ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
Cross references
ಅರಾಮ್ಯರ ಅರಸನಾದ ಬೆನ್ಹದದನು ಅಸ್ವಸ್ಥನಾ ಗಿರುವಾಗ ಎಲೀಷನು ದಮಸ್ಕಕ್ಕೆ ಬಂದನು. ದೇವರ ಮನುಷ್ಯನು ಇಲ್ಲಿಗೆ ಬಂದಿದ್ದಾನೆಂದು ಅವನಿಗೆ ತಿಳಿಸ ಲ್ಪಟ್ಟಿತು.
ಇದಲ್ಲದೆ ಅರಸನು ಯಾಜಕನಾದ ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ್‌ನಿಗೂ ವಿಾಕಾ ಯನ ಮಗನಾದ ಅಕ್ಬೋರ್‌ನಿಗೂ ಲೇಖಕನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯನಿಗೂ ಆಜ್ಞಾಪಿಸಿ ಹೇಳಿದ್ದೇನಂದರೆ--
ಹಾಗೆಯೇ ಯಾಜಕನಾದ ಹಿಲ್ಕೀಯನೂ ಅಹೀಕಾ ಮನೂ ಅಕ್ಬೋರನೂ ಶಾಫಾನನೂ ಅಸಾಯನೂ ಹರ್ಹಸನ ಮೊಮ್ಮಗನೂ ತಿಕ್ವನ ಮಗನೂ ಆದ ವಸ್ತ್ರಗಳ ಕೆಲಸಗಾರರಾದ ಶಲ್ಲೂಮನ ಹೆಂಡತಿಯಾದ ಪ್ರವಾದಿನಿಯಾದ ಹುಲ್ದಳ ಬಳಿಗೆ ಹೋಗಿ ಅವಳ ಸಂಗಡ ಮಾತನಾಡಿದರು. ಅವಳು ಯೆರೂಸಲೇಮಿ ನೊಳಗೆ ಎರಡನೇ ಭಾಗದಲ್ಲಿ ವಾಸವಾಗಿದ್ದಳು.
ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.
ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--
ಈ ಎಜ್ರನು ಇಸ್ರಾ ಯೇಲ್ ದೇವರಾಗಿರುವ ಕರ್ತನು ಕೊಟ್ಟ ಮೋಶೆಯ ನ್ಯಾಯಪ್ರಮಾಣದಲ್ಲಿ ನುರಿತ ಶಾಸ್ತ್ರಿಯಾಗಿದ್ದನು. ಇವನ ಮೇಲೆ ಅವನ ದೇವರಾಗಿರುವ ಕರ್ತನ ಕೈ ಇದ್ದ ಪ್ರಕಾರವೇ ಅರಸನು ಇವನಿಗೆ ಕೇಳಿದ್ದನ್ನೆಲ್ಲಾ ಕೊಟ್ಟನು.
ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು.
ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
ಮನುಷ್ಯನ ಮಾರ್ಗಗಳು ಕರ್ತನನ್ನು ಮೆಚ್ಚಿಸಿದಾಗ ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನ ದಲ್ಲಿರುವಂತೆ ಆತನು ಮಾಡುತ್ತಾನೆ.
ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ.
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
ನಾವು ಮರುದಿನ ಸೀದೋನಿಗೆ ಸೇರಿದೆವು; ಆಗ ಯೂಲ್ಯನು ದಯೆ ತೋರಿಸಿ ಪೌಲನನ್ನು ಒತ್ತಾಯ ಮಾಡಿ ಅವನು ತನ್ನ ಸ್ನೇಹಿತರ ಬಳಿಗೆ ಹೋಗಿ ವಿಶ್ರಮಿಸಿಕೊಳ್ಳುವಂತೆ ಸ್ವಾತಂತ್ರ್ಯವಾಗಿ ಬಿಟ್ಟನು.
ಆದರೆ ಶತಾಧಿಪತಿಯು ಪೌಲನನ್ನು ಉಳಿಸ ಬೇಕೆಂದು ಅಪೇಕ್ಷಿಸಿ ಅವರ ಉದ್ದೇಶವನ್ನು ತಡೆದು ಈಜು ಬಲ್ಲವರು ಮೊದಲು ಸಮುದ್ರದಲ್ಲಿ ಧುಮುಕ ಬೇಕೆಂತಲೂಉಳಿದವರಲ್ಲಿ ಕೆಲವರು ಹಲಿಗೆಗಳ ಮೇಲೆ ಇನ್ನೂ ಕೆಲವರು ಹಡಗಿನ ತುಂಡುಗಳ ಮೇಲೆ ತೀರಕ್ಕೆ ಹೋಗಬೇಕೆಂತಲೂ ಅಪ್ಪಣೆಕೊಟ್ಟನು. ಹೀಗೆ ಎಲ್ಲರೂ ಸುರಕ್ಷಿತವಾಗಿ ತೀರಕ್ಕೆ ಸೇರಿದರು.
ಅವರು ಸಹ ನಮ್ಮನ್ನು ಬಹಳವಾಗಿ ಗೌರವಿಸಿ ಸನ್ಮಾನಿಸಿದರು; ನಾವು ಹೊರಟಾಗ ನಮಗೆ ಅವಶ್ಯ ವಾದವುಗಳನ್ನು ತಂದು ಹಡಗಿನಲ್ಲಿಟ್ಟರು.
ಆದದರಿಂದ--ಕರ್ತನು ನನ್ನ ಸಹಾಯಕನು, ಭಯಪಡೆನು, ಮನುಷ್ಯನು ನನಗೆ ಏನು ಮಾಡಾನು ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.