ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
Cross references
ಆದದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಕರ್ತನ ಮುಂದೆ ಅರಿಕೆಮಾಡಿ, ಆತನ ಚಿತ್ತದ ಪ್ರಕಾರ ಮಾಡಿ, ಈ ದೇಶದ ಜನರಿಂದಲೂ ಅನ್ಯಸ್ತ್ರೀಯ ರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ ಅಂದನು.
ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನು ವೃದ್ಧಿಯಾಗನು; ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನು ಕರುಣೆ ಹೊಂದುವನು.
ನಿಮ್ಮನ್ನು ತೊಳೆದುಕೊಂಡು ಶುದ್ಧ ಮಾಡಿಕೊಳ್ಳಿರಿ; ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಟ ಕೃತ್ಯಗಳನ್ನು ತೆಗೆದುಹಾಕಿರಿ, ಕೆಟ್ಟದ್ದನ್ನು ನಿಲ್ಲಿಸಿಬಿಡಿರಿ;
ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ಯಾವ ಪ್ರಕಾರ ಒಬ್ಬನು ಕುಂಬಾರನ ಪಾತ್ರೆಯನ್ನು ಅದು ತಿರಿಗಿ ಒಂದುಗೂಡದ ಹಾಗೆ ಒಡೆಯುತ್ತಾನೋ ಅದೇ ಪ್ರಕಾರ ನಾನು ಈ ಜನವನ್ನೂ ಈ ಪಟ್ಟಣ ವನ್ನೂ ಒಡೆದು ಬಿಡುವೆನು; ಆಗ ಹೂಣಿಡುವದಕ್ಕೆ ಸ್ಥಳವಿಲ್ಲದೆ ತೋಫೆತಿನಲ್ಲಿ ಅವರು ಹೂಣಿಡುವರು.
ಬಾಬೆಲಿನ ಅರಸನಿಗೆ ಸೇವೆ ಮಾಡದ ಜನಾಂಗಕ್ಕೆ ವಿರೋಧವಾಗಿ ಕರ್ತನು ಮಾತ ನಾಡಿದ ಪ್ರಕಾರ--ನೀನೂ ನಿನ್ನ ಜನರೂ ಯಾಕೆ ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯುವಿರಿ?
ಆಗ ಅವರು ಅವನಿಗೆ--ಈಗ ಕೂತುಕೊಂಡು ನಮಗೆ ಓದಿ ಹೇಳು ಅಂದರು; ಆಗ ಬಾರೂಕನು ಅವರಿಗೆ ಓದಿ ಹೇಳಿದನು.
ಆಗ ಆದದ್ದೇನಂದರೆ--ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು--ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇ ವೆಂದು ಬಾರೂಕನಿಗೆ ಹೇಳಿದರು.
ಆದದರಿಂದ ಇಸ್ರಾಯೇಲಿನ ಮನೆತನದವರೇ, ನಿಮ್ಮ ನಿಮ್ಮ ಮಾರ್ಗಗಳ ಪ್ರಕಾರ ನ್ಯಾಯತೀರಿಸುವೆನಂದು ದೇವ ರಾದ ಕರ್ತನು ಹೇಳುತ್ತಾನೆ; ನಿಮ್ಮ ದುಷ್ಟತ್ವಗಳನ್ನೆಲ್ಲಾ ಬಿಟ್ಟು ತಿರುಗಿಕೊಂಡು ಪಶ್ಚಾತ್ತಾಪಪಡಿರಿ; ಆಗ ಅಕ್ರಮ ಗಳು ನಿಮ್ಮನ್ನು ಆಳುವದಿಲ್ಲ.
ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು.
ಹಾಗಾದರೆ ಮಾನಸಾಂತರಕ್ಕೆ ತಕ್ಕ ಫಲ ಗಳನ್ನು ಫಲಿಸಿರಿ;
ದೇವರ ಸವಿಾಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸವಿಾಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿ ಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.