Home Bibles ☰ Books ಯೆರೆಮಿಯ 43:7 · ಕನ್ನಡ ಬೈಬಲ್
ಯೆರೆಮಿಯ 43:7 · ಕನ್ನಡ ಬೈಬಲ್

ಆದದರಿಂದ ಈಗ ಇಸ್ರಾಯೇಲಿನ ದೇವರೂ ಸೈನ್ಯಗಳ ದೇವರೂ ಆಗಿರುವ ಕರ್ತನು ಹೀಗೆ ಹೇಳುತ್ತಾನೆ--ಯಾಕೆ ನಿಮಗೆ ಉಳಿದಿರುವ ವರನ್ನು ಮಿಗಿಸದ ಹಾಗೆ ನೀವು ಗಂಡಸರನ್ನೂ ಹೆಂಗಸರನ್ನೂ ಮಗುವನ್ನೂ ಮೊಲೆ ಕೂಸನ್ನೂ ಯೆಹೂದದೊಳಗಿಂದ ಕಡಿದುಬಿಟ್ಟು ನಿಮ್ಮ ಪ್ರಾಣ ಗಳಿಗೆ ದೊಡ್ಡ ಕೇಡನ್ನು ಮಾಡಿಕೊಳ್ಳು ತ್ತೀರಿ?

Cross references

2 ಅರಸುಗಳು 25:26

ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.

2 ದಿನವೃತ್ತಾಂತ 25:16

ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.

ಯೆಶಾಯ 30:4

ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.

ಯೆರೆಮಿಯ 2:16

ನೋಫ್‌ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.

ಯೆರೆಮಿಯ 41:17

ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.

ಯೆರೆಮಿಯ 44:1

ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,

ಯೆಹೆಜ್ಕೇಲ 30:18

ತಹಪನೇಸಿನಲ್ಲಿಯೂ ನಾನು ಐಗುಪ್ತದ ನೊಗ ಗಳನ್ನು ಮುರಿಯುವಾಗ ಹಗಲು ಕತ್ತಲಾಗುವದು. ಅದರ ಶಕ್ತಿಯ ಮದವು ಅಡಗಿ ಹೋಗುವದು, ಅದನ್ನು ಮೇಘವು ಮುಚ್ಚುವದು. ಅದರ ಕುಮಾರಿ ಯರು ಸೆರೆಗೆ ಹೋಗುವರು.

Interlinear

Choose Theme