಹಾಗೆಯೇ ಅವರಿಂದ ಹೊರಟು ಹೋದರು; ಅವರು ಬಾಳ್ ದೇವತೆಗಳಿಗೆ ಬಲಿ ಅರ್ಪಿಸಿದರು; ಕೆತ್ತಲ್ಪಟ್ಟ ವಿಗ್ರಹಗಳಿಗೆ ಧೂಪವನ್ನು ಸುಟ್ಟರು.
ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ.
ಅವನು ತನ್ನ ತಂದೆಯನ್ನಾಗಲೀ ತಾಯಿಯನ್ನಾ ಗಲೀ ಸನ್ಮಾನಿಸುವದರಿಂದ ಬಿಡುಗಡೆಯಾಗಿದ್ದಾನೆಂದು ನೀವು ಹೇಳುತ್ತೀರಿ. ಹೀಗೆ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ನಿರರ್ಥಕ ಮಾಡಿದ್ದೀರಿ.
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.