ಅವರು ನನಗೆ ಕೋಪವನ್ನು ಎಬ್ಬಿಸುವ ಹಾಗೆ ತಾವೂ ತಮ್ಮ ತಂದೆಗಳೂ ಅರಿಯದ ಬೇರೆ ದೇವರುಗಳನ್ನು ಸೇವಿಸಿ ಧೂಪಸುಟ್ಟು ಮಾಡಿದ ಕೆಟ್ಟತನದ ನಿಮಿತ್ತ ಇಗೋ, ಅವು ಈ ಹೊತ್ತು ಹಾಳಾಗಿವೆ; ಅವುಗಳಲ್ಲಿ ವಾಸಮಾಡುವವರು ಯಾರೂ ಇಲ್ಲ.
Cross references
ನನ್ನ ಪ್ರೀತಿಗೆ ಬದಲಾಗಿ ನನ್ನನ್ನು ಎದುರಿಸುತ್ತಾರೆ; ಆದರೆ ನಾನು ಪ್ರಾರ್ಥನೆಯಲ್ಲಿಯೇ ಇದ್ದೇನೆ.
ಸೈನ್ಯಗಳ ಕರ್ತನು ಹೇಳುವದೇನಂದರೆ--ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾದ ಈ ಸ್ಥಳದಲ್ಲಿಯೂ ಅದರ ಎಲ್ಲಾ ಪಟ್ಟಣಗಳಲ್ಲಿಯೂ ಇನ್ನು ಮೇಲೆ ತಮ್ಮ ಮಂದೆಗಳನ್ನು ಮಲಗಿಸುವ ಕುರುಬರ ನಿವಾಸಗಳು ಇರುವವು.
ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
ನಿಮ್ಮ ಸಂಗಡ ಯುದ್ಧ ಮಾಡುವ ಕಸ್ದೀಯರ ಸೈನ್ಯವನ್ನೆಲ್ಲಾ ನೀವು ಹೊಡೆದಿ ದ್ದಾಗ್ಯೂ ಗಾಯಪಟ್ಟ ಮನುಷ್ಯರು ಮಾತ್ರ ಅವರೊಳಗೆ ಉಳಿದಿದ್ದಾಗ್ಯೂ ಅವರೇ ತಮ್ಮ ತಮ್ಮ ಡೇರೆಗಳಲ್ಲಿ ಎದ್ದು ಈ ಪಟ್ಟಣವನ್ನು ಬೆಂಕಿಯಿಂದ ಸುಡುವರು.
ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ
ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು.
ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
ಎಲ್ಲಾ ಜನರು ನಿಮ್ಮ ವಿಷಯದಲ್ಲಿ ಒಳ್ಳೇದಾಗಿ ಮಾತನಾಡಿದರೆ ನಿಮಗೆ ಅಯ್ಯೋ! ಅವರ ಪಿತೃಗಳು ಸುಳ್ಳು ಪ್ರವಾದಿಗಳಿಗೆ ಹಾಗೆಯೇ ಮಾಡಿದರು.