Home Bibles ಯೆರೆಮಿಯ 30:20 · ಕನ್ನಡ ಬೈಬಲ್
ಯೆರೆಮಿಯ 30:20 · ಕನ್ನಡ ಬೈಬಲ್

ಎಫ್ರಾಯಾಮನು ನನಗೆ ಪ್ರಿಯಕುಮಾರನೋ? ಅವನು ಆನಂದವುಳ್ಳ ಮಗುವೋ? ನಾನು ಅವನಿಗೆ ವಿರೋಧವಾಗಿ ಮಾತ ನಾಡಿದಂದಿನಿಂದ ಅವನನ್ನು ಇನ್ನು ಬಹಳವಾಗಿ ಜ್ಞಾಪಕಮಾಡುತ್ತೇನೆ; ಆದದರಿಂದ ನನ್ನ ಕರುಳುಗಳು ಅವನಿಗೋಸ್ಕರ ಕಳವಳಪಡುತ್ತವೆ. ನಾನು ನಿಶ್ಚಯವಾಗಿ ಅವನನ್ನು ಕನಿಕರಿಸುವೆನೆಂದು ಕರ್ತನು ಅನ್ನುತ್ತಾನೆ.

Cross references

ಆದಿಕಾಂಡ 17:5

ಮಾತ್ರವಲ್ಲದೆ ನಿನ್ನ ಹೆಸರು ಇನ್ನು ಅಬ್ರಾಮ ಎಂದು ಕರೆಯಲ್ಪಡದೆ ನಿನ್ನ ಹೆಸರು ಅಬ್ರಹಾಮನೆಂದು ಹೆಸರಿರುವದು; ಯಾಕಂದರೆ ನಾನು ನಿನ್ನನ್ನು ಅನೇಕ ಜನಾಂಗಗಳ ತಂದೆಯನ್ನಾಗಿ ಮಾಡಿದ್ದೇನೆ.

ಕೀರ್ತನೆಗಳು 90:16

ನಿನ್ನ ಸೇವಕರಿಗೆ ನಿನ್ನ ಕೆಲಸವೂ ಅವರ ಮಕ್ಕಳಿಗೆ ನಿನ್ನ ಪ್ರಭೆಯೂ ತೋರಿಬರಲಿ.ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;

ಕೀರ್ತನೆಗಳು 102:18

ಇದು ಮುಂದಿನ ಸಂತತಿಗೋಸ್ಕರ ಬರೆಯಲ್ಪಡುವದು; ಹುಟ್ಟಲಿಕ್ಕಿರುವ ಜನರು ಕರ್ತನನ್ನು ಸ್ತುತಿಸುವರು.

ಕೀರ್ತನೆಗಳು 102:28

ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.

ಯೆಶಾಯ 1:26

ನಿನ್ನ ನ್ಯಾಯಾಧಿಪತಿಗಳನ್ನು ಮುಂಚಿನ ಹಾಗೆಯೂ ನಿನ್ನ ಆಲೋಚನಾ ಪರರನ್ನು ಪ್ರಾರಂಭ ದಲ್ಲಿದ್ದ ಹಾಗೆಯೂ ತಿರಿಗಿ ಒದಗಿಸಿಕೊಡುವೆನು: ತರುವಾಯ ನೀನು ನೀತಿಯುಳ್ಳ ಪಟ್ಟಣವೆಂದೂ ನಂಬಿಗಸ್ತಿಕೆಯ ಪಟ್ಟಣವೆಂದೂ ಕರೆಯಲ್ಪಡುವಿ.

ಯೆಶಾಯ 49:26

ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.

ಯೆಶಾಯ 51:22

ತನ್ನ ಜನರಿಗೋಸ್ಕರ ವಾದಿಸುವ ನಿನ್ನ ದೇವರೂ ನಿನ್ನ ಕರ್ತನಾಗಿರುವ ಕರ್ತನೂ ಹೀಗನ್ನು ತ್ತಾನೆ--ಇಗೋ, ನಾನು ನಿನ್ನ ಕೈಯೊಳಗಿಂದ ತತ್ತರಿಸು ವಂಥ ಪಾತ್ರೆಯನ್ನೂ ನನ್ನ ಉಗ್ರವಾದ ಪಾತ್ರೆಯ ಮಡ್ಡಿಯನ್ನೂ ತೆಗೆದುಹಾಕಿದ್ದೇನೆ; ಇನ್ನು ಮೇಲೆ ನೀನು ಅದನ್ನು ತಿರಿಗಿ ಕುಡಿಯುವದೇ ಇಲ್ಲ.ಆದರೆ ನಾವು ಹಾದುಹೋಗುವಂತೆ ಬಗ್ಗಿಕೋ ಎಂದು ನಿನ್ನ ಪ್ರಾಣಕ್ಕೆ ಹೇಳಿ, ನಿನ್ನನ್ನು ಹಿಂಸಿಸಿದವನ ಕೈಯಲ್ಲಿ ಅದನ್ನು ನಾನು ಇಡುತ್ತೇನೆ; ನೀನು ಹಾದುಹೋಗುವ ವರಿಗೆ ನಿನ್ನ ಶರೀರವನ್ನು ನೆಲದಂತೆಯೂ ಬೀದಿ ಯಂತೆಯೂ ಇಟ್ಟಿಯಲ್ಲಾ.

ಯೆಶಾಯ 54:14

ನೀನು ನೀತಿಯಲ್ಲಿ ನೆಲೆಗೊಂಡಿರುವಿ; ಹಿಂಸೆ ಯಿಂದ ದೂರವಾಗಿರುವಿ; ನೀನು ಭೀತಿಯಿಂದ ಭಯ ಪಡುವದಿಲ್ಲ; ಅದು ನಿನ್ನ ಸವಿಾಪಕ್ಕೆ ಬಾರದು.

ಯೆರೆಮಿಯ 2:3

ಇಸ್ರಾಯೇಲು ಕರ್ತನಿಗೆ ಪರಿಶುದ್ಧವೂ ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿತ್ತು; ಅದನ್ನು ತಿಂದುಬಿಟ್ಟವರೆಲ್ಲರೂ ಅಪರಾಧಿ ಗಳಾಗುವರು; ಅವರಿಗೆ ಕೇಡು ಬರುವದೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 30:16

ಕರ್ತನು ಹೀಗೆ ಹೇಳು ತ್ತಾನೆ--ನಿನ್ನ ಸ್ವರವನ್ನು ಅಳದ ಹಾಗೆಯೂ ಕಣ್ಣುಗಳು ಕಣ್ಣೀರು ಇಡದ ಹಾಗೆಯೂ ಬಿಗಿ ಹಿಡಿ; ನಿನ್ನ ಕೆಲಸಕ್ಕೆ ಪ್ರತಿಫಲ ಉಂಟೆಂದು ಕರ್ತನು ಅನ್ನುತ್ತಾನೆ; ಅವರು ಶತ್ರುವಿನ ದೇಶದಿಂದ ತಿರುಗಿ ಬರುವರು.

ಯೆರೆಮಿಯ 50:33

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.

ಯೆರೆಮಿಯ 50:34

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.

ವಿಲಾಪಗಳು 5:21

ಕರ್ತನೇ, ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ಆಗ ನಾವು ತಿರುಗಿಕೊಳ್ಳುವೆವು, ಹಳೆಯ ದಿನಗಳ ಹಾಗೆ ನಮ್ಮ ದಿನಗಳನ್ನು ನೂತನಮಾಡು.ಆದರೆ ನಮ್ಮನ್ನು ಪೂರ್ಣವಾಗಿ ತಳ್ಳಿಬಿಟ್ಟಿರುವಿ; ನಮಗೆ ವಿರುದ್ಧವಾಗಿ ನೀನು ಬಹಳ ಕೋಪಗೊಂಡಿರುವಿ.

ಜೆಕರ್ಯ 10:6

ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.

Interlinear

Choose Theme