ಆದರೆ ಕರ್ತನು ನಮಗೆ ಬಾಬೆಲಿನಲ್ಲಿ ಪ್ರವಾದಿ ಗಳನ್ನು ಎಬ್ಬಿಸಿದ್ದಾನೆಂದು ನೀವು ಹೇಳಿದ್ದರಿಂದ
Cross references
ನಿನ್ನ ತಾಯಿಯ ಮಗನಾದ ನಿನ್ನ ಸಹೋದರ ನಾಗಲಿ ಮಗನಾಗಲಿ ಮಗಳಾಗಲಿ ಮಗ್ಗುಲಲ್ಲಿರುವ ಹೆಂಡತಿಯಾಗಲಿ ನಿನ್ನ ಪ್ರಾಣದಂತೆ ನಿನಗಿರುವ ಸ್ನೇಹಿತ ನಾಗಲಿ ನೀನೂ ನಿನ್ನ ಪಿತೃಗಳೂ ತಿಳಿಯದ ಬೇರೆ ದೇವರುಗಳನ್ನು
ಆದರೆ ನಾನು ಮಾತನಾಡಲು ಆಜ್ಞಾಪಿಸದೆ ಇರುವದನ್ನು ನನ್ನ ಹೆಸರಿನಿಂದ ಮಾತನಾಡುವದಕ್ಕೆ ಅಹಂಕಾರ ತೋರಿ ಸುವ ಪ್ರವಾದಿಯೂ ಬೇರೆ ದೇವರುಗಳ ಹೆಸರಿ ನಿಂದ ಮಾತನಾಡುವವನೂ ಆದ ಆ ಪ್ರವಾದಿಯೂ ಸಾಯಬೇಕು.
ಅದಕ್ಕೆ ಆತನು--ನೀನು ಅವ ನನ್ನು ಮರುಳುಗೊಳಿಸುವಿ ಮತ್ತು ಜಯಿಸುವಿ. ನೀನು ಹೋಗಿ ಹಾಗೆ ಮಾಡು ಅಂದನು. ಆದದರಿಂದ ಇಗೋ, ಈಗ ಕರ್ತನು ಈ ಎಲ್ಲಾ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳಾದ ಆತ್ಮವನ್ನು ಇಟ್ಟಿದ್ದಾನೆ; ಇದ ಲ್ಲದೆ ಕರ್ತನು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾನೆ ಅಂದನು.
ನಿನ್ನನ್ನು ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗ ಳೊಂದಿಗೆ ಹಾದುಹೋಗುವಂತೆ ಮಾಡುವೆನು. ಯಾಕಂದರೆ ನನ್ನ ಕೋಪದಲ್ಲಿ ಬೆಂಕಿ ಹತ್ತಿದೆ, ಅದು ನಿಮ್ಮ ಮೇಲೆ ಉರಿಯುವದು.
ಈ ಪಟ್ಟಣದ ನಿವಾಸಿಗಳನ್ನೂ ಮನುಷ್ಯರನ್ನೂ ಮೃಗ ಗಳನ್ನೂ ಸಹಿತವಾಗಿ ಹೊಡೆಯುವೆನು; ಅವರು ದೊಡ್ಡ ಜಾಡ್ಯದಿಂದ ಸಾಯುವರು.
ಪ್ರವಾದಿಯಾದ ಯೆರೆವಿಾಯನು ಪ್ರವಾದಿಯಾದ ಹನನ್ಯನಿಗೆ ಹೇಳಿದ್ದೇನಂದರೆ--ಹನ ನ್ಯನೇ, ಕೇಳು; ಕರ್ತನು ನಿನ್ನನ್ನು ಕಳುಹಿಸಲಿಲ್ಲ; ನೀನು ಈ ಜನರನ್ನು ಸುಳ್ಳಿನಲ್ಲಿ ನಂಬಿಕೆ ಇಡುವಂತೆ ಮಾಡುತ್ತೀ.
ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
ಮನುಷ್ಯಪುತ್ರನೇ, ಪ್ರವಾದಿ ಸುತ್ತಿರುವ ಇಸ್ರಾಯೇಲಿನ ಪ್ರವಾದಿಗಳಿಗೆ ವಿರುದ್ಧ ವಾಗಿ ನೀನು ಪ್ರವಾದಿಸಿ, ತಮ್ಮ ಸ್ವಂತ ಹೃದಯಗ ಳೊಳಗಿಂದ ಪ್ರವಾದಿಸುತ್ತಿರುವವರಿಗೆ ಹೀಗೆ ಹೇಳು --ಕರ್ತನ ವಾಕ್ಯವನ್ನು ಕೇಳಿರಿ;
ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.
ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ.
ಆಗುವದೇನಂದರೆ, ಯಾವನಾದರೂ ಇನ್ನು ಪ್ರವಾದಿ ಸಿದರೆ ಅವನ ಹೆತ್ತವರಾದ ತಂದೆತಾಯಿಗಳು ಅವ ನಿಗೆ--ನೀನು ಬದುಕಬಾರದು, ಕರ್ತನ ಹೆಸರಿನಲ್ಲಿ ಸುಳ್ಳು ಹೇಳುತ್ತೀ ಎಂದು ಹೇಳುವರು; ಅವನು ಪ್ರವಾದಿಸುವಾಗ ಅವನ ಹೆತ್ತವರಾದ ತಂದೆತಾಯಿ ಗಳು ಅವನನ್ನು ನೂಕಿಬಿಡುವರು.