ಆದಾಗ್ಯೂ ಯೆಹೂದದ ಅರಸನಾದ ಚಿದ್ಕೀಯನೇ, ಕರ್ತನ ವಾಕ್ಯ ವನ್ನು ಕೇಳು. ಕರ್ತನು ಹೀಗೆ ಹೇಳುತ್ತಾನೆ--ನೀನು ಕತ್ತಿಯಿಂದ ಸಾಯುವದಿಲ್ಲ.
Cross references
ಆಹಾರಕ್ಕಾಗದ ಮರ ಗಳೆಂದು ನಿನಗೆ ತಿಳಿದಿರುವ ಮರಗಳನ್ನು ಮಾತ್ರ ಕೆಡಿಸಿ ಕಡಿದುಹಾಕಿ ನಿನ್ನ ಸಂಗಡ ಯುದ್ಧಮಾಡುವ ಪಟ್ಟಣಕ್ಕೆ ವಿರೋಧವಾಗಿ ಅದು ಬೀಳುವ ತನಕ ಮುತ್ತಿಗೆ ಹಾಕಬಹುದು.
ಯೆರೂಸಲೇಮಿನ ಮನೆಗ ಳನ್ನು ಲೆಕ್ಕ ಮಾಡಿ ಪೌಳಿಗೋಡೆಯನ್ನು ಭದ್ರಪಡಿ ಸುವದಕ್ಕೆ ನೀವು ಮನೆಗಳನ್ನು ಒಡೆದುಹಾಕುತ್ತೀರಿ.
ಈ ಜನರು ಮಾತನಾಡುವದನ್ನು ನೀನು ನೋಡಲಿಲ್ಲವೊ? ಕರ್ತನು ಆದುಕೊಂಡ ಎರಡು ಗೋತ್ರಗಳನ್ನು ಬೇಡವೆಂದಿದ್ದಾನೆಂದು ಹೇಳಿ ನನ್ನ ಜನರನ್ನು ಇನ್ನು ಅವರ ಮುಂದೆ ಜನಾಂಗವಲ್ಲದ ಹಾಗೆ ಅಸಡ್ಡೆ ಮಾಡಿದ್ದಾರೆ.
ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
ಅವರು ಅರಸರನ್ನು ಧಿಕ್ಕರಿಸುವರು; ಪ್ರಧಾನರು ಅವರಿಗೆ ಪರಿಹಾಸ್ಯ ಮಾಡುವರು. ಕೋಟೆಗಳಿಗೆಲ್ಲಾ ಕುಚೋದ್ಯ ಮಾಡು ವರು. ಮಣ್ಣನ್ನು ಕುಪ್ಪೆಮಾಡಿ ಅದನ್ನು ಹಿಡಿಯುವರು.