Home Bibles ಯೋಬ 10:21 · ಕನ್ನಡ ಬೈಬಲ್
ಯೋಬ 10:21 · ಕನ್ನಡ ಬೈಬಲ್

ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.

Cross references

2 ಸಮುವೇಲ 12:23

ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.

2 ಸಮುವೇಲ 14:14

ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.

ಯೋಬ 3:5

ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.

ಯೋಬ 3:13

ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.

ಯೋಬ 7:8

ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ.

ಯೋಬ 7:9

ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು.

ಯೋಬ 14:10

ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?

ಯೋಬ 16:22

ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.

ಯೋಬ 17:13

ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.

ಕೀರ್ತನೆಗಳು 23:4

ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.

ಕೀರ್ತನೆಗಳು 49:20

ಮನುಷ್ಯನು ಘನತೆಯಲ್ಲಿದ್ದು ವಿವೇಕ ವಿಲ್ಲದವನಾದರೆ ಮಡಿದು ಹೋಗುವ ಪಶುಗಳಿಗೆ ಸಮಾನನಾಗಿದ್ದಾನೆ.

ಕೀರ್ತನೆಗಳು 88:6

ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.

ಕೀರ್ತನೆಗಳು 88:11

ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ?

ಕೀರ್ತನೆಗಳು 88:13

ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು.

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಸಭಾಪ್ರಸಂಗಿ 11:8

ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.

ಯೆಶಾಯ 38:11

ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.

ಯೆರೆಮಿಯ 2:6

ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.

Interlinear

Choose Theme