Home Bibles ಯೆರೆಮಿಯ 7:8 · ಕನ್ನಡ ಬೈಬಲ್
ಯೆರೆಮಿಯ 7:8 · ಕನ್ನಡ ಬೈಬಲ್

ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ.

Cross references

ಯೆಶಾಯ 28:15

ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?

ಯೆಶಾಯ 30:10

ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.

ಯೆಶಾಯ 59:4

ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.

ಯೆರೆಮಿಯ 4:10

ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?

ಯೆರೆಮಿಯ 7:4

ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?

ಯೆರೆಮಿಯ 8:10

ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.

ಯೆರೆಮಿಯ 14:13

ನಿನ್ನ ಆಸ್ತಿಯನ್ನೂ ಬೊಕ್ಕಸಗಳನ್ನೂ ಎಲ್ಲಾ ಪ್ರಾಂತ್ಯಗಳಲ್ಲಿ ನಿನ್ನ ಎಲ್ಲಾ ಪಾಪಗಳ ನಿಮಿತ್ತ ಕ್ರಯವಿಲ್ಲದೆ ಕೊಳ್ಳೆಯಾಗಿ ಕೊಟ್ಟುಬಿಡುವೆನು.

ಯೆಹೆಜ್ಕೇಲ 13:6

ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ.

Interlinear

Choose Theme