ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
Cross references
ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
ಏಳನೇ ತಿಂಗಳು ಬಂದ ತರುವಾಯ ಇಸ್ರಾಯೇಲ್ ಮಕ್ಕಳು ಪಟ್ಟಣಗಳಲ್ಲಿ ಇರುವಾಗ ಜನರು ಒಬ್ಬ ಮನುಷ್ಯನೇ ಎಂಬಂತೆ ಯೆರೂಸಲೇಮಿನಲ್ಲಿ ಕೂಡಿಕೊಂಡರು.
ಅವರು ಯೆರೂಸಲೇಮಿನಲ್ಲಿದ್ದ ದೇವರ ಆಲಯಕ್ಕೆ ಬಂದ ಎರಡನೇ ವರುಷದ ಎರ ಡನೇ ತಿಂಗಳಲ್ಲಿ ಶೆಯಲ್ತಿಯೇಲನ ಮಗನಾದ ಜೆರುಬ್ಬಾ ಬೆಲನೂ ಯೋಚಾದಾಕನ ಮಗನಾದ ಯೇಷೂ ವನೂ ಉಳಿದ ಅವರ ಸಹೋದರರಾದ ಯಾಜಕರೂ ಲೇವಿಯರೂ ಸೆರೆಯಿಂದ ಯೆರೂಸಲೇಮಿಗೆ ಬಂದ ಎಲ್ಲರೂ ಪ್ರಾರಂಭಿಸಿ ಇಪ್ಪತ್ತು ವರುಷ ಪ್ರಾಯಕ್ಕೆ ಹೆಚ್ಚಿದ ಲೇವಿಯರನ್ನು ಕರ್ತನ ಆಲಯದ ಕೆಲಸ ನಡಿಸುವದಕ್ಕೆ ಇಟ್ಟರು.
ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬಂದರೆ ಎಷ್ಟೋ ಒಳ್ಳೇದು. ದೇವರು ತನ್ನ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬನು ಉಲ್ಲಾಸಿಸುವನು, ಇಸ್ರಾಯೇಲನು ಸಂತೋಷಿ ಸುವನು.
ಓ ಕರ್ತನೇ, ದಕ್ಷಿಣದಲ್ಲಿರುವ ಹೊಳೆಗಳ ಹಾಗೆ ಸೆರೆಯಿಂದ ನಮ್ಮನ್ನು ತಿರಿಗಿ ಬರಮಾಡು.
ಇಗೋ, ಅವರು ನನಗೆ-- ಕರ್ತನ ವಾಕ್ಯವು ಎಲ್ಲಿ? ಅದು ಈಗ ಬರಲಿ ಅನ್ನುತ್ತಾರೆ.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ನಾನೇ ಕರ್ತನೆಂದು ನನ್ನನ್ನು ತಿಳುಕೊಳ್ಳುವದಕ್ಕೆ ಅವರಿಗೆ ಹೃದಯವನ್ನು ಕೊಡುವೆನು. ಅವರು ನನ್ನ ಜನರಾಗಿ ರುವರು; ನಾನು ಅವರ ದೇವರಾಗಿರುವೆನು; ತಮ್ಮ ಪೂರ್ಣ ಹೃದಯದಿಂದ ನನ್ನ ಬಳಿಗೆ ಹಿಂತಿರುಗಿಕೊಳ್ಳು ವರು.
ಹನನ್ಯನು ಜನರೆಲ್ಲರ ಮುಂದೆ ಹೇಳಿದ್ದೇನಂದರೆ --ಕರ್ತನು ಹೀಗೆ ಹೇಳುತ್ತಾನೆ--ಇದೇ ಪ್ರಕಾರ ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರುಷದೊಳಗಾಗಿ ಎಲ್ಲಾ ಜನಾಂಗಗಳ ಕುತ್ತಿ ಗೆಯ ಮೇಲಿನಿಂದ ಮುರಿದು ಹಾಕುವೆನು ಅಂದನು. ಆಗ ಪ್ರವಾದಿಯಾದ ಯೆರೆವಿಾಯನು ತನ್ನ ಮಾರ್ಗ ವಾಗಿ ಹೋದನು.
ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ.
ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು.
ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ.
ಅವರು ಅದರಲ್ಲಿ ಸೇರಿ ಅದನ್ನು ಸ್ವಾಧೀನಪಡಿಸಿಕೊಂಡರು; ಆದರೆ ಅವರು ನಿನ್ನ ಸ್ವರಕ್ಕೆ ಕಿವಿಗೊಡಲಿಲ್ಲ; ನಿನ್ನ ನ್ಯಾಯಪ್ರಮಾಣದಲ್ಲಿ ನಡಕೊಳ್ಳ ಲಿಲ್ಲ; ಮಾಡಬೇಕೆಂದು ನೀನು ಅವರಿಗೆ ಆಜ್ಞಾಪಿಸಿ ದ್ದನ್ನೆಲ್ಲಾ ಮಾಡಲಿಲ್ಲ. ಆದದರಿಂದ ಈ ಕೇಡನ್ನೆಲ್ಲಾ ಅವರಿಗೆ ಸಂಭವಿಸುವಂತೆ ಮಾಡಿದ್ದೀ.
ಇಗೋ, ನಾನೇ ಕರ್ತನು, ಸಮಸ್ತ ಜನರ ದೇವರು; ನನಗೆ ಕಠಿಣವಾದ ಕಾರ್ಯ ಒಂದಾದರೂ ಉಂಟೋ?
ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ಅವರು ನನಗೆ ಜನರಾಗಿರುವರು; ನಾನು ಅವರಿಗೆ ದೇವರಾಗಿರುವೆನು.
ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ ಯೆಹೂದದಲ್ಲಿ ಮಿಕ್ಕ ಸಮಸ್ತ ಪಟ್ಟಣಗಳಿಗೂ ಅಂದರೆ ಲಾಕೀಷಿಗೂ ಅಜೇ ಕಕ್ಕೂ ವಿರೋಧವಾಗಿ ಯುದ್ಧ ಮಾಡಿದಾಗಲೇ ಹೇಳಿ ದನು. ಯೆಹೂದದ ಪಟ್ಟಣಗಳಲ್ಲಿ ಈ ಕೋಟೆಯುಳ್ಳ ಪಟ್ಟಣಗಳು ನಿಂತಿದ್ದವು.
ಅವರು ತರುವಾಯ ತಿರುಗಿಕೊಂಡು ತಾವು ಬಿಡುಗಡೆಯಾಗಿ ಕಳುಹಿಸಿಬಿಟ್ಟಿದ್ದ ದಾಸದಾಸಿ ಯರನ್ನು ತಿರಿಗಿ ಬರಮಾಡಿ ಅವರನ್ನು ದಾಸ ದಾಸಿಯ ರಾಗಿಯೂ ವಶಮಾಡಿಕೊಂಡರು.
ಏಳು ವರುಷಗಳ ಕಡೆಯಲ್ಲಿ ಒಬ್ಬೊಬ್ಬನು ತನಗೆ ಮಾರಲ್ಪಟ್ಟಿದ್ದ ತನ್ನ ಸಹೋದರನಾದ ಇಬ್ರಿಯನನ್ನು ಕಳುಹಿಸಬೇಕೆಂದೂ ಅವನು ನಿನಗೆ ಆರು ವರುಷ ಸೇವೆಮಾಡಿದ ಮೇಲೆ ನಿನ್ನ ಕಡೆಯಿಂದ ಅವನನ್ನು ಬಿಡುಗಡೆಯಾಗಿ ಕಳುಹಿಸಬೇಕೆಂದೂ ಹೇಳಿದೆನು; ನಿಮ್ಮ ಪಿತೃಗಳು ನನ್ನ ಮಾತಿಗೆ ಕಿವಿಗೊಡಲಿಲ್ಲ.
ಆಗ ನಾನು ನಿಮ್ಮ ಮೇಲೆ ಇಸ್ರಾಯೇಲ್ ದೇಶದಲ್ಲಿ ನನ್ನ ಕೈಯೆತ್ತಿ ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಿಂದ ನಿಮ್ಮನ್ನು ಕರೆದುಕೊಂಡು ಬರುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಇಸ್ರಾಯೇಲ್ಯರ ಮನೆತನದವರನ್ನು ಚದರಿಹೋದ ಜನಾಂಗದಿಂದ ಒಂದುಗೂಡಿಸಿ ಅನ್ಯಜನಾಂಗಗಳ ಮುಂದೆ ಅವರಲ್ಲಿ ಪರಿಶುದ್ಧವಾದ ಮೇಲೆ ಇಸ್ರಾ ಯೇಲ್ಯರು ನನ್ನ ಸೇವಕನಾದ ಯಾಕೋಬನಿಗೆ ನಾನು ಅನುಗ್ರಹಿಸಿದ ತಮ್ಮ ದೇಶದಲ್ಲಿಯೇ ವಾಸಿಸುವರು;ಅವರು ನಿರ್ಭಯರಾಗಿ ಅಲ್ಲಿ ವಾಸಿಸುವರು; ಮನೆ ಗಳನ್ನು ಕಟ್ಟುವರು; ದ್ರಾಕ್ಷೇತೋಟಗಳನ್ನು ನೆಡುವರು; ಹೌದು, ಸುತ್ತಲಾಗಿ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯರಾಗಿ ವಾಸಿಸುವರು. ಕರ್ತನಾದ ನಾನೇ ಅವರ ದೇವರೆಂದು ತಿಳಿಯುವರು.
ಜನಗಳೊಳಗಿಂದ ಅವುಗಳನ್ನು ಹೊರಗೆ ತೆಗೆದು, ದೇಶಗಳಿಂದ ಅವುಗಳನ್ನು ಕೂಡಿಸಿ, ಅವುಗಳ ಸ್ವಂತ ದೇಶಕ್ಕೆ ತರುವೆನು. ಇಸ್ರಾಯೇಲಿನ ಪರ್ವತಗಳ ಮೇಲೆ ನದಿಗಳಲ್ಲಿ ನಿವಾಸಿಸುವ ಎಲ್ಲಾ ದೇಶಗಳಲ್ಲಿ ಮೇಯಿಸುವೆನು.
ನಾನು ನಿಮ್ಮನ್ನು ಅನ್ಯಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.
ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಇಸ್ರಾಯೇಲನ ಮಕ್ಕಳನ್ನು ಅವರು ಹೋಗಿರುವ ಕಡೆಯಿಂದಲೂ ಅವರನ್ನು ಒಂದುಗೂಡಿಸಿ ಅವರನ್ನು ಅವರ ಸ್ವಂತ ದೇಶಕ್ಕೆ ತರುವೆನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈಗ ನಾನು ಯಾಕೋಬಿನ ಸೆರೆಯನ್ನು ತಿರಿಗಿ ತರುತ್ತೇನೆ, ಸಂಪೂರ್ಣ ಇಸ್ರಾಯೇಲಿನ ಮನೆತನದ ವರ ಮೇಲೆ ಕರುಣೆಯಿಡುತ್ತೆನೆ; ನನ್ನ ಪರಿಶುದ್ಧ ಹೆಸರಿಗಾಗಿ ಸ್ವಗೌರವುಳ್ಳವನಾಗಿರುವೆನು.
ನೀವು ಒಬ್ಬೊಬ್ಬರೂ ಸರಿಯಾಗಿ ಅದನ್ನು ಬಾಧ್ಯವಾಗಿ ಹೊಂದಬೇಕು; ಅದನ್ನು ನಿಮ್ಮ ಪಿತೃಗಳಿಗೆ ಕೊಡುವ ಹಾಗೆ ನಾನು ಕೈ ಎತ್ತಿದ್ದೇನೆ; ಈ ದೇಶವು ನಿಮಗೆ ಬಾಧ್ಯವಾಗಿ ಬರುವದು.
ಇಗೋ, ಆ ದಿನಗಳಲ್ಲಿಯೂ ಆ ಸಮಯದಲ್ಲಿಯೂ ನಾನು ಯೆಹೂದದ ಮತ್ತು ಯೆರೂಸಲೇಮಿನ ಸೆರೆಯನ್ನು ತಿರುಗಿಸುವಾಗ
ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
ದಕ್ಷಿಣದವರು ಏಸಾವನ ಬೆಟ್ಟವನ್ನೂ ಬೈಲಿನವರು ಫಿಲಿಷ್ಟಿಯರನ್ನೂ ಸ್ವತಂತ್ರಿಸಿಕೊಳ್ಳುವರು; ಎಫ್ರಾಯಾಮಿನ ಹೊಲ ಗಳನ್ನು ಸಮಾರ್ಯದ ಹೊಲಗಳನ್ನು ಸಹ ಸ್ವಾಧೀನ ಮಾಡಿಕೊಳ್ಳುವರು ಮತ್ತು ಬೆನ್ಯಾವಿಾನನು ಗಿಲ್ಯಾದನ್ನು ಸ್ವತಂತ್ರಿಸಿಕೊಳ್ಳುವನು.
ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
ಆತನು ತನ್ನ ಶಿಷ್ಯರಿಗೆ--ಮನುಷ್ಯಕುಮಾರನ ದಿವಸಗಳಲ್ಲಿ ಒಂದನ್ನು ನೋಡಬೇಕೆಂದು ನೀವು ಅಪೇಕ್ಷಿಸಿದರೂ ಅದನ್ನು ನೋಡದಂಥ ದಿನಗಳು ಬರುವವು.
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು.