Home Bibles ☰ Books ಯೆರೆಮಿಯ 25:13 · ಕನ್ನಡ ಬೈಬಲ್
ಯೆರೆಮಿಯ 25:13 · ಕನ್ನಡ ಬೈಬಲ್

ಹೀಗಿ ರುವದರಿಂದ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನೂ ತಿದ್ದಿಕೊಳ್ಳಿರಿ; ನಿಮ್ಮ ದೇವರಾದ ಕರ್ತನ ಸ್ವರಕ್ಕೆ ವಿಧೇಯರಾಗಿರಿ; ಆಗ ಕರ್ತನು ನಿಮಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯಕ್ಕಾಗಿ ಪಶ್ಚಾತ್ತಾಪಪಡು ವನು.

Cross references

ಯೆಶಾಯ 55:11

ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.

ಯೆರೆಮಿಯ 1:5

ನಾನು ನಿನ್ನನ್ನು ಹೊಟ್ಟೆಯಲ್ಲಿ ನಿರ್ಮಿಸುವದಕ್ಕಿಂತ ಮುಂಚೆ ನಿನ್ನನ್ನು ತಿಳಿದಿದ್ದೆನು. ನೀನು ಗರ್ಭದಿಂದ ಹೊರಗೆ ಬರುವದಕ್ಕಿಂತ ಮುಂಚೆ ನಿನ್ನನ್ನು ಪರಿಶುದ್ಧ ಮಾಡಿದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯನ್ನಾಗಿ ನೇಮಿಸಿದೆನು ಅಂದನು.

ಯೆರೆಮಿಯ 1:10

ನೋಡು, ನಿನ್ನನ್ನು ಕೀಳುವದಕ್ಕೂ ಕೆಳಗೆ ಹಾಕಿ ಬಿಡುವದಕ್ಕೂ ನಾಶಮಾಡುವದಕ್ಕೂ ಕೆಡವಿಹಾಕುವದಕ್ಕೂ ಕಟ್ಟುವದಕ್ಕೂ ನೆಡುವದಕ್ಕೂ ಜನಾಂಗಗಳ ಮೇಲೆಯೂ ರಾಜ್ಯಗಳ ಮೇಲೆಯೂ ಈ ದಿನ ನಿನ್ನನ್ನು ನೇಮಿಸಿದ್ದೇನೆ ಅಂದನು.

ದಾನಿಯೇಲ 5:28

ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.

ದಾನಿಯೇಲ 5:31

ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.

ಪ್ರಕಟನೆ 10:11

ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.

Interlinear

Choose Theme