Home Bibles ಯೆರೆಮಿಯ 2:19 · ಕನ್ನಡ ಬೈಬಲ್
ಯೆರೆಮಿಯ 2:19 · ಕನ್ನಡ ಬೈಬಲ್

ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.

Cross references

ನಿರ್ಗಮಕಾಂಡ 33:6

ಅದರಂತೆಯೇ ಇಸ್ರಾಯೇಲ್‌ ಮಕ್ಕಳು ಹೋರೆಬ್‌ ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.

ನ್ಯಾಯಾಧಿಪತಿಗಳು 10:13

ಆದರೂ ನೀವು ನನ್ನನ್ನು ಬಿಟ್ಟು ಅನ್ಯದೇವರುಗಳನ್ನು ಸೇವಿಸಿದಿರಿ; ಆದಕಾರಣ ನಾನು ನಿಮ್ಮನ್ನು ಇನ್ನು ಮುಂದೆ ಬಿಡಿಸುವದಿಲ್ಲ.

1 ಅರಸುಗಳು 18:18

ಅದಕ್ಕೆ ಅವನು--ನಾನು ಇಸ್ರಾಯೇಲ್ಯರನ್ನು ಕಳವಳಪಡಿಸು ವದಿಲ್ಲ; ಆದರೆ ನೀನೂ ನಿನ್ನ ತಂದೆಯ ಮನೆಯವರೂ ಕರ್ತನ ಆಜ್ಞೆಗಳನ್ನು ತೊರೆದುಬಿಡುವದರಿಂದಲೇ; ಮತ್ತು ಬಾಳನನ್ನು ಹಿಂಬಾಲಿಸಿದಿ.

2 ದಿನವೃತ್ತಾಂತ 12:5

ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟುಬಿಟ್ಟೆನೆಂದು ಕರ್ತನು ಹೇಳು ತ್ತಾನೆ ಅಂದನು.

2 ದಿನವೃತ್ತಾಂತ 21:10

ಹೀಗೆಯೇ ಇಂದಿನ ವರೆಗೂ ಎದೋಮ್ಯರು ಯೆಹೂದ್ಯರ ಅಧೀನಕ್ಕೆ ತಿರುಗಿ ಬಿದ್ದರು. ಅದೇ ಕಾಲದಲ್ಲಿ ಅವರು ತಮ್ಮ ಪಿತೃಗಳ ದೇವರಾದ ಕರ್ತನನ್ನು ಬಿಟ್ಟುಬಿಟ್ಟದ್ದರಿಂದ ಲಿಬ್ನವು ಅವರ ಅಧೀನಕ್ಕೆ ತಪ್ಪಿ ತಿರುಗಿಬಿತ್ತು.

2 ದಿನವೃತ್ತಾಂತ 25:16

ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

ಯೋಬ 20:11

ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.

ಕೀರ್ತನೆಗಳು 36:1

ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ.

ಸಾಮೇತಿಗಳು 1:31

ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ ತಮ್ಮ ಸ್ವಂತ ಕುಯುಕ್ತಿಗಳಿಂದಲೇ ತುಂಬಿಕೊಳ್ಳುವರು.

ಸಾಮೇತಿಗಳು 5:22

ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.

ಯೆಶಾಯ 3:9

ಅವರ ಮುಖಭಾವವೇ ಅವರಿಗೆ ವಿರುದ್ಧವಾಗಿ ಸಾಕ್ಷಿಯಾಗಿದೆ. ತಮ್ಮ ಪಾಪ ಗಳನ್ನು ಸೊದೋಮಿನವರಂತೆ ಮರೆಮಾಜದೆ ಪ್ರಕಟ ಮಾಡುತ್ತಾರೆ. ಅವರ ಆತ್ಮಕ್ಕೆ ಅಯ್ಯೋ! ತಮಗೆ ತಾವೇ ಕೇಡನ್ನು ಪ್ರತೀಕಾರವಾಗಿ ಮಾಡಿಕೊಂಡಿದ್ದಾರೆ.

ಯೆಶಾಯ 5:5

ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

ಯೆಶಾಯ 50:1

ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.

ಯೆರೆಮಿಯ 1:16

ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.

ಯೆರೆಮಿಯ 2:17

ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟಿದ್ದರಿಂದಲೇ ಇದನ್ನು ನಿನಗೆ ನೀನೇ ಮಾಡಿಕೊಂಡಿ ಅಲ್ಲವೋ?

ಯೆರೆಮಿಯ 3:6

ಕರ್ತನು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನಂದರೆ--ಹಿಂದಿರುಗಿದ ಇಸ್ರಾ ಯೇಲು ಮಾಡಿದ್ದನ್ನು ನೀನು ನೋಡಿದ್ದಿಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ಹೋಗಿ ಸೂಳೆತನ ಮಾಡಿದ್ದಾಳೆ.

ಯೆರೆಮಿಯ 3:11

ಕರ್ತನು ನನಗೆ ಹೇಳಿದ್ದೇ ನಂದರೆ--ಹಿಂದಿರುಗಿದ ಇಸ್ರಾಯೇಲು ವಂಚನೆಯುಳ್ಳ ಯೆಹೂದಕ್ಕಿಂತ ಹೆಚ್ಚಾಗಿ ತನ್ನನ್ನು ನೀತಿವಂತಳನ್ನಾಗಿ ಮಾಡಿಕೊಂಡಿದ್ದಾಳೆ.

ಯೆರೆಮಿಯ 3:22

ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ.

ಯೆರೆಮಿಯ 4:18

ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?

ಯೆರೆಮಿಯ 5:6

ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.

ಯೆರೆಮಿಯ 5:22

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

ಯೆರೆಮಿಯ 7:19

ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?

ಯೆರೆಮಿಯ 8:5

ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6

ಯೆರೆಮಿಯ 13:22

ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.

ಯೆಹೆಜ್ಕೇಲ 23:30

ನೀನು ಅನ್ಯಜನಾಂಗಗಳ ಹಿಂದೆ ಹೋಗಿ ವ್ಯಭಿಚರಿಸಿದ್ದರಿಂದಲೂ ಅವರ ವಿಗ್ರಹ ಗಳಿಂದ ನಿನ್ನನ್ನು ಅಪವಿತ್ರಪಡಿಸಿಕೊಂಡಿದ್ದರಿಂದಲೂ ಇವುಗಳನ್ನು ನಾನು ನಿನಗೆ ಮಾಡುತ್ತೇನೆ.

ಹೊಶೇಯ 4:16

ಹಿಂಜರಿಯುವ ಕಡಸಿನ ಹಾಗೆ ಇಸ್ರಾಯೇಲು ಹಿಂಜ ರಿಯುತ್ತದೆ; ಈಗ ಕರ್ತನು ವಿಸ್ತಾರ ಸ್ಥಳದಲ್ಲಿರುವ ಕುರಿಮರಿಯ ಹಾಗೆ ಅವರನ್ನು ಮೇಯಿಸುವನು.

ಹೊಶೇಯ 5:5

ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ. ಆದದರಿಂದ ಇಸ್ರಾಯೇಲು ಮತ್ತು ಎಫ್ರಾಯಾಮು ತಮ್ಮ ಕೆಟ್ಟ ತನದಲ್ಲಿ ಬೀಳುವವು. ಯೆಹೂದವು ಅವರೊಂದಿಗೆ ಬೀಳುವದು.

ಹೊಶೇಯ 9:1

ಓ ಇಸ್ರಾಯೇಲೇ, ಬೇರೆ ಜನರು ಉಲ್ಲಾ ಸಿಸುವ ಪ್ರಕಾರ ಸಂತೋಷಪಡಬೇಡ; ನಿನ್ನ ದೇವರನ್ನು ನೀನು ಬಿಟ್ಟು ವ್ಯಭಿಚಾರ ಮಾಡಿದ್ದೀ, ಎಲ್ಲಾ ಧಾನ್ಯದ ಕಣಗಳಲ್ಲಿ ಕೂಲಿಯನ್ನು ಪ್ರೀತಿ ಮಾಡಿದ್ದೀ.

ಹೊಶೇಯ 11:7

ನನ್ನ ಜನರು ನನ್ನ ಕಡೆಯಿಂದ ಹಿಂಜರಿಯಬೇಕೆಂದು ತೀರ್ಮಾನಿಸಿದ್ದಾರೆ; ಅವರನ್ನು ಮಹೋನ್ನತನ ಬಳಿಗೆ ಕರೆದರೂ ಒಬ್ಬನಾದರೂ ಆತನನ್ನು ಉನ್ನತ ಪಡಿಸಲಾರನು.

ಹೊಶೇಯ 14:1

ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;

ಆಮೋಸ 8:10

ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.

ಜೆಕರ್ಯ 7:11

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ರೋಮಾಪುರದವರಿಗೆ 3:18

ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.

Interlinear

Choose Theme