ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
Cross references
ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು.
ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
ಆಗ ಯೆರೆವಿಾಯನು ಪ್ರಧಾನರೆಲ್ಲ ರಿಗೂ ಜನರೆಲ್ಲರಿಗೂ ಹೇಳಿದ್ದೇನಂದರೆ--ನೀವು ಕೇಳಿದ ವಾಕ್ಯಗಳನ್ನೆಲ್ಲಾ ಈ ಮನೆಗೆ ವಿರೋಧವಾ ಗಿಯೂ ಈ ಪಟ್ಟಣಕ್ಕೆ ವಿರೋಧವಾಗಿಯೂ ಪ್ರವಾದಿ ಸುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ.
ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.