Home Bibles ಯೆರೆಮಿಯ 31:35 · ಕನ್ನಡ ಬೈಬಲ್
ಯೆರೆಮಿಯ 31:35 · ಕನ್ನಡ ಬೈಬಲ್

ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.

Cross references

ಆದಿಕಾಂಡ 1:14

ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;

ಆದಿಕಾಂಡ 1:16

ದೇವರು ಎರಡು ದೊಡ್ಡ ಬೆಳಕುಗಳನ್ನು ಮಾಡಿದನು; ದೊಡ್ಡ ಬೆಳಕು ಹಗಲನ್ನಾಳುವದಕ್ಕೂ ಚಿಕ್ಕ ಬೆಳಕು ರಾತ್ರಿಯನ್ನಾಳು ವದಕ್ಕೂ ಮಾಡಿದ್ದಲ್ಲದೆ ನಕ್ಷತ್ರಗಳನ್ನು ಸಹ ಮಾಡಿ ದನು.

ನಿರ್ಗಮಕಾಂಡ 14:21

ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.

ದ್ವಿತೀಯೋಪದೇಶಕಾಂಡ 4:19

ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.

ಯೋಬ 26:12

ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.

ಯೋಬ 38:10

ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.

ಯೋಬ 38:33

ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?

ಕೀರ್ತನೆಗಳು 19:1

ಆಕಾಶಗಳು ದೇವರ ಮಹಿಮೆಯನ್ನು ಸಾರುತ್ತವೆ; ಅಂತರಿಕ್ಷವು ಆತನ ಕೈ ಕೆಲಸ ವನ್ನು ತೋರಿಸುತ್ತದೆ.

ಕೀರ್ತನೆಗಳು 72:5

ಸೂರ್ಯನೂ ಚಂದ್ರನೂ ಇರುವ ವರೆಗೆ ತಲ ತಲಾಂತರಗಳು ನಿನಗೆ ಭಯಪಡುವರು.

ಕೀರ್ತನೆಗಳು 72:17

ಆತನ ನಾಮವು ಎಂದೆಂದಿಗೂ ಇರುವದು; ಸೂರ್ಯನು ಇರುವವರೆಗೂ ಆತನ ಹೆಸರು ಇರು ವದು. ಮನುಷ್ಯರು ಆತನಲ್ಲಿ ಆಶೀರ್ವಾದ ಹೊಂದು ವರು. ಎಲ್ಲಾ ಜನಾಂಗಗಳು ಆತನನ್ನು ಭಾಗ್ಯವಂತ ನೆಂದು ಕರೆಯುವರು.

ಕೀರ್ತನೆಗಳು 74:13

ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.

ಕೀರ್ತನೆಗಳು 74:16

ಹಗಲು ನಿನ್ನದು; ರಾತ್ರಿಯು ಸಹ ನಿನ್ನದು; ನೀನು ಬೆಳಕನ್ನೂ ಸೂರ್ಯ ನನ್ನೂ ಸಿದ್ಧಮಾಡಿದ್ದೀ.

ಕೀರ್ತನೆಗಳು 78:13

ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.

ಕೀರ್ತನೆಗಳು 89:2

ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.

ಕೀರ್ತನೆಗಳು 89:36

ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು.

ಕೀರ್ತನೆಗಳು 93:3

ಕರ್ತನೇ, ಪ್ರವಾಹಗಳು ಎತ್ತಲ್ಪಟ್ಟಿವೆ; ಪ್ರವಾಹಗಳು ತಮ್ಮ ಶಬ್ದವನ್ನು ಎತ್ತಿವೆ; ಪ್ರವಾಹ ಗಳು ತಮ್ಮ ತೆರೆಗಳನ್ನು ಎತ್ತುತ್ತವೆ.

ಕೀರ್ತನೆಗಳು 106:9

ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.

ಕೀರ್ತನೆಗಳು 107:25

ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.

ಕೀರ್ತನೆಗಳು 114:3

ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್‌ ಹಿಂತಿರುಗಿತು.

ಕೀರ್ತನೆಗಳು 119:89

ಓ ಕರ್ತನೇ, ಎಂದೆಂದಿಗೂ ನಿನ್ನ ವಾಕ್ಯವು ಪರಲೋಕದಲ್ಲಿ ಸ್ಥಿರವಾಗಿದೆ.

ಕೀರ್ತನೆಗಳು 136:7

ದೊಡ್ಡ ಬೆಳಕುಗಳನ್ನು ಉಂಟು ಮಾಡಿದಾತ ನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಕೀರ್ತನೆಗಳು 136:9

ಇರುಳನ್ನು ಆಳುವದಕ್ಕೆ ಚಂದ್ರ ನಕ್ಷತ್ರಗಳನ್ನು ಉಂಟು ಮಾಡಿದಾತನನ್ನು ಕೊಂಡಾಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.

ಕೀರ್ತನೆಗಳು 148:6

ಆತನು ಅವುಗಳನ್ನು ಯುಗಯುಗಗಳಿಗೂ ಸ್ಥಾಪಿಸಿದ್ದಾನೆ; ಆಜ್ಞೆಯನ್ನು ಕೊಟ್ಟಿ ದ್ದಾನೆ, ಅದು ವಿಾರಿ ಹೋಗುವದಿಲ್ಲ.

ಯೆಶಾಯ 48:2

ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

ಯೆಶಾಯ 51:15

ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

ಯೆಶಾಯ 54:5

ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.

ಯೆಶಾಯ 63:12

ಮೋಶೆಯ ಬಲಗೈಯ ಮುಖಾಂ ತರ, ತನ್ನ ಮಹಿಮೆಯುಳ್ಳ ತೋಳಿನಿಂದ ಅವರನ್ನು ನಡಿಸಿದವನೂ ತನಗೆ ನಿತ್ಯವಾದ ಹೆಸರನ್ನುಂಟು ಮಾಡುವ ಹಾಗೆ ಅವರ ಮುಂದೆ ನೀರುಗಳನ್ನು ಭೇದಿಸಿದವನು ಎಲ್ಲಿ?

ಯೆರೆಮಿಯ 5:22

ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.

ಯೆರೆಮಿಯ 10:16

ಸೌಂದರ್ಯವಾದ ಒಳ್ಳೇ ಹಣ್ಣುಗಳುಳ್ಳ ಹಸುರಾದ ಇಪ್ಪೇ ಗಿಡವೆಂದು ಕರ್ತನು ನಿನಗೆ ಹೆಸ ರಿಟ್ಟನು; ದೊಡ್ಡ ಗದ್ದಲದಿಂದ ಅದರ ಮೇಲೆ ಬೆಂಕಿ ಹತ್ತಿಸಿದ್ದಾನೆ ಅದರ ಕೊಂಬೆಗಳು ಮುರಿದು ಹೋಗಿವೆ.

ಯೆರೆಮಿಯ 32:18

ಯಾಜಕರಿಗೂ ಲೇವಿಯರಿಗೂ ನಿತ್ಯವಾಗಿ ನನ್ನ ಮುಂದೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಆಹಾರದ ಅರ್ಪಣೆಗಳನ್ನು ಬೆಂಕಿಯಿಂದ ಅರ್ಪಿಸುವವದಕ್ಕೂ ಬಲಿಗಳನ್ನು ಮಾಡುವದಕ್ಕೂ ಮನುಷ್ಯನು ಇಲ್ಲದೆ ಹೋಗುವದಿಲ್ಲ.

ಯೆರೆಮಿಯ 33:20

ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು.

ಯೆರೆಮಿಯ 50:34

ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.

ಯೆರೆಮಿಯ 51:19

ಇದಲ್ಲದೆ ಬೋಗುಣಿಗಳನ್ನೂ ಅಗ್ನಿಪಾತ್ರೆಗಳನ್ನೂ ಬಟ್ಟಲುಗ ಳನ್ನೂ ಗುಡಾಣಗಳನ್ನೂ ದೀಪಸ್ತಂಭಗಳನ್ನೂ ಸೌಟುಗ ಳನ್ನೂ ಬಟ್ಟಲುಗಳನ್ನೂ ಬಂಗಾರದ್ದಾದರೆ, ಅದರ ಬಂಗಾರವನ್ನೂ ಬೆಳ್ಳಿಯದ್ದಾದರೆ, ಅದರ ಬೆಳ್ಳಿಯನ್ನೂ ಕಾವಲಿನ ಅಧಿಪತಿಯು ತಕ್ಕೊಂಡನು.

ಮತ್ತಾಯ 5:45

ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.

ಮತ್ತಾಯ 8:25

ಆಗ ಆತನ ಶಿಷ್ಯರು ಬಂದು ಆತನನ್ನು ಎಬ್ಬಿಸಿ--ಕರ್ತನೇ ನಮ್ಮನ್ನು ರಕ್ಷಿಸು; ನಾವು ನಾಶವಾಗುತ್ತೇವೆ ಅಂದರು.

Interlinear

Choose Theme