ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
Cross references
ದೇವರನ್ನು ಶೋಧಿಸಿ ಕಂಡುಕೊಳ್ಳುವಿಯೋ? ಸರ್ವಶಕ್ತನ ಸಂಪೂರ್ಣತ್ವವನ್ನು ನಿನ್ನಿಂದ ಕಂಡು ಹಿಡಿಯ ಲಾದೀತೆ?
ಭೂಮಿಯ ವಿಸ್ತಾರ ಗಳವರೆಗೆ ನೀನು ಗ್ರಹಿಸಿದಿಯೋ?ಇದನ್ನೆಲ್ಲಾ ತಿಳು ಕೊಂಡರೆ ತಿಳಿಯಪಡಿಸು.
ಎಂದೆಂದಿಗೂ ಕರುಣೆಯು ಸ್ಥಾಪಿಸಲ್ಪಡು ವದು; ಆಕಾಶಗಳಲ್ಲಿಯೂ ನಿನ್ನ ನಂಬಿಗಸ್ತಿಕೆಯನ್ನು ಸ್ಥಿರಪಡಿಸುವಿ ಎಂದು ಹೇಳಿದ್ದೇನೆ.
ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
ಸಮುದ್ರ ಸಾಗರವನ್ನು ಬರಿದಾದ ತನ್ನ ಕೈಯಿಂದ ಅಳತೆ ಮಾಡಿದವನೂ ಆಕಾಶಗಳ ಮೇರೆಯನ್ನು ಗೇಣಿನಿಂದ ಅಳೆದವನೂ ಭೂಮಿಯ ದೂಳನ್ನು ಅಳತೆ ಮಾಡಿ ತಿಳುಕೊಂಡವನೂ ಬೆಟ್ಟಗಳ ಮಟ್ಟ ವನ್ನೂ ಗುಡ್ಡಗಳನ್ನೂ ತಕ್ಕಡಿಯಿಂದ ತೂಗಿದವನು ಯಾರು?
ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ.
ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.