Home Bibles ☰ Books ಯೆರೆಮಿಯ 41:18 · ಕನ್ನಡ ಬೈಬಲ್
ಯೆರೆಮಿಯ 41:18 · ಕನ್ನಡ ಬೈಬಲ್

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಕೋಪವೂ ನನ್ನ ಉರಿಯೂ ಹೇಗೆ ಯೆರೂಸಲೇಮಿನ ನಿವಾಸಿಗಳ ಮೇಲೆ ಹೊಯ್ಯಲ್ಪಟ್ಟಿತೋ ಹಾಗೆಯೇ ನೀವು ಐಗುಪ್ತಕ್ಕೆ ಹೋದರೆ ನನ್ನ ಉರಿಯು ನಿಮ್ಮ ಮೇಲೆ ಹೊಯ್ಯಲ್ಪ ಡುವದು; ನೀವು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವಿರಿ; ಈ ಸ್ಥಳವನ್ನು ನೀವು ತಿರುಗಿ ನೋಡುವದಿಲ್ಲ.

Cross references

2 ಅರಸುಗಳು 25:22

ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು.

2 ಅರಸುಗಳು 25:25

ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.

ಯೆಶಾಯ 30:16

ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

ಯೆಶಾಯ 57:11

ನೀನು ಸುಳ್ಳು ಹೇಳಿ ನನ್ನನ್ನು ಜ್ಞಾಪಕ ಮಾಡದೆ ಇಲ್ಲವೆ ಅದನ್ನು ಮನಸ್ಸಿಗೆ ತಾರದೆ ಇರುವಾಗ ಯಾರಿಗೆ ಅಂಜಿಕೊಂಡು ಭಯಪಟ್ಟಿ?

ಯೆರೆಮಿಯ 40:5

ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.

ಯೆರೆಮಿಯ 42:11

ಅವನು ಬಂದು ಐಗುಪ್ತದೇಶವನ್ನು ಹೊಡೆದು ಮರಣಕ್ಕೆ ಇರುವವರನ್ನು ಮರಣಕ್ಕೂ ಸೆರೆಗೆ ಇರುವವರನ್ನು ಸೆರೆಗೂ ಕತ್ತಿಗೆ ಇರುವವರನ್ನು ಕತ್ತಿಗೂ ಒಪ್ಪಿಸುವನು.

ಯೆರೆಮಿಯ 43:2

ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಯೆರೂಸಲೇಮಿನ ಮೇಲೆಯೂ ಯೆಹೂದದ ಎಲ್ಲಾ ಪಟ್ಟಣಗಳ ಮೇಲೆಯೂ ಬರಮಾಡಿದ ಎಲ್ಲಾ ಕೇಡನ್ನು ನೀವು ನೋಡಿದ್ದೀರಿ.

ಲೂಕ 12:4

ನನ್ನ ಸ್ನೇಹಿತರಾದ ನಿಮಗೆ ನಾನು ಹೇಳುವದೇನಂದರೆ--ದೇಹವನ್ನು ಕೊಂದು ಅದಕ್ಕಿಂತ ಹೆಚ್ಚೇನೂ ಮಾಡಲಾರ ದವರಿಗೆ ಹೆದರಬೇಡಿರಿ.

Interlinear

Choose Theme