Home Bibles ☰ Books ಯೆರೆಮಿಯ 23:4 · ಕನ್ನಡ ಬೈಬಲ್
ಯೆರೆಮಿಯ 23:4 · ಕನ್ನಡ ಬೈಬಲ್

ಆಗ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --

Cross references

ಲೇವ್ಯಕಾಂಡ 26:9

ನಾನು ನಿಮ್ಮನ್ನು ಲಕ್ಷಿಸಿ ಅಭಿವೃದ್ಧಿಮಾಡಿ ಹೆಚ್ಚಿಸಿ ನಿಮ್ಮ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು.

ಅಂಕೆಗಳ ಪುಸ್ತಕ 31:49

ಶತಾಧಿಪತಿಗಳೂ ಮೋಶೆಯ ಬಳಿಗೆ ಬಂದು ಮೋಶೆಗೆ ಅವರು--ನಿನ್ನ ಸೇವಕರಾದ ನಾವು ನಮ್ಮ ಕೈಯಲ್ಲಿದ್ದ ಯುದ್ಧಸ್ಥರ ಲೆಕ್ಕವನ್ನು ತಕ್ಕೊಂಡೆವು; ಅವರೊಳಗೆ ಒಬ್ಬನಾದರೂ ಕಡಿಮೆ ಯಾಗಲಿಲ್ಲ.

ಕೀರ್ತನೆಗಳು 78:70

ಇದಲ್ಲದೆ ತನ್ನ ಸೇವಕನಾದ ದಾವೀದನನ್ನು ಆದುಕೊಂಡು, ಕುರಿ ಹಟ್ಟಿಗಳಿಂದ ಅವನನ್ನು ತೆಗೆದು,

ಯೆಶಾಯ 11:11

ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್‌, ಕೂಷ್‌, ಏಲಾಮ್‌, ಶಿನಾರ್‌, ಹಮಾಥ್‌ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಯೆರೆಮಿಯ 3:14

ಹಿಂಜರಿದ ಮಕ್ಕಳೇ, ತಿರುಗಿಕೊಳ್ಳಿರೆಂದು ಕರ್ತನು ಅನ್ನುತ್ತಾನೆ; ನಾನು ನಿಮ್ಮನ್ನು ಮದುವೆಯಾಗಿದ್ದೇನೆ; ನಿಮ್ಮನ್ನು ಪಟ್ಟಣದೊಳಗಿಂದ ಒಬ್ಬನಂತೆಯೂ ಗೋತ್ರ ದೊಳಗಿಂದ ಇಬ್ಬರಂತೆಯೂ ತೆಗೆದುಕೊಂಡು ಚೀಯೋನಿಗೆ ಕರಕೊಂಡು ಬರುವೆನು.

ಯೆರೆಮಿಯ 3:15

ನನ್ನ ಹೃದ ಯಕ್ಕೆ ಸರಿಯಾದ ಪಾಲಕರನ್ನು ನಿಮಗೆ ಕೊಡುವೆನು; ಅವರು ತಿಳುವಳಿಕೆಯಿಂದಲೂ ಬುದ್ಧಿಯಿಂದಲೂ ನಿಮ್ಮನ್ನು ಪೋಷಿಸುವರು.

ಯೆರೆಮಿಯ 30:10

ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.

ಯೆರೆಮಿಯ 31:10

ನಾನು ಪತ್ರದಲ್ಲಿ ಬರೆದು, ಅದಕ್ಕೆ ಮುದ್ರೆ ಹಾಕಿ, ಸಾಕ್ಷಿಗಳನ್ನಿಟ್ಟು ಬೆಳ್ಳಿಯನ್ನು ತ್ರಾಸಿನಲ್ಲಿ ತೂಕ ಮಾಡಿ ದೆನು.

ಯೆಹೆಜ್ಕೇಲ 34:23

ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.

ಯೆಹೆಜ್ಕೇಲ 34:25

ಅವರ ಸಂಗಡ ಸಮಾ ಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಕೆಟ್ಟ ಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು; ಅವರು ನಿರ್ಭಯವಾಗಿ ಅರಣ್ಯಗಳಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.

ಯೆಹೆಜ್ಕೇಲ 34:27

ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;

ಯೆಹೆಜ್ಕೇಲ 36:11

ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.

ಹೊಶೇಯ 3:3

ಅವಳಿಗೆ ನಾನು ಹೇಳಿದ್ದೇನಂದರೆ--ಬಹಳ ದಿವಸಗಳು ನನ ಗಾಗಿ ಇರಬೇಕು; ನೀನು ವ್ಯಭಿಚಾರವನ್ನು ಮಾಡ ಬಾರದು; ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಾನು ನಿನಗಾಗಿ ಇರುವೆನು.

Interlinear

Choose Theme