Home Bibles ಯೆರೆಮಿಯ 9:21 · ಕನ್ನಡ ಬೈಬಲ್
ಯೆರೆಮಿಯ 9:21 · ಕನ್ನಡ ಬೈಬಲ್

ಕುರುಬರು ಪಶು ಗಳಂತಾದರು; ಅವರು ಕರ್ತನನ್ನು ಹುಡುಕಲಿಲ್ಲ, ಆದದರಿಂದ ಅವರು ಸಫಲವಾಗುವದಿಲ್ಲ; ಅವರ ಮಂದೆಗಳೆಲ್ಲಾ ಚದರಿಸಲ್ಪಡುವವು.

Cross references

2 ದಿನವೃತ್ತಾಂತ 36:17

ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.

ಯೆರೆಮಿಯ 6:11

ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 8:2

ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.

ಯೆರೆಮಿಯ 15:7

ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ.

ಯೆಹೆಜ್ಕೇಲ 9:5

ಅದನ್ನು ನಾನು ಕೇಳುತ್ತಿರುವಾಗ ಇತರರಿಗೆ ಅವನು ಹೇಳಿದ್ದೇನಂದರೆ --ನೀವೂ ಅವನ ಹಿಂದೆ ಪಟ್ಟಣದಲ್ಲಿ ಹಾದು ಹೋಗಿ ಹೊಡೆಯಿರಿ; ನಿಮ್ಮ ಕಣ್ಣುಗಳು ಕನಿಕರಿಸದೆ ಇರಲಿ, ಕಟಾಕ್ಷಿಸದೆಯೂ ಇರಲಿ.

ಯೆಹೆಜ್ಕೇಲ 21:14

ಆದದರಿಂದ ಮನುಷ್ಯ ಪುತ್ರನೇ ನೀನು ಚಪ್ಪಾಳೆ ತಟ್ಟಿ ಪ್ರವಾದಿಸು; ಹತ ರಾದವರ ಕತ್ತಿಯು ಮೂರನೆಯ ಸಾರಿಯೂ ಎರಡ ರಷ್ಟು ಮಾಡಲಿ; ಅದು ತಮ್ಮ ರಹಸ್ಯ ಕೋಣೆಗಳಲ್ಲಿ ಪ್ರವೇಶಿಸಿ ಮಹಾ ಪ್ರಜೆಗಳನ್ನು ಸಂಹರಿಸಿದ ಕತ್ತಿಯೇ.

ಆಮೋಸ 5:2

ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.

ಆಮೋಸ 6:10

ಒಬ್ಬ ನೆಂಟನೂ ಅವನನ್ನು ಸುಡುವವನೂ ಮನೆಯೊಳಗಿಂದ ಅವನ ಎಲುಬುಗಳನ್ನು ತೆಗೆದುಕೊಂಡು ಹೋಗುವದಕ್ಕೆ ಅವ ನನ್ನು ಎತ್ತಿಕೊಳ್ಳುವಾಗ ಮನೆಯ ಒಳಭಾಗದಲ್ಲಿ ಇರುವ ವರಿಗೆ--ಇನ್ನೂ ಯಾರಾದರೂ ನಿನ್ನ ಬಳಿಯಲ್ಲಿ ಇದ್ದಾರೆಯೇ? ಎಂದು ಹೇಳುವನು; ಆಗ ಅವನು--ಯಾರೂ ಇಲ್ಲವೆಂದರೆ ಇವನು--ಸುಮ್ಮನಿರು, ನಾವು ಕರ್ತನ ಹೆಸರನ್ನು ಜ್ಞಾಪಕ ಮಾಡಿಕೊಳ್ಳಬಾರದೆಂದು ಹೇಳುವನು.

ಸೆಫನ್ಯ 1:17

ಆಗ ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು; ಅವರು ಕುರುಡರ ಹಾಗೆ ನಡೆಯುವರು; ಕರ್ತನಿಗೆ ವಿರೋಧವಾಗಿ ಅವರು ಪಾಪಮಾಡಿದ್ದಾರೆ; ಅವರ ರಕ್ತವು ದೂಳಿನಂತೆಯೂ ಅವರ ಮಾಂಸವು ಗೊಬ್ಬರ ದಂತೆಯೂ ಸುರಿಯಲ್ಪಡುವದು.ಕರ್ತನ ರೌದ್ರದ ದಿನದಲ್ಲಿ ಅವರ ಬೆಳ್ಳಿಯಾದರೂ ಅವರ ಬಂಗಾರ ವಾದರೂ ಅವರನ್ನು ತಪ್ಪಿಸಲಾರವು; ಆತನ ಕೋಪದ ಬೆಂಕಿಯು ದೇಶವನ್ನೆಲ್ಲಾ ನುಂಗುವದು.

Interlinear

Choose Theme