ಅವರೆಲ್ಲರು ಘೋರವಾಗಿ ತಿರುಗಿ ಬೀಳುವವರೇ; ಚಾಡಿಕೋರರಾಗಿ ನಡೆಯುತ್ತಾರೆ; ಹಿತ್ತಾಳೆಯೂ ಕಬ್ಬಿಣವೂ ಆಗಿದ್ದಾರೆ; ಅವರೆಲ್ಲರೂ ಕೆಡಿಸುವವರೇ.
Cross references
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಕಳ್ಳರ ಗುಡಾರಗಳು ವೃದ್ಧಿಯಾ ಗುತ್ತವೆ; ದೇವರಿಗೆ ಕೋಪ ಎಬ್ಬಿಸುವವರಿಗೆ ಅಭಯ ಉಂಟು. ದೇವರು ಅವರ ಕೈಯಲ್ಲಿ ಸಮೃದ್ಧಿಯನ್ನು ಬರ ಮಾಡುತ್ತಾನೆ.
ತನ್ನ ಮುಖವನ್ನು ಕೊಬ್ಬಿನಿಂದ ಮುಚ್ಚಿಕೊಂಡು, ತನ್ನ ನಡುವಿನ ಮೇಲೆ ಬೊಜ್ಜನ್ನು ಕಟ್ಟಿಕೊಂಡಿದ್ದಾನೆ.
ಎಲ್ಲಾ ಶಾಂತವಾಗಿಯೂ ಸುಖವಾಗಿಯೂ ಇರು ವಾಗಲೇ ಒಬ್ಬನು ತನ್ನ ಬಲ ಸಂಪೂರ್ಣತ್ವದಲ್ಲಿ ಸಾಯುತ್ತಾನೆ.
ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು.
ಆತನು ಜನರಲ್ಲಿ ದೀನರಿಗೆ ನ್ಯಾಯತೀರಿಸುವನು; ಬಡವನ ಮಕ್ಕಳನ್ನು ರಕ್ಷಿಸುವನು; ಬಲಾತ್ಕಾರಿಯನ್ನು ಮುರಿದು ತುಂಡು ಮಾಡುವನು.
ಅವರ ಮರಣಕ್ಕೆ ಬಂಧನಗಳು ಇಲ್ಲ; ಅವರ ತ್ರಾಣವು ಸ್ಥಿರವಾಗಿದೆ.
ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ.
ಅವರ ಹೃದಯವು ಕೊಬ್ಬಿನ ಹಾಗೆ ಮಂದವಾಗಿದೆ; ನಾನು ನಿನ್ನ ನ್ಯಾಯಪ್ರಮಾಣದಲ್ಲಿ ಆನಂದಪಡುತ್ತೇನೆ.
ಕರ್ತನು ಗರ್ವಿಷ್ಟರ ಮನೆಯನ್ನು ಹಾಳುಮಾಡು ವನು; ವಿಧವೆಯರ ಮೇರೆಯನ್ನು ಆತನು ನೆಲೆಗೊಳಿಸು ವನು.
ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
ಪ್ರೀತಿಯನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಯಾಕೆ ಚಂದ ಮಾಡಿಕೊಳ್ಳುತ್ತೀ? ಕೆಟ್ಟ ಹೆಂಗಸರಿಗೂ ನಿನ್ನ ಮಾರ್ಗವನ್ನು ಕಲಿಸಿದ್ದೀ.
ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
ಆಕೆಯು (ಅದು) ಜನಾಂಗಗಳಿಗಿಂತ ಹೆಚ್ಚಾಗಿ ನನ್ನ ನ್ಯಾಯಗಳನ್ನೂ ಅದರ ಸುತ್ತಲಿರುವ ದೇಶಗಳಿಗಿಂತ ಹೆಚ್ಚಾಗಿ ನನ್ನ ನಿಯಮಗಳನ್ನೂ ದುಷ್ಟತ್ವಕ್ಕೆ ತಿರುಗಿಸಿ ಬಿಟ್ಟಳು. ಅವರು ನನ್ನ ನ್ಯಾಯಗಳನ್ನು ನಿಯಮಗಳನ್ನು ಅನುಸರಿಸದೆ ನಿರಾಕರಿಸಿದ್ದಾರೆ.
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ, ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ, ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
ಸಮಾರ್ಯದ ಬೆಟ್ಟದಲ್ಲಿರುವ ಬಾಷಾನಿನ ಹಸುಗಳೇ, ಬಡವರನ್ನು ಬಲಾತ್ಕಾರ ಮಾಡಿ, ದರಿದ್ರರನ್ನು ಜಜ್ಜಿ ತಮ್ಮ ಯಜಮಾನರಿಗೆ --ಪಾನವನ್ನು ತರಿಸಿರಿ, ಕುಡಿಯೋಣ ಎಂದು ಹೇಳು ವವರೇ, ಈ ವಾಕ್ಯವನ್ನು ಕೇಳಿರಿ.
ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
ನಿಮ್ಮಲ್ಲಿ ಜಾರತ್ವವಿದೆಯೆಂದು ಸಾಧಾರಣ ವಾಗಿ ಹೇಳಲ್ಪಟ್ಟಿದೆ; ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.
ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ.