ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.
Cross references
ಅವನು ಹೊಸ ವಸ್ತ್ರವನ್ನು ಹೊದ್ದು ಕೊಂಡಿದ್ದನು. ಅವರಿಬ್ಬರೂ ಹೊಲದಲ್ಲಿ ಒಂಟಿಯಾ ಗಿದ್ದರು. ಆಗ ಅಹೀಯನು ತನ್ನ ಮೇಲೆ ಇರುವ ವಸ್ತ್ರವನ್ನು ಹಿಡಿದು ಹನ್ನೆರಡು ತುಂಡುಗಳಾಗಿ ಹರಿದು ಯಾರೊಬ್ಬಾಮನಿಗೆ--ಈ ಹತ್ತು ತುಂಡುಗಳನ್ನು ನೀನು ತೆಗೆದುಕೋ.
ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
ಅದೇ ಸಮಯದಲ್ಲಿ ಕರ್ತನು ಆಮೋ ಚನ ಮಗನಾದ ಯೆಶಾಯನಿಗೆ ಹೋಗಿ ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು, ನಿನ್ನ ಪಾದಗಳ ಲ್ಲಿರುವ ಕೆರಗಳನ್ನು ತೆಗೆದಿಡು ಎಂದು ಹೇಳಿದನು. ಅವನು ಹಾಗೆ ಮಾಡಿ ಬೆತ್ತಲೆಯಾಗಿ ಕೆರವಿಲ್ಲದೆ ತಿರು ಗುತ್ತಿದ್ದನು.
ಕ್ಷಾಮವನ್ನು ಕುರಿತು ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು.
ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
ಯೆರೆವಿಾಯನು ಈ ಮಾತುಗಳನ್ನು ಪ್ರವಾದಿಸಲಾಗಿ ಕರ್ತನ ಆಲಯದಲ್ಲಿ ಮುಖ್ಯ ಅಧಿಕಾರಿಯಾಗಿದ್ದ ಯಾಜಕನಾದ ಇಮ್ಮೇರನ ಮಗನಾದ ಪಷ್ಹೂರನು ಕೇಳಿದನು.
ಆಗ ಅರಸನಾದ ಯೆಹೋಯಾಕೀಮನೂ ಅವನ ಪರಾಕ್ರಮಶಾಲಿಗಳೆ ಲ್ಲರೂ ಪ್ರಧಾನರೆಲ್ಲರೂ ಅವನ ಮಾತುಗಳನ್ನು ಕೇಳಿ ದಾಗ ಅರಸನು ಅವನನ್ನು ಕೊಂದುಹಾಕುವದಕ್ಕೆ ಹುಡುಕಿದನು; ಅದರೆ ಊರೀಯನು ಅದನ್ನು ಕೇಳಿ ಭಯಪಟ್ಟು ಓಡಿಹೋಗಿ ಐಗುಪ್ತಕ್ಕೆ ಸೇರಿಕೊಂಡನು.
ಆಗ ಪ್ರವಾದಿಯಾದ ಹನನ್ಯನು ಆ ನೊಗವನ್ನು ಪ್ರವಾದಿಯಾದ ಯೆರೆವಿಾಯನ ಕುತ್ತಿಗೆಯ ಮೇಲಿನಿಂದ ಮುರಿದು ಹಾಕಿದ ಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ--
ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
ಆಗ ನನ್ನನ್ನು ಕರೆಯುವಿರಿ; ಹೋಗಿ ನನಗೆ ಪ್ರಾರ್ಥನೆ ಮಾಡುವಿರಿ; ನಿಮಗೆ ಕಿವಿಗೊಡುವೆನು.
ಇದಲ್ಲದೆ ಮನುಷ್ಯಪುತ್ರನೇ, ನೀನು ಒಂದು ಹಂಚನ್ನು ತೆಗೆದುಕೊಂಡು ನಿನ್ನ ಮುಂದಿಟ್ಟು ಅದರ ಮೇಲೆ ಯೆರೂಸಲೇಮ್ ನಗರದ ನಕ್ಷೆಯನ್ನು ಬರೆ.
ಕರ್ತನ ವಾಕ್ಯವು ಮತ್ತೆ ಬಂದು ನನಗೆ ಹೇಳಿದ್ದೇನಂದರೆ--
ಮನುಷ್ಯ ಪುತ್ರನೇ, ನೀನು ತೆಗೆದುಹಾಕು ವದಕ್ಕೆ ಸಾಮಾನುಗಳನ್ನು ಸಿದ್ಧಮಾಡಿ ಹಗಲಿನಲ್ಲಿ ಅವರ ದೃಷ್ಟಿಯಿಂದ ತೊಲಗಿ ಹೋಗು; ಹೌದು, ಅವರ ಕಣ್ಣುಗಳ ಮುಂದೆಯೇ ನಿನ್ನ ಸ್ಥಳವನ್ನು ಬಿಟ್ಟು ಬೇರೊಂದು ಸ್ಥಳಕ್ಕೆ ಹೋಗು; ಅವರು ತಿರುಗಿ ಬೀಳುವ ಮನೆತನದವರಾದಾಗ್ಯೂ ಒಂದು ವೇಳೆ ಮನಸ್ಸು ಮಾಡಿಯಾರು.
ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ.
ದೇವರಾದ ಕರ್ತನು ನನಗೆ ಹೀಗೆ ತೋರಿಸಿದನು; ಇಗೋ, ಹಿಂಗಾರು ಮಳೆ ಬಿದ್ದು ಪೈರು ಸೊಂಪಾಗುವದಕ್ಕೆ ಆರಂಭವಾದಾಗ ಅಂದರೆ, ರಾಜಾದಾಯದ ಹುಲ್ಲನ್ನು ಕೊಯ್ದ ಮೇಲೆ ಬೆಳೆಯು ವೃದ್ಧಿಯಾಗುತ್ತಿದ್ದಾಗ ಇಗೋ, ಕರ್ತನು ಮಿಡತೆಗಳನ್ನು ಉಂಟುಮಾಡಿದನು.
ಕರ್ತನಾದ ದೇವರು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನಾದ ದೇವರು ಬೆಂಕಿಯಿಂದ ತರ್ಕ ಮಾಡುವದಕ್ಕೆ ಕರೆದನು. ಅದು ದೊಡ್ಡ ಅಗಾಧವನ್ನೂ ನುಂಗಿತು ಮತ್ತು ವಿಭಾಗವನ್ನು ತಿಂದುಬಿಟ್ಟಿತು.