Home Bibles ☰ Books ಯೆರೆಮಿಯ 19:9 · ಕನ್ನಡ ಬೈಬಲ್
ಯೆರೆಮಿಯ 19:9 · ಕನ್ನಡ ಬೈಬಲ್

ಆಗ ನಾನು ಆತನನ್ನು ಕುರಿತು ಏನೂ ಹೇಳುವದಿಲ್ಲ, ಇಲ್ಲವೆ ಆತನ ಹೆಸರಿನಲ್ಲಿ ಇನ್ನು ಮಾತನಾಡುವದೇ ಇಲ್ಲ ಎಂದು ಅಂದುಕೊಂಡೆನು; ಆದರೆ ಆತನ ವಾಕ್ಯವು ನನ್ನ ಎಲುಬುಗಳಲ್ಲಿ ಮುಚ್ಚಲ್ಪಟ್ಟಿರುವ ಸುಡುವ ಬೆಂಕಿಯ ಹಾಗೆ ನನ್ನ ಹೃದಯದಲ್ಲಿ ಇತ್ತು; ಬಿಗಿಹಿಡಿದು ದಣಿ ದೆನು. ನನ್ನಿಂದ ಆಗದೆ ಹೋಯಿತು.

Cross references

ಲೇವ್ಯಕಾಂಡ 26:29

ನೀವು ನಿಮ್ಮ ಕುಮಾರ ಕುಮಾರ್ತೆಯರ ಮಾಂಸವನ್ನು ತಿನ್ನುವಿರಿ.

ದ್ವಿತೀಯೋಪದೇಶಕಾಂಡ 28:53

ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ.

2 ಅರಸುಗಳು 6:26

ಇಸ್ರಾ ಯೇಲಿನ ಅರಸನು ಗೋಡೆಯ ಮೇಲೆ ಹಾದು ಹೋಗುತ್ತಿರುವಾಗ ಒಬ್ಬ ಸ್ತ್ರೀಯು ಅವನನ್ನು ಬೇಡುವ ವಳಾಗಿ--ನನ್ನ ಯಜಮಾನನೇ, ಅರಸನೇ, ಸಹಾಯ ಮಾಡು ಅಂದಳು.

2 ಅರಸುಗಳು 25:3

ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು.

ಯೆಶಾಯ 9:20

ಅವನು ಬಲಗಡೆಯಲ್ಲಿರುವದನ್ನು ಕಿತ್ತುಕೊಂಡು (ತಿಂದರೂ) ಹಸಿದೇ ಇರುವನು; ಅವನು ಎಡಗಡೆ ಯಲ್ಲಿರುವದನ್ನು ತಿಂದರೂ ಅವು ಅವನನ್ನು ತೃಪ್ತಿ ಪಡಿಸಲಾರವು. ಒಬ್ಬೊಬ್ಬನೂ ತನ್ನ ತನ್ನ ತೋಳಿನ ಮಾಂಸವನ್ನು ತಿನ್ನುವನು.ಹೀಗೆ ಮನಸ್ಸೆಯು ಎಫ್ರಾಯಾಮನ್ನು ಮತ್ತು ಎಫ್ರಾಯಾಮು ಮನಸ್ಸೆ ಯನ್ನು ತಿಂದುಬಿಡುವವು; ಅವರು ಒಟ್ಟಾಗಿ ಸೇರಿ ಯೆಹೂದಕ್ಕೆ ವಿರೋಧವಾಗಿರುವರು. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

ಯೆರೆಮಿಯ 38:9

ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.

ವಿಲಾಪಗಳು 2:20

ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?

ವಿಲಾಪಗಳು 4:10

ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.

ಯೆಹೆಜ್ಕೇಲ 5:10

ಆದದರಿಂದ ನಿನ್ನ ಮಧ್ಯದಲ್ಲಿ ತಂದೆಗಳೇ ಮಕ್ಕಳನ್ನು ತಿನ್ನುವರು; ಮಕ್ಕಳು ಅವರ ತಂದೆಗಳನ್ನು ತಿನ್ನುವರು; ಹೀಗೆ ನಿನ್ನಲ್ಲಿ ನ್ಯಾಯ ತೀರ್ಪನ್ನು ನಡಿಸುವೆನು. ನಿನ್ನಲ್ಲಿ ಉಳಿದವರನ್ನೆಲ್ಲಾ ಗಾಳಿ ಬೀಸುವ ಎಲ್ಲಾ ದಿಕ್ಕಿಗೂ ಚದರಿಸುವೆನು.

Interlinear

Choose Theme