Home Bibles ಯೋಬ 1:2 · ಕನ್ನಡ ಬೈಬಲ್
ಯೋಬ 1:2 · ಕನ್ನಡ ಬೈಬಲ್

ಅವನಿಗೆ ಏಳುಮಂದಿ ಕುಮಾ ರರೂ ಮೂರು ಮಂದಿ ಕುಮಾರ್ತೆಯರೂ ಹುಟ್ಟಿ ದರು.

Cross references

ಎಸ್ತೇರ್ 5:11

ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.

ಯೋಬ 13:13

ಮೌನ ವಾಗಿರ್ರಿ; ನಾನು ಮಾತನಾಡುವದಕ್ಕೆ ನನ್ನನ್ನು ಬಿಡಿರಿ, ನನ್ನ ಮೇಲೆ ಏನಾದರೂ ಬರಲಿ.

ಯೋಬ 42:12

ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.

ಯೋಬ 42:13

ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.

ಕೀರ್ತನೆಗಳು 107:38

ಆತನು ಅವರನ್ನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚುತ್ತಾರೆ; ಅವರ ದನಗಳನ್ನು ಸಹ ಆತನು ಕಡಿಮೆ ಮಾಡುವದಿಲ್ಲ.

ಕೀರ್ತನೆಗಳು 127:3

ಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.

ಕೀರ್ತನೆಗಳು 128:3

ನಿನ್ನ ಹೆಂಡತಿಯು ನಿನ್ನ ಮನೆಯ ಪಕ್ಕದಲ್ಲಿರುವ ಫಲಭರಿತ ವಾದ ದ್ರಾಕ್ಷೇಗಿಡದ ಹಾಗೆಯೂ ನಿನ್ನ ಮೇಜಿನ ಸುತ್ತಲಿರುವ ನಿನ್ನ ಮಕ್ಕಳು ಎಣ್ಣೇಮರಗಳ ಸಸಿಗಳ ಹಾಗೆಯೂ ಇರುವರು.

Interlinear

Choose Theme