ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ.
Cross references
ಇಸ್ರಾಯೇಲ್ಯರು ಆ ಪಟ್ಟಣಗಳನ್ನೆಲ್ಲಾ ತೆಗೆದು ಕೊಂಡರು; ಇಸ್ರಾಯೇಲ್ಯರು ಅಮೋರಿಯರ ಸಮಸ್ತ ಪಟ್ಟಣಗಳಲ್ಲಿಯೂ ಹೆಷ್ಬೋನಿನಲ್ಲಿಯೂ ಅದರ ಸಮಸ್ತ ಗ್ರಾಮಗಳಲ್ಲಿಯೂ ವಾಸಮಾಡಿದರು.
ಹೆಷ್ಬೋನು ಅಮೋರಿಯರ ಅರಸನಾದ ಸೀಹೋನನ ಪಟ್ಟಣವಾಗಿತ್ತು; ಅವನು ಮೋವಾಬ್ಯರ ಪೂರ್ವದ ಅರಸನ ಸಂಗಡ ಯುದ್ಧಮಾಡಿ ಅವನ ಸಮಸ್ತ ದೇಶವನ್ನು ಅರ್ನೋನ್ ನದಿಯ ಪರ್ಯಂತರ ಅವನಿಂದ ವಶಪಡಿಸಿಕೊಂಡನು.
ರೂಬೇನನ ಮಕ್ಕಳು ಹೆಷ್ಬೋನ್, ಎಲೀಯಾಲೆ, ಕಿರ್ಯಾತಯಿಮ್,
ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ.
ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
ಹೆಷ್ಬೋನಿನ ಹೊಲ ಗಳೂ, ಸಿಬ್ಮದ ದ್ರಾಕ್ಷೆಯೂ ನಿಸ್ಸಾರವಾಗಿವೆ; ಅನ್ಯ ಜನಗಳ ಪ್ರಭುಗಳು ಅದರ ಮುಖ್ಯವಾದ ಗಿಡಗಳನ್ನು ಮುರಿದುಹಾಕಿದ್ದಾರೆ; ಅವರು ಯಜ್ಜೇರಿನ ವರೆಗೂ ಬಂದರು; ಅಡವಿಯಲ್ಲಿ ಅವರು ಸಂಚರಿಸಿದರು. ಅವಳ ಕೊಂಬೆಗಳು ಚಾಚಲ್ಪಟ್ಟವು ಅವರು ಸಮುದ್ರದ ಮೇಲೆ ಹೋದರು.
ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ದೇಶದ ಹಿರಿಯರಲ್ಲಿ ಕೆಲವರು ಎದ್ದು ಜನರ ಕೂಟ ಕ್ಕೆಲ್ಲಾ ಹೇಳಿದ್ದೇನಂದರೆ--
ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
ಎದೋಮು ಸಹ ಹಾಳಾಗುವದು; ಅದರ ಬಳಿಯಲ್ಲಿ ಹಾದು ಹೋಗುವವರೆಲ್ಲರೂ ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆವಿಾಯನಿಗೆ ಕರ್ತ ನಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು ಏನಂದರೆ--
ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.