Home Bibles ☰ Books ಯೆರೆಮಿಯ 8:2 · ಕನ್ನಡ ಬೈಬಲ್
ಯೆರೆಮಿಯ 8:2 · ಕನ್ನಡ ಬೈಬಲ್

ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.

Cross references

ದ್ವಿತೀಯೋಪದೇಶಕಾಂಡ 4:19

ನೀನು ನಿನ್ನ ಕಣ್ಣು ಗಳನ್ನು ಆಕಾಶದ ಕಡೆಗೆ ಎತ್ತಿ ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ ನಿನ್ನ ದೇವರಾದ ಕರ್ತನು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಹಂಚಿಕೊಟ್ಟ ಇವುಗಳಿಗೆ ಅಡ್ಡಬಿದ್ದು ಇವುಗಳನ್ನು ಸೇವಿಸುವದಕ್ಕೆ ನಡಿಸಲ್ಪಡದಂತೆಯೂ ನೋಡಿಕೊಳ್ಳಿರಿ.

ದ್ವಿತೀಯೋಪದೇಶಕಾಂಡ 17:3

ಸೂರ್ಯನನ್ನಾಗಲಿ, ಚಂದ್ರನನ್ನಾಗಲಿ, ಆಕಾಶದ ಎಲ್ಲಾ ಸೈನ್ಯವನ್ನಾಗಲಿ, ಬೇರೆ ದೇವರುಗಳನ್ನಾಗಲಿ ನನ್ನ ಆಜ್ಞೆಗೆ ವಿರೋಧವಾಗಿ ಸೇವಿಸಿ ಅವುಗಳಿಗೆ ಅಡ್ಡಬಿದ್ದ ಗಂಡಸಾದರೂ ಹೆಂಗಸಾದರೂ ನಿನ್ನ ದೇವ ರಾದ ಕರ್ತನು ನಿನಗೆ ಕೊಡುವ ನಿನ್ನ ಬಾಗಲುಗಳ ಒಂದರಲ್ಲಿ ನಿನ್ನ ಬಳಿಯಲ್ಲಿ ಸಿಕ್ಕಿದರೆ

2 ಅರಸುಗಳು 9:36

ಅದಕ್ಕವನುಕರ್ತನು ತನ್ನ ಸೇವಕನಾಗಿರುವ ತಿಷ್ಬೀಯನಾದ ಎಲೀ ಯನ ಮುಖಾಂತರ ಹೇಳಿದ ವಾಕ್ಯವು ಇದೇ--ಇಜ್ರೇಲಿನ ಹೊಲದಲ್ಲಿ ನಾಯಿಗಳು ಈಜೆಬೆಲಳ ಮಾಂಸವನ್ನು ತಿನ್ನುವವು.ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.

2 ಅರಸುಗಳು 9:37

ಇದಲ್ಲದೆ ಇದೇ ಈಜೆ ಬೆಲಳೆಂದು ಹೇಳಕೂಡದ ಹಾಗೆ ಇಜ್ರೇಲಿನ ಪಾಲಿನ ಹೊಲದ ಮೇಲ್ಭಾಗದಲ್ಲಿ ಈಜೆಬೆಲಳ ಹೆಣ ಗೊಬ್ಬರದ ಹಾಗೆ ಇರುವದು ಎಂಬದೇ.

2 ಅರಸುಗಳು 17:16

ಇದಲ್ಲದೆ ಅವರು ತಮ್ಮ ದೇವರಾದ ಕರ್ತನ ಎಲ್ಲಾ ಆಜ್ಞೆಗಳನ್ನು ಬಿಟ್ಟು ತಮಗೆ ತಾವೇ ಎರಕ ಹೊಯ್ದ ವಿಗ್ರಹಗಳಾದ ಎರಡು ಹೋರಿಗಳನ್ನು ಮಾಡಿಕೊಂಡು ವಿಗ್ರಹಗಳ ತೋಪನ್ನು ಮಾಡಿ ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು ಬಾಳನನ್ನು ಸೇವಿಸಿ

2 ಅರಸುಗಳು 21:3

ಅವನು ತನ್ನ ತಂದೆಯಾದ ಹಿಜ್ಕೀಯನು ನಾಶಮಾಡಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಉಂಟುಮಾಡಿ ಇಸ್ರಾಯೇಲಿನ ಅರಸನಾದ ಅಹಾಬನು ಮಾಡಿದ ಹಾಗೆ ವಿಗ್ರಹದ ತೋಪನ್ನು ಮಾಡಿ ಆಕಾಶದ ಎಲ್ಲಾ ಸೈನ್ಯಕ್ಕೆ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.

2 ಅರಸುಗಳು 21:5

ಕರ್ತನ ಮನೆಯ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.

2 ಅರಸುಗಳು 23:5

ಇದಲ್ಲದೆ ಯೆಹೂದದ ಪಟ್ಟಣಗಳಲ್ಲಿರುವ ಉನ್ನತ ಸ್ಥಳಗಳ ಲ್ಲಿಯೂ ಯೆರೂಸಲೇಮಿನ ಸುತ್ತಲಿರುವ ಉನ್ನತ ಸ್ಥಳಗಳಲ್ಲಿಯೂ ಧೂಪವನ್ನು ಸುಡಲು ಯೆಹೂದದ ಅರಸುಗಳು ನೇಮಿಸಿದ್ದ ಪೂಜಾರಿಗಳನ್ನೂ ಬಾಳನಿಗೂ ಸೂರ್ಯನಿಗೂ ಚಂದ್ರನಿಗೂ ಹನ್ನೆರಡು ರಾಶಿಗಳಿಗೂ ಆಕಾಶದ ಎಲ್ಲಾ ಸೈನ್ಯಕ್ಕೂ ಧೂಪಸುಡುವವರಾರೂ ಇರದ ಹಾಗೆ ಮಾಡಿದನು.

2 ದಿನವೃತ್ತಾಂತ 33:3

ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.

ಕೀರ್ತನೆಗಳು 83:10

ಇವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.

ಕೀರ್ತನೆಗಳು 83:11

ಅವರನ್ನೂ ಅವರ ಅಧಿಪತಿಗಳನ್ನೂ ಓರೇಬ್‌ ಜೇಬ್‌ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೇಬಹ ಚಲ್ಮುನ್ನರ ಹಾಗೆಯೂ ಮಾಡು.

ಸಭಾಪ್ರಸಂಗಿ 6:3

ತನ್ನ ವರುಷಗಳ ದಿನಗಳು ಬಹಳವಾಗಿದ್ದು ತನ್ನ ಪ್ರಾಣವು ಸುಖದಿಂದ ತೃಪ್ತಿ ಪಡದೆ ತನಗೆ ಹೂಣಿಡುವಿಕೆಯು ಇಲ್ಲದೇ ಅವನು ನೂರು ಮಕ್ಕಳನ್ನು ಪಡೆದು ಅನೇಕ ವರುಷಗಳು ಬದುಕಿದರೆ ನಾನು ಹೇಳುವದೇನಂದರೆ, ಅವನಿ ಗಿಂತಲೂ ಇನ್ನು ಹುಟ್ಟದಿರುವವನೇ ಉತ್ತಮ.

ಯೆರೆಮಿಯ 9:20

ನನ್ನ ಗುಡಾರವು ಸೂರೆಯಾಯಿತು; ನನ್ನ ಹಗ್ಗಗಳೆಲ್ಲಾ ಹರಿದಿವೆ; ನನ್ನ ಮಕ್ಕಳು ನನ್ನನ್ನು ಬಿಟ್ಟು ಹೋಗಿದ್ದಾರೆ, ಅವರು ಇಲ್ಲ; ಇನ್ನು ಮೇಲೆ ನನ್ನ ಡೇರೆಯನ್ನು ಹರಡುವದಕ್ಕೂ ನನ್ನ ಪರದೆಗಳನ್ನು ನಿಲ್ಲಿಸುವದಕ್ಕೂ ಒಬ್ಬನೂ ಇಲ್ಲ.

ಯೆರೆಮಿಯ 9:21

ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

ಯೆರೆಮಿಯ 9:22

ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವದಕ್ಕೂ ಘಟಸರ್ಪದ ಗುಹೆಯನ್ನಾಗಿ ಮಾಡು ವದಕ್ಕೂ ಸುದ್ದಿಯ ಶಬ್ದವೂ ಉತ್ತರ ದೇಶದಿಂದ ಮಹಾ ಗಲಭೆಯೂ ಬರುತ್ತದೆ.

ಯೆರೆಮಿಯ 16:4

ಆಗ ನಾನು ನಿನಗೆ ಕೊಟ್ಟ ಸ್ವಾಸ್ತ್ಯವನ್ನು ನಿನ್ನಷ್ಟಕ್ಕೆ ನೀನೇ ಬಿಟ್ಟು ಬಿಡುವಿ; ನಿನಗೆ ತಿಳಿಯದ ದೇಶದಲ್ಲಿ ನಿನ್ನ ಶತ್ರುಗಳನ್ನು ನೀನು ಸೇವಿಸುವಂತೆ ಮಾಡುವೆನು, ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು.

ಯೆರೆಮಿಯ 16:6

ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

ಯೆರೆಮಿಯ 19:13

ಕರ್ತನಿಗೆ ಹಾಡಿರಿ; ಕರ್ತನನ್ನು ಸ್ತುತಿ ಸಿರಿ; ಆತನು ಬಡವನ ಪ್ರಾಣವನ್ನು ಕೇಡು ಮಾಡುವ ವರ ಕೈಯಿಂದ ತಪ್ಪಿಸಿದ್ದಾನೆ.

Interlinear

Choose Theme