ಅವರಿಗೂ ಅವರ ತಂದೆಗಳಿಗೂ ತಿಳಿಯದ ಅನ್ಯಜನಾಂಗಗಳಲ್ಲಿ ಅವರನ್ನು ಚದರಿಸುತ್ತೇನೆ; ಅವ ರನ್ನು ಮುಗಿಸಿ ಬಿಡುವ ವರೆಗೆ ಕತ್ತಿಯನ್ನು ಅವರ ಹಿಂದೆ ಕಳುಹಿಸುತ್ತೇನೆ.
Cross references
ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು.
ಅಲ್ಲಿ ಅವರು ಪಟ್ಟಣವನ್ನು ಕಟ್ಟಿ ಅದರಲ್ಲಿ ವಾಸವಾಗಿದ್ದರು. ಆದರೆ ಪಟ್ಟಣಕ್ಕೆ ಇಸ್ರಾಯೇಲಿಗೆ ಹುಟ್ಟಿದ ತಮ್ಮ ತಂದೆಯಾದ ದಾನನ ಹೆಸರಿನ ಹಾಗೆಯೇ ದಾನನು ಎಂದು ಹೆಸರಿಟ್ಟರು.
ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶನವು, ಹೊರಡುವದು.
ಆತನು ಸಮುದ್ರವನ್ನು ಗದರಿಸಿ ಅದನ್ನು ಒಣಗುವಂತೆ ಮಾಡುತ್ತಾನೆ; ನದಿಗಳನ್ನೆಲ್ಲಾ ಬತ್ತಿಹೋಗುವಂತೆ ಮಾಡುತ್ತಾನೆ; ಬಾಷಾನೂ ಕರ್ಮೆಲೂ ಬಾಡಿಹೋಗುತ್ತವೆ, ಲೆಬನೋನಿನ ಹೂವು ಬಾಡಿಹೋಗುತ್ತದೆ.
ಚಾವಟಿಗೆ ಚಬುಕಿನ ಶಬ್ದವೂ ಚಕ್ರಗಳ ಧಡಧಡನೆಯ ಶಬ್ದವೂ ಕುದುರೆಗಳ ಕುಣಿದಾಟವೂ ರಥಗಳ ಹಾರಾಟವೂ ಉಂಟು.
ಬೆಟ್ಟಗಳು ನಿನ್ನನ್ನು ನೋಡಿ ನಡುಗಿದವು; ಜಲ ಪ್ರವಾಹವು ಹಾದು ಹೋಯಿತು; ಅಗಾಧವು ತನ್ನ ಶಬ್ದವನ್ನು ಕೊಟ್ಟಿತು; ತನ್ನ ಕೈಗಳನ್ನು ಮೇಲಕ್ಕೆ ಎತ್ತಿ ಕೊಂಡಿತು.
ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?