Home Bibles ಯೆರೆಮಿಯ 21:4 · ಕನ್ನಡ ಬೈಬಲ್
ಯೆರೆಮಿಯ 21:4 · ಕನ್ನಡ ಬೈಬಲ್

ನೀವು ನಿಶ್ಚಯವಾಗಿ ಈ ಕಾರ್ಯವನ್ನು ಮಾಡಿದರೆ ದಾವೀದನ ಸಿಂಹಾಸನದ ಮೇಲೆ ಕೂತುಕೊಳ್ಳು ವವರೂ ರಥಗಳಲ್ಲಿಯೂ ಕುದುರೆಗಳ ಮೇಲೆಯೂ ಸವಾರಿಮಾಡುವ ಅರಸರ ತಮ್ಮ ಸೇವಕರ ಜನರ ಸಹಿತವಾಗಿ, ಈ ಮನೆಯ ಬಾಗಿಲುಗಳಿಂದ ಪ್ರವೇಶಿಸು ವರು.

Cross references

ಯೆಶಾಯ 5:5

ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

ಯೆಶಾಯ 10:4

ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವದೇ ಇವರ ಗತಿ. ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇರುವದು.

ಯೆಶಾಯ 13:4

ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ.

ಯೆರೆಮಿಯ 32:5

ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

ಯೆರೆಮಿಯ 33:5

ಸಮಾಧಾನದಲ್ಲಿ ಸಾಯುವಿ; ಹಿಂದೆ ಇದ್ದ ಪೂರ್ವದ ಅರಸನಾದ ನಿನ್ನ ಪಿತೃಗಳನ್ನು ಸುಟ್ಟ ಪ್ರಕಾರ ನಿನಗೋಸ್ಕರ (ಸುಗಂಧ ಗಳನ್ನು) ಸುಡುವರು; ಹಾ, ಒಡೆಯನೇ, ಎಂದು ಹೇಳಿ ನಿನಗೋಸ್ಕರ ಗೋಳಾಡುವರು; ನಾನೇ ವಾಕ್ಯವನ್ನು ನುಡಿದಿದ್ದೇನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 37:8

ಎಬೆದ್ಮೆಲೆ ಕನು ಅರಸನ ಮನೆಯಿಂದ ಹೊರಟು ಅರಸನ ಸಂಗಡ ಮಾತ ನಾಡಿ ಹೇಳಿದ್ದೇನಂದರೆ--

ಯೆರೆಮಿಯ 37:10

ಪಟ್ಟಣದಲ್ಲಿ ಇನ್ನು ಮೇಲೆ ರೊಟ್ಟಿ ಇಲ್ಲ ಅಂದನು. ಆಗ ಅರಸನು ಕೂಷ್ಯನಾದ ಎಬೆದ್ಮೆಲೆಕನಿಗೆ ನೀನು ಇಲ್ಲಿಂದ ಮೂವತ್ತು ಮಂದಿ ಮನುಷ್ಯರನ್ನು ಕರಕೊಂಡು ಹೋಗಿ ಪ್ರವಾದಿಯಾದ ಯೆರೆವಿಾಯನನ್ನು ಅವನು ಸಾಯುವದಕ್ಕಿಂತ ಮುಂಚೆ ಕುಣಿಯೊಳಗಿಂದ ಎತ್ತೆಂದು ಆಜ್ಞಾಪಿಸಿದನು.

ಯೆರೆಮಿಯ 38:2

ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.

ಯೆರೆಮಿಯ 38:17

ಆದರೆ ಆ ದಿನದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಕರ್ತನು ಅನ್ನುತ್ತಾನೆ; ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲ್ಪಡುವದಿಲ್ಲ.ನಾನು ನಿಶ್ಚಯವಾಗಿ ನಿನ್ನನ್ನು ಬಿಡಿಸುವೆನು; ನೀನು ಕತ್ತಿಯಿಂದ ಬೀಳುವದಿಲ್ಲ; ಆದರೆ ನೀನು ನನ್ನಲ್ಲಿ ನಂಬಿಕೆ ಇಟ್ಟದ್ದರಿಂದ ನಿನ್ನ ಪ್ರಾಣವು ನಿನಗೆ ಕೊಳ್ಳೆಯಾಗಿರುವದೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 39:3

ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.

ವಿಲಾಪಗಳು 2:5

ಕರ್ತನು ಶತ್ರುವಿನಂತೆ ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾನೆ; ಆತನು ಅವನ ಅರಮನೆಗಳನ್ನೆಲ್ಲಾ ನುಂಗಿಬಿಟ್ಟಿದ್ದಾನೆ, ಆತನು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾನೆ; ಯೆಹೂದದ ಮಗಳ ದುಃಖವನ್ನೂ ಪ್ರಲಾಪವನ್ನೂ ಹೆಚ್ಚಿಸಿದ್ದಾನೆ.

ವಿಲಾಪಗಳು 2:7

ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.

ಯೆಹೆಜ್ಕೇಲ 16:37

ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು.

ಹೊಶೇಯ 9:12

ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!

ಜೆಕರ್ಯ 14:2

ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.

ಮತ್ತಾಯ 22:7

ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.

Interlinear

Choose Theme