ಕರ್ತನು ಹೀಗೆ ಹೇಳುತ್ತಾನೆ--ನನ್ನ ನಿಯಮವು ಹಗಲು ರಾತ್ರಿಯ ಸಂಗಡ ಇಲ್ಲದಿದ್ದರೆ ಭೂಮ್ಯಾಕಾಶಗಳ ಕಟ್ಟಳೆಗಳನ್ನು ನಾನು ಸ್ಥಾಪಿಸದಿ ದ್ದರೆ--ಆಗ ಯಾಕೋಬನ ಸಂತಾನವನ್ನೂ ನನ್ನ ಸೇವಕನಾದ ದಾವೀದನನ್ನೂ ಬೇಡವೆಂದು ಬಿಟ್ಟು ಅವನ ಸಂತಾನದಿಂದ ಅಬ್ರಹಾಮ, ಇಸಾಕ, ಯಾಕೋಬ ಇವರ ಸಂತಾನದ ಮೇಲೆ ಆಳುವವರನ್ನು ತಕ್ಕೊಳ್ಳದೆ ಇದ್ದೆನು; ಆದರೆ ನಾನು ಅವರ ಸೆರೆಯಿಂದ ಬಿಡಿಸಿ ಅವರನ್ನು ಕರುಣಿಸುವೆನು.
Cross references
ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಮೇಘಗಳೂ ಕಾರ್ಗತ್ತಲೂ ಆತನ ಸುತ್ತಲು ಅವೆ; ನೀತಿಯೂ ನ್ಯಾಯವೂ ಆತನ ಸಿಂಹಾಸನದ ಸ್ಥಳವಾಗಿದೆ.
ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ.
ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು.
ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರಾದ ಕರ್ತನೂ ಹೇಳುವದೇನಂದರೆ--ಇಗೋ, ನಾನು ಯೆಹೂದದ ಮೇಲೆಯೂ ಯೆರೂಸಲೇಮಿನ ನಿವಾಸಿ ಗಳೆಲ್ಲರ ಮೇಲೆಯೂ ಅವರ ವಿಷಯವಾಗಿ ಹೇಳಿದ ಕೇಡನ್ನೆಲ್ಲಾ ಬರಮಾಡುತ್ತೇನೆ; ನಾನು ಅವರ ಸಂಗಡ ಮಾತನಾಡುವಾಗ ಅವರು ಕೇಳಲಿಲ್ಲ ಅವರನ್ನು ಕರೆಯು ವಾಗ ಉತ್ತರ ಕೊಡಲಿಲ್ಲ.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು.
ಹಾ, ದೇವರ ಜ್ಞಾನದ ಮತ್ತು ತಿಳುವಳಿಕೆಯ ಐಶ್ವರ್ಯವು ಎಷ್ಟೋ ಅಗಾಧ ವಾಗಿದೆ! ಆತನ ತೀರ್ಪುಗಳು ಪರಿಶೋಧನೆಗೂ ಆತನ ಮಾರ್ಗಗಳು ಕಂಡು ಹಿಡಿಯುವದಕ್ಕೂ ಅಸಾಧ್ಯ ವಾಗಿವೆ!