Home Bibles ಯೆರೆಮಿಯ 25:16 · ಕನ್ನಡ ಬೈಬಲ್
ಯೆರೆಮಿಯ 25:16 · ಕನ್ನಡ ಬೈಬಲ್

ಆಗ ಪ್ರಧಾನರೂ ಜನರೆಲ್ಲರೂ ಯಾಜಕರಿಗೂ ಪ್ರವಾದಿಗಳಿಗೂ--ಈ ಮನುಷ್ಯನು ಮರಣದ ನಿರ್ಣ ಯಕ್ಕೆ ತಕ್ಕವನಲ್ಲ; ನಮ್ಮ ದೇವರಾದ ಕರ್ತನ ಹೆಸರಿ ನಲ್ಲಿ ನಮ್ಮ ಸಂಗಡ ಮಾತನಾಡಿದ್ದಾನೆ ಅಂದರು.

Cross references

ಯೆರೆಮಿಯ 13:12

ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.

ಯೆರೆಮಿಯ 13:14

ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.

ಯೆರೆಮಿಯ 45:5

ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 48:26

ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಯೆರೆಮಿಯ 51:7

ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.

ವಿಲಾಪಗಳು 3:15

ಆತನು ನನ್ನನ್ನು ಕಹಿಯಿಂದ ತುಂಬಿಸಿ ಮಾಚಿ ಪತ್ರೆಯಿಂದ ನನ್ನನ್ನು ಅಮಲೇರಿಸಿದ್ದಾನೆ.

ವಿಲಾಪಗಳು 4:21

ಎದೋಮಿನ ಮಗಳೇ, ಊಚ್‌ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.

ಯೆಹೆಜ್ಕೇಲ 23:32

ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿನ್ನ ಸಹೋದರಿಯ ಆಳವಾದ ದೊಡ್ಡ ಪಾತ್ರೆಯಲ್ಲಿ ಕುಡಿಯುವಿ. ನೀನು ಹಾಸ್ಯಕ್ಕೂ ನಿಂದೆಗೂ ಗುರಿ ಯಾಗುವಿ. ಅದೇ ನಿನಗೆ ಹೆಚ್ಚಾಗುವದು.

ನಹೂಮ 3:11

ನೀನು ಸಹ ಅಮಲೇರಿದ್ದೀ, ಅಡಗಿಕೊಳ್ಳುವಿ; ನೀನು ಸಹ ಶತ್ರುವಿನ ನಿಮಿತ್ತ ತ್ರಾಣ ವನ್ನು ಹುಡುಕುವಿ.

ಪ್ರಕಟನೆ 14:8

ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ಪ್ರಕಟನೆ 14:10

ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ಪ್ರಕಟನೆ 16:9

ಮನುಷ್ಯರು ಬಲವಾದ ಕಾವಿನಿಂದ ಕಂದಿಹೋದರೂ ಅವರು ದೇವರನ್ನು ಘನಪಡಿಸುವ ಹಾಗೆ ಮಾನಸಾಂತರ ಮಾಡಿಕೊಳ್ಳದೆ ಈ ಉಪದ್ರವ ಗಳ ಮೇಲೆ ಅಧಿಕಾರವುಳ್ಳ ದೇವರ ನಾಮವನ್ನು ದೂಷಿಸಿದರು.

ಪ್ರಕಟನೆ 18:3

ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.

Interlinear

Choose Theme