Home Bibles ಯೆರೆಮಿಯ 30:8 · ಕನ್ನಡ ಬೈಬಲ್
ಯೆರೆಮಿಯ 30:8 · ಕನ್ನಡ ಬೈಬಲ್

ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು.

Cross references

ಯೆಶಾಯ 9:4

ಅವನ ನೊಗವನ್ನೂ ಬೆನ್ನನ್ನು ಹೊಡೆದ ಕೋಲನ್ನೂ ಬಿಟ್ಟಿಹಿಡಿದವನ ದೊಣ್ಣೆಯನ್ನೂ ಮಿದ್ಯಾ ನಿನ ದಿನದಲ್ಲಿ ಮುರಿದಂತೆ ಮುರಿದುಬಿಟ್ಟಿದ್ದೀ.

ಯೆಶಾಯ 10:27

ಆ ದಿನದಲ್ಲಿ ಅವರು ಹೊರಿಸಿದ ಹೊರೆಯು ನಿಮ್ಮ ಬೆನ್ನಿನಿಂದಲೂ ಹೂಡಿದ ನೊಗವು ನಿಮ್ಮ ಕುತ್ತಿಗೆಯಿಂದಲೂ ತೊಲಗುವದು; ನೀವು ಅಭಿಷಿಕ್ತರಾದ ಕಾರಣ ನೊಗವು ನಾಶವಾಗಿ ಹೋಗುವದು.

ಯೆಶಾಯ 14:1

ಕರ್ತನು ಯಾಕೋಬ್ಯರನ್ನು ಕರುಣಿಸಿ ಮತ್ತೆ (ಇನ್ನೂ) ಇಸ್ರಾಯೇಲ್ಯರನ್ನು ಆದುಕೊಂಡು ಅವರನ್ನು ತಮ್ಮ ಸ್ವಂತ ದೇಶದಲ್ಲಿ ಸೇರಿಸಬೇಕೆಂದಿದ್ದಾನೆ. ಅನ್ಯರು ಅವರೊಂದಿಗೆ ಕೂಡಿ ಬಂದು ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.

ಯೆಶಾಯ 14:3

ಕರ್ತನು ನಿಮ್ಮ ಸಂಕಟದಿಂದಲೂ ಕಳವಳದಿಂದ ಲೂ ಕಠಿಣವಾದ ಬಿಟ್ಟಿಯ ಸೇವೆಯಿಂದಲೂ ನಿಮ್ಮನ್ನು ವಿಶ್ರಾಂತಿಗೊಳಿಸುವ ದಿನದಲ್ಲಿ ಬಾಬೆಲಿನ ರಾಜನಿಗೆ ವಿರುದ್ಧವಾದ ಈ ಸಾಮತಿಯನ್ನು (ಪದ್ಯವನ್ನು) ನೀವು ಹೀಗೆ ಎತ್ತಿ ಹೇಳಬೇಕು.

ಯೆಶಾಯ 14:25

ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.

ಯೆರೆಮಿಯ 2:20

ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಟ್ಟೆನು; ನೀನು--ನಾನು ವಿಾರುವದಿಲ್ಲ ಎಂದು ನೀನು ಹೇಳಿದಿ; ಆದರೆ ಒಂದೊಂದು ಎತ್ತರವಾದ ಗುಡ್ಡದ ಮೇಲೆಯೂ ಒಂದೊಂದು ಹಸುರಾದ ಮರದ ಕೆಳಗೂ ನೀನು ಸೂಳೆಯಾಗಿ ಅಲೆದಾಡುತ್ತಿ.

ಯೆರೆಮಿಯ 25:14

ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.

ಯೆರೆಮಿಯ 27:2

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.

ಯೆರೆಮಿಯ 27:7

ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು.

ಯೆರೆಮಿಯ 28:4

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಯೆರೂಸಲೇಮಿನಿಂದ ಬಾಬೆಲಿಗೆ ತಾನು ಸೆರೆಯಾಗಿ ಸಾಗಿಸಿದವರಿಗೆ ಹೇಳುವದೇನಂದರೆ--

ಯೆರೆಮಿಯ 28:10

ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.

ಯೆರೆಮಿಯ 28:13

ನನ್ನನ್ನು ಹುಡುಕುವಿರಿ; ಪೂರ್ಣ ಹೃದಯದಿಂದ ನನ್ನನ್ನು ಹುಡುಕುವಾಗ ನನ್ನನ್ನು ಕಂಡುಕೊಳ್ಳುವಿರಿ.

ಯೆಹೆಜ್ಕೇಲ 34:27

ಬಯಲಿನ ಮರವು ಅದರ ಫಲವನ್ನು ಕೊಡುವದು, ಭೂಮಿಯು ಅದರ ಆದಾಯವನ್ನು ಕೊಡುವದು, ಅವರು ತಮ್ಮ ದೇಶದಲ್ಲಿ ನಿರ್ಭಯವಾಗಿರುವರು; ನಾನೇ ಅದರ ನೊಗದ ಬಂಧನಗಳನ್ನು ಬಿಡಿಸಿ ಅವರಿಂದ ಸೇವೆ ಮಾಡಿಸಿಕೊಂಡವರ ಕೈಯಿಂದ ಅವರನ್ನು ತಪ್ಪಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು;

ನಹೂಮ 1:13

ಆದರೆ ನಾನು ಈಗ ನಿನ್ನ ಮೇಲಿಂದ ಆತನ ನೊಗವನ್ನು ಮುರಿದು ನಿನ್ನ ಬಂಧನಗಳನ್ನು ಹರಿದುಬಿಡುವೆನು.

Interlinear

Choose Theme