Home Bibles ಯೆರೆಮಿಯ 2:12 · ಕನ್ನಡ ಬೈಬಲ್
ಯೆರೆಮಿಯ 2:12 · ಕನ್ನಡ ಬೈಬಲ್

ಓ ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ, ಭಯಭ್ರಾಂತಿಗೊಳ್ಳಿರಿ, ತೀರ ಹಾಳಾಗಿರಿ ಎಂದು ಕರ್ತನು ಅನ್ನುತ್ತಾನೆ.

Cross references

ದ್ವಿತೀಯೋಪದೇಶಕಾಂಡ 32:1

ಓ ಆಕಾಶಗಳೇ ಕಿವಿಗೊಡಿರಿ, ನಾನು ಮಾತನಾಡುತ್ತೇನೆ; ಓ ಭೂಮಿಯೇ, ನನ್ನ ಬಾಯಿಯ ಮಾತುಗಳನ್ನು ಕೇಳು.

ಯೆಶಾಯ 1:2

ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.

ಯೆಶಾಯ 29:9

ತಾಮಸಮಾಡಿ ಆಶ್ಚರ್ಯಪಡಿರಿ, ನೀವು ಕೂಗಿರಿ, ಕೂಗಾಡಿರಿ ಇವರು ಅಮಲೇರಿದ್ದಾರೆ; ಆದರೆ ದ್ರಾಕ್ಷಾ ರಸದಿಂದಲ್ಲ; ಅವರು ಕೂಗಾಡುತ್ತಾರೆ, ಆದರೆ ಮದ್ಯ ದಿಂದಲ್ಲ.

ಯೆರೆಮಿಯ 6:19

ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?

ಯೆರೆಮಿಯ 18:13

ಯಾವ ಮನೆಗಳ ಮಾಳಿಗೆಗಳ ಮೇಲೆ ಆಕಾಶದ ಸೈನ್ಯಕ್ಕೆಲ್ಲಾ ಧೂಪಸುಟ್ಟು ಬೇರೆ ದೇವರುಗಳಿಗೆ ಪಾನದ ಅರ್ಪಣೆ ಗಳನ್ನು ಹೊಯ್ದಿದ್ದಾರೋ ಆ ಎಲ್ಲಾ ಮನೆಗಳ ನಿಮಿತ್ತ ವಾಗಿ ಯೆರೂಸಲೇಮಿನ ಮನೆಗಳೂ ಯೆಹೂದದ ಅರಸರ ಮನೆಗಳೂ ತೋಫೆತಿನ ಸ್ಥಳದ ಹಾಗೆ ಅಶುದ್ಧವಾಗುವವು.

ಯೆರೆಮಿಯ 22:29

ನನ್ನ ವಾಕ್ಯವು ಬೆಂಕಿಯ ಹಾಗಲ್ಲವೋ ಎಂದು ಕರ್ತನು ಅನ್ನುತ್ತಾನೆ. ಅದು ಬಂಡೆಯನ್ನು ತುಂಡು ಮಾಡುವ ಸುತ್ತಿಗೆಯ ಹಾಗಲ್ಲವೋ?

ಮೀಕ 6:2

ಓ ಬೆಟ್ಟಗಳೇ, ಭೂಮಿಯ ಬಲವಾದ ಅಸ್ತಿವಾರಗಳಾದ ಬಂಡೆಗಳೇ, ಕರ್ತನ ವ್ಯಾಜ್ಯವನ್ನು ಕೇಳಿರಿ; ಕರ್ತನಿಗೆ ತನ್ನ ಜನರ ಸಂಗಡ ವ್ಯಾಜ್ಯ ಉಂಟು, ಇಸ್ರಾಯೇಲಿನ ಸಂಗಡ ಆತನು ತರ್ಕಿಸುತ್ತಾನೆ.

ಮತ್ತಾಯ 27:45

ಆಗ ಆರನೇ ತಾಸಿನಿಂದ ಒಂಭತ್ತನೇ ತಾಸಿನವರೆಗೆ ದೇಶದ ಮೇಲೆಲ್ಲಾ ಕತ್ತಲೆ ಇತ್ತು.

ಮತ್ತಾಯ 27:50

ಯೇಸು ತಿರಿಗಿ ಮಹಾಶಬ್ದದಿಂದ ಕೂಗಿ ಆತ್ಮವನ್ನು ಒಪ್ಪಿಸಿಕೊಟ್ಟನು.

Interlinear

Choose Theme